Raw onion Benefits: ಪ್ರತಿಯೊಂದು ಭಾರತೀಯ ಅಡುಗೆಮನೆಯಲ್ಲಿ ಹಸಿ ಈರುಳ್ಳಿಯನ್ನು ಬಳಸಲಾಗುತ್ತದೆ. ಅದರ ವಿಶಿಷ್ಟ ರುಚಿ ಮತ್ತು ಪೌಷ್ಟಿಕಾಂಶದ ಗುಣಲಕ್ಷಣಗಳಿಂದಾಗಿ, ಸಾಮಾನ್ಯವಾಗಿ ಹಸಿ ಈರುಳ್ಳಿಯನ್ನು ಸಲಾಡ್‌’ನಂತೆ ತಿನ್ನುತ್ತಾರೆ. ಕೆಲವರಿಗೆ ಇದರ ಕಟುವಾದ ರುಚಿ ಮತ್ತು ಪರಿಮಳ ಇಷ್ಟವಾಗದಿದ್ದರೂ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸೂಪರ್ಮ್ಯಾನ್ ಥರ ಹಾರಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಪಡೆದ ಕ್ಯಾಮರೂನ್ ಗ್ರೀನ್: ವಿರಾಟ್ ಕೊಹ್ಲಿ ಫುಲ್ ಶಾಕ್! ಈ ವಿಡಿಯೋ ನೋಡಿ


ಬಿಳಿ ರಕ್ತ ಕಣಗಳ ರಚನೆ: ಹಸಿ ಈರುಳ್ಳಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರೊಂದಿಗೆ ಶೀತ ಮತ್ತು ಜ್ವರದಂತಹ ರೋಗಗಳನ್ನು ತಡೆಯಬಹುದು. ಆದ್ದರಿಂದ, ನಿಮ್ಮ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇರಿಸಿ, ಇದು ದೇಹದಲ್ಲಿ ಬಿಳಿ ರಕ್ತ ಕಣಗಳ ರಚನೆಗೆ ಸಹಾಯ ಮಾಡುತ್ತದೆ.


ಜೀರ್ಣಕ್ರಿಯೆಗೆ ಸಹಕಾರಿ: ಹಸಿ ಈರುಳ್ಳಿಯಲ್ಲಿ ಫೈಬರ್ ಸಮೃದ್ಧವಾಗಿದೆ. ಜೀರ್ಣಕ್ರಿಯೆಗೆ ಇದು ಅವಶ್ಯಕ. ದೇಹದಿಂದ ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಮಲಬದ್ಧತೆ ಮತ್ತು ಪೈಲ್ಸ್‌ನಂತಹ ಅನೇಕ ಕಾಯಿಲೆಗಳನ್ನು ತಪ್ಪಿಸಬಹುದು.


ಉರಿಯೂತ ನಿವಾರಕ ಗುಣ: ಹಸಿ ಈರುಳ್ಳಿ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ದೇಹದಲ್ಲಿನ ಉರಿಯೂತದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಸಂಧಿವಾತ, ಆಸ್ತಮಾ ಮತ್ತು ಬ್ರಾಂಕೈಟಿಸ್‌’ನಂತಹ ಪರಿಸ್ಥಿತಿಗಳನ್ನು ತಡೆಯುತ್ತದೆ.


ಮೂಳೆಗಳ ಆರೋಗ್ಯ: ಈರುಳ್ಳಿಯಲ್ಲಿ ಸಲ್ಫರ್ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ. ಇದು ಆಸ್ಟಿಯೊಪೊರೋಸಿಸ್ ಅಪಾಯವನ್ನು ತಡೆಯಲು ಸಹ ಸಹಾಯ ಮಾಡುತ್ತದೆ.


ಜ್ಞಾಪಕ ಶಕ್ತಿ: ಹಸಿ ಈರುಳ್ಳಿ ಸಲ್ಫರ್ ಸಂಯುಕ್ತಗಳನ್ನು ಹೊಂದಿರುತ್ತದೆ, ಇದು ಮೆದುಳಿಗೆ ಪ್ರಯೋಜನಕಾರಿಯಾಗಿದೆ. ಗಮನ ಮತ್ತು ಏಕಾಗ್ರತೆಯ ಮಟ್ಟವನ್ನು ಸುಧಾರಿಸುತ್ತದೆ.


ಬ್ಲಡ್ ಶುಗರ್ ನಿಯಂತ್ರಣ: ಹಸಿ ಈರುಳ್ಳಿ ಕ್ರೋಮಿಯಂ ಅನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಸಿ ಈರುಳ್ಳಿ ತಿನ್ನುವುದರಿಂದ ಮಧುಮೇಹ ಬರುವ ಅಪಾಯ ಕಡಿಮೆಯಾಗುತ್ತದೆ.


ಇದನ್ನೂ ಓದಿ:  ವಿರಾಟ್ ಔಟಾ? ನಾಟ್ಔಟಾ? ಮೋಸದಾಟಕ್ಕೆ ಬಲಿಯಾದ್ರಾ ಕೊಹ್ಲಿ? ವಿಷಯ ವಿಶ್ಲೇಷಿಸಿ ನೋಡಿದಾಗ ನಿಯಮಗಳು ಹೇಳೋದು ಏನು ಗೊತ್ತಾ?


(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.