Ghee and Cholesterol : ತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.  ತುಪ್ಪ ಸೇವನೆಯಿಂದ ಆರೋಗ್ಯಕ್ಕೆ ಅನೇಕ ರೀತಿಯ ಲಾಭವಾಗುವುದು. ತುಪ್ಪದಲ್ಲಿ ಅನೇಕ ರೀತಿಯ ವಿಟಮಿನ್‌ಗಳು, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಕಂಡು ಬರುತ್ತದೆ. ಇದರ ಜೊತೆಗೆ ಆರೋಗ್ಯಕರ ಕೊಬ್ಬು ಕೂಡಾ ತುಪ್ಪದಲ್ಲಿ ಇದೆ. ದೇಹಕ್ಕೆ ಶಕ್ತಿ ಸಿಗಬೇಕಾದರೆ ತುಪ್ಪ ತಿನ್ನಬೇಕು ಎಂದು ಹೇಳಲಾಗುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುವುದರಿಂದ ಹಿಡಿದು ಚರ್ಮ ಮತ್ತು ಕೂದಲಿನ ಸಮಸ್ಯೆಯನ್ನು ಕೂಡಾ ನಿವಾರಿಸುತ್ತದೆ.ಆದರೆ ಕೊಲೆಸ್ಟ್ರಾಲ್ ಸಮಸ್ಯೆ ಇದ್ದವರು ತುಪ್ಪವನ್ನು ಸೇವಿಸಬಹುದೇ ಎನ್ನುವ ಪ್ರಶ್ನೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ.ಇದಕ್ಕೆ ಉತ್ತರ ಇಲ್ಲಿದೆ. 


COMMERCIAL BREAK
SCROLL TO CONTINUE READING

ಆಯುರ್ವೇದದಲ್ಲಿ ಔಷಧವಾಗಿ ಬಳಕೆ :  
ತುಪ್ಪದಲ್ಲಿರುವ ಪೋಷಕಾಂಶಗಳು ಮತ್ತು ವಿಶಿಷ್ಟ ಗುಣಗಳಿಂದಾಗಿ ಇದನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಲಾಗುತ್ತದೆ.ತುಪ್ಪದಲ್ಲಿರುವ ಆರೋಗ್ಯಕರ ಕೊಬ್ಬು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ, ಜೀರ್ಣಕ್ರಿಯೆಯನ್ನು ಉತ್ತಮವಾಗಿಡಲು ಕೂಡಾ ಪ್ರಯೋಜನಕಾರಿಯಾಗಿದೆ. ತುಪ್ಪ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವುದರೊಂದಿಗೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.


ಇದನ್ನೂ ಓದಿ : ನಿಂಬೆ ಹಣ್ಣು ರಸಭರಿತವಾಗಿದೆಯೇ ಎನ್ನುವುದನ್ನು ಖರೀದಿ ಮಾಡುವ ಮುನ್ನ ಹೀಗೆ ತಿಳಿದುಕೊಳ್ಳಿ ! 


ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇದ್ದಾಗ ತುಪ್ಪವನ್ನು ತಿನ್ನಬಹುದೇ?:
ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಕೂಡಾ ತುಪ್ಪವನ್ನು ಸೇವಿಸಬಹುದು ಎಂದು ಹೇಳಲಾಗುತ್ತದೆ.ಆದರೆ,ಅಧಿಕ ಕೊಲೆಸ್ಟ್ರಾಲ್ ಇದ್ದಾಗ ತುಪ್ಪವನ್ನು ಸಮತೋಲಿತ ಪ್ರಮಾಣದಲ್ಲಿ ಸೇವಿಸಬೇಕು.ಅಧಿಕ ಕೊಲೆಸ್ಟ್ರಾಲ್‌ನಿಂದ ಬಳಲುತ್ತಿರುವವರು ದಿನಕ್ಕೆ 2 ರಿಂದ 3 ಚಮಚ ತುಪ್ಪವನ್ನು ಮಾತ್ರ ತಿನ್ನಬಹುದು. ಅದಕ್ಕಿಂತ ಹೆಚ್ಚು ತುಪ್ಪವನ್ನು ಸೇವಿಸಬಾರದು.ನಿಗದಿತ ಪ್ರಮಾಣದಲ್ಲಿ ತುಪ್ಪವನ್ನು ಸೇವಿಸುವುದರಿಂದ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡಾ ಕಾಪಾಡಬಹುದು. 


ದೇಹದಲ್ಲಿ 2 ವಿಧದ ಕೊಲೆಸ್ಟ್ರಾಲ್ ಗಳಿವೆ : 
ಮನುಷ್ಯನ ದೇಹದಲ್ಲಿ 2 ವಿಧದ ಕೊಲೆಸ್ಟ್ರಾಲ್ ಇರುತ್ತದೆ.ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್.ತಜ್ಞರ ಪ್ರಕಾರ,ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ (LDL),ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್ (HDL).ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಅಪಧಮನಿಗಳು ಬ್ಲಾಕ್ ಆಗುತ್ತವೆ ಮತ್ತು ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗುವುದಿಲ್ಲ.ಈ ಕಾರಣದಿಂದಾಗಿ, ಹೃದ್ರೋಗದ ಅಪಾಯವು ಹೆಚ್ಚಾಗುತ್ತದೆ.


ಇದನ್ನೂ ಓದಿ : ಮಧುಮೇಹವೂ ಸೇರಿದಂತೆ ಈ ರೋಗಗಳಿಗೆ ಶಾಶ್ವತ ಮುಕ್ತಿ ನೀಡುತ್ತದೆ ಈ ತರಕಾರಿಯ ಎಲೆ !


ಹಾಗಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ಎಚ್ಚರ ವಹಿಸಬೇಕು. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.