Causes of High Diabetes: ಮಧುಮೇಹವು ವೇಗವಾಗಿ ಬೆಳೆಯುತ್ತಿರುವ ಗಂಭೀರವಾದ ಕಾಯಿಲೆಯಾಗಿದೆ. ಇದಕ್ಕೆ ಶಾಶ್ವತ ಚಿಕಿತ್ಸೆಯೂ ಇಲ್ಲ ಎಂಬುದು ಇನ್ನಷ್ಟು ಭಯ ಮೂಡಿಸುವ ವಿಷಯ. ಉತ್ತಮ ಆಹಾರ ಮತ್ತು ವ್ಯಾಯಾಮದಿಂದ ಮಾತ್ರ ಮಧುಮೇಹವನ್ನು ನಿಯಂತ್ರಿಸಬಹುದು. ಇದು ರೋಗಿಯ ರಕ್ತದಲ್ಲಿನ ಸಕ್ಕರೆಯ ಮಟ್ಟವು ಅನಿಯಂತ್ರಿತ ರೀತಿಯಲ್ಲಿ ಹೆಚ್ಚಾಗುವ ಕಾಯಿಲೆಯಾಗಿದ್ದು, ಇದು ಅನೇಕ ಗಂಭೀರ ಮತ್ತು ಮಾರಣಾಂತಿಕ ರೋಗಲಕ್ಷಣಗಳನ್ನು ಹೊಂದಿದೆ.


COMMERCIAL BREAK
SCROLL TO CONTINUE READING

ಮಧುಮೇಹ ರೋಗಿಗಳಿಗೆ ಸಾಮಾನ್ಯ ಜೀವನವನ್ನು ನಡೆಸಲು ಸಹಾಯ ಮಾಡಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತಜ್ಞರು ಸಲಹೆ ನೀಡುತ್ತಾರೆ. ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.


ಇದನ್ನೂ ಓದಿ: Benefits Of Dragon Fruit: ಬೊಜ್ಜು ಇಳಿಸುವುದು ಮಾತ್ರವಲ್ಲ, ಮಧುಮೇಹವನ್ನೂ ನಿಯಂತ್ರಣದಲ್ಲಿಡುತ್ತೆ ಈ ಗುಲಾಬಿ ಬಣ್ಣದ ಹಣ್ಣು


ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಯಾವ ಆಹಾರಗಳು, ಪಾನೀಯಗಳು ಮತ್ತು ಅಭ್ಯಾಸಗಳು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತವೆ ಎಂಬುದರ ಬಗ್ಗೆ ಗಮನ ಹರಿಸಬೇಕು. ಹೆಚ್ಚು ಸಕ್ಕರೆ ತಿನ್ನುವುದು ಅಥವಾ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಿರುವುದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸಲು ಕಾರಣವೆಂದು ಹೇಳಲಾಗುತ್ತದೆ.


ಬೆಳಗಿನ ಉಪಾಹಾರವು ದಿನದ ಪ್ರಮುಖ ಊಟವಾಗಿದೆ. ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಪ್ರಕಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟಕ್ಕಿಂತಲೂ ಬೆಳಗಿನ ಆಹಾರ ಪ್ರಮುಖವಾಗಿದ್ದು, ಒಂದು ವೇಳೆ ಬೆಳಗ್ಗಿನ ಉಪಹಾರ ಸೇವಿಸದಿದ್ದಲ್ಲಿ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಬಹುದು.


ಬಿಸಿಲಿನಲ್ಲಿ ಹೆಚ್ಚು ಹೊತ್ತು ಕುಳಿತರೂ ಕೂಡ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಹುದು. ಇನ್ನು ಅನೇಕ ಜನರು ಬೆಳಿಗ್ಗೆ ಕಾಫಿ ಕುಡಿಯಲು ಇಷ್ಟಪಡುತ್ತಾರೆ. ಆದರೆ ಮಧುಮೇಹಿಗಳಿಗೆ ಕಾಫಿ ಒಳ್ಳೆಯದಲ್ಲ. ಕಾಫಿಯಲ್ಲಿರುವ ಕೆಫೀನ್ ಕೆಲವು ಜನರಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತದೆ ಎಂದು ಸಿಡಿಸಿ ಸಂಸ್ಥೆ ಹೇಳುತ್ತದೆ.


ಆರೋಗ್ಯಕರ ದೇಹ ಮತ್ತು ಮನಸ್ಸಿಗೆ ಸಾಕಷ್ಟು ನಿದ್ರೆ ಅತ್ಯಗತ್ಯ. ಕೇವಲ ಒಂದು ರಾತ್ರಿಯ ನಿದ್ರೆಯ ಕೊರತೆಯು ನಿಮ್ಮ ದೇಹದಲ್ಲಿ ಇನ್ಸುಲಿನ್ ಅನ್ನು ನಿಷ್ಪರಿಣಾಮಕಾರಿಯಾಗಿ ಬಳಸುವಂತೆ ಮಾಡುತ್ತದೆ.


ಜರ್ನಲ್ ಆಫ್ ಅಮೇರಿಕನ್ ಡೆಂಟಲ್ ಅಸೋಸಿಯೇಷನ್ ​​(JADA) ನಲ್ಲಿನ ಲೇಖನದ ಪ್ರಕಾರ, ಒಸಡು ಕಾಯಿಲೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಒಸಡು ಕಾಯಿಲೆಯು ಅದರ ತೀವ್ರವಾದ ರೂಪದಲ್ಲಿ 'ಪೆರಿಯೊಡಾಂಟಿಟಿಸ್' ಎಂದು ಕರೆಯಲ್ಪಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತದೆ.


ಇನ್ನು ದೇಹದಲ್ಲಿ ನೀರಿನ ಕೊರತೆಯು ಕಂಡುಬಂದರೆ, ರಕ್ತದಲ್ಲಿನ ಸಕ್ಕರೆ ಮಟ್ಟದ ಹೆಚ್ಚಳಕ್ಕೆ ಕಾರಣವಾಗಬಹುದು. ಇದು ಹೈಪರ್ಗ್ಲೈಸೀಮಿಯಾಕ್ಕೆ ಕಾರಣವಾಗಬಹುದು. ಅಧಿಕ ರಕ್ತದ ಸಕ್ಕರೆ ಮಟ್ಟವು ಆಗಾಗ್ಗೆ ಮೂತ್ರ ವಿಸರ್ಜನೆಗೆ ಕಾರಣವಾಗುತ್ತದೆ.


ಸಹಜವಾಗಿ ಇದು ಸಕ್ಕರೆ ಮಟ್ಟಗಿಂತ ಉತ್ತಮ ಆಯ್ಕೆಯಾಗಿದೆ ಎಂದು ಕೃತಕ ಸಿಹಿಕಾರಕವನ್ನು ಸೇವನೆ ಮಾಡುತ್ತಾರೆ. ಆದರೆ ಅದು ಮಧುಮೇಹ ಇರುವವರಿಗೆ ಅಲ್ಲ. ಈ ವಸ್ತುಗಳು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸಬಹುದು ಎಂದು ಕೆಲವು ಅಧ್ಯಯನಗಳು ತೋರಿಸಿವೆ ಎಂದು ಸಿಡಿಸಿ ಹೇಳುತ್ತದೆ.


ಇದನ್ನೂ ಓದಿ: Sweet Potatoes For Weight Loss: ತೂಕ ಇಳಿಕೆಗಾಗಿ ಸಿಹಿ ಗೆಣಸನ್ನು ಈ ರೀತಿ ಸೇವಿಸಿ


(ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಹೆಚ್ಚಿನ ವಿವರಗಳಿಗಾಗಿ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ)


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.