ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವು ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ
ಕರಿಬೇವಿನ ಎಲೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿರಬಹುದು. ಆದರೆ, ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಸೊಪ್ಪಿನ ಸೇವನೆ ಎಷ್ಟು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
ಆರೋಗ್ಯದ ನಿಧಿ ಕರಿಬೇವಿನ ಸೊಪ್ಪು: ಭಾರತೀಯ ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಬಳಸಲಾಗುವ ಸೊಪ್ಪು ಎಂದರೆ ಅದು ಕರಿಬೇವು. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳು ಕರಿಬೇವಿನ ಎಲೆಗಳಿಲ್ಲದೆ ಅಪೂರ್ಣ ಎಂದೆನಿಸುತ್ತವೆ. ಕರಿಬೇವಿನ ಸೊಪ್ಪು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ, ಇದು ಆರೋಗ್ಯಕ್ಕೂ ಕೂಡ ಅಮೃತವಿದ್ದಂತೆ ಎಂದು ನಿಮಗೆ ತಿಳಿದಿದೆಯೇ? ಈ ಲೇಖನದಲ್ಲಿ ಕರಿಬೇವಿನ ಎಲೆಗಳ ಪ್ರಯೋಜನಗಳ ಬಗ್ಗೆ ತಿಳಿಯೋಣ...
ಕರಿಬೇವಿನ ಸೊಪ್ಪು ಆರೋಗ್ಯಕ್ಕೆ ಅಮೃತವಿದ್ದಂತೆ :
ಕರಿಬೇವಿನ ಎಲೆಗಳಲ್ಲಿ ರಂಜಕ, ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ವಿಟಮಿನ್‌ಗಳು ಮತ್ತು ಮೆಗ್ನೀಸಿಯಮ್‌ನಂತಹ ಪೋಷಕಾಂಶಗಳು ಕಂಡು ಬರುತ್ತವೆ. ಇದು ದೇಹಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 3 ರಿಂದ 4 ಕರಿಬೇವಿನ ಎಲೆಗಳನ್ನು ಅಗಿದು ಸೇವಿಸುವುದು ತುಂಬಾ ಪ್ರಯೋಜನಕಾರಿ ಆಗಿದೆ.
ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಆಗುವ ಅದ್ಭುತ ಪ್ರಯೋಜನಗಳು:
* ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ:
ಕರಿಬೇವು ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಇರುಳುಗುರುಡುತನ ಸೇರಿದಂತೆ ಕಣ್ಣುಗಳಿಗೆ ಸಂಬಂಧಿಸಿದ ಇತರ ಅನೇಕ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು. ಕರಬೇವಿನ ಸೊಪ್ಪಿನಲ್ಲಿ ವಿಟಮಿನ್ ಎ ಪೋಷಕಾಂಶವು ಕಂಡು ಬರುತ್ತದೆ. ಇದು ಕಣ್ಣಿನ ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ- ತ್ವಚೆಯ ಸೌಂದರ್ಯ ಹೆಚ್ಚಿಸಲು ದಾಳಿಂಬೆ ಸಿಪ್ಪೆಯನ್ನು ಈ ರೀತಿ ಬಳಸಿ
* ಮಧುಮೆಹದಲ್ಲಿ ಪ್ರಯೋಜನಕಾರಿ:
ಕರಿಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹೈಪೊಗ್ಲಿಸಿಮಿಕ್ ಗುಣಲಕ್ಷಣಗಳನ್ನು ಹೊಂದಿವೆ. ಹಾಗಾಗಿ ಇವು ಡಯಾಬಿಟಿಸ್ ಸಮಸ್ಯೆ ಇರುವವರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
* ಜೀರ್ಣಕ್ರಿಯೆ ಸುಧಾರಿಸಲು:
ಕರಿಬೇವಿನ ಎಲೆಗಳನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಗಿಯುವುದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿ ಆಗಿದೆ. ಇದು ಮಲಬದ್ಧತೆ, ಆಮ್ಲೀಯತೆ, ಉಬ್ಬುವುದು ಸೇರಿದಂತೆ ಎಲ್ಲಾ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಇದನ್ನೂ ಓದಿ- ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಪರಿಹಾರ ಪಡೆಯಲು ನೈಸರ್ಗಿಕ ವಿಧಾನಗಳಿವು
* ಸೋಂಕು ನಿವಾರಣೆ:
ಕರಿಬೇವಿನ ಎಲೆಗಳಲ್ಲಿ ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳು ಕಂಡುಬರುತ್ತವೆ. ಇದು ಅನೇಕ ರೀತಿಯ ಸೋಂಕುಗಳನ್ನು ತಡೆಯುತ್ತದೆ ಮತ್ತು ರೋಗಗಳ ಅಪಾಯವನ್ನು ತಪ್ಪಿಸುತ್ತದೆ.
* ತೂಕ ಇಳಿಸಲು:
ಕರಿಬೇವಿನ ಎಲೆಗಳಲ್ಲಿ ಈಥೈಲ್ ಅಸಿಟೇಟ್, ಮಹಾನಿಂಬಿನ್ ಮತ್ತು ಡೈಕ್ಲೋರೋಮೆಥೇನ್ ನಂತಹ ಪೋಷಕಾಂಶಗಳಿವೆ. ಕರಿಬೇವಿನ ಎಲೆಗಳನ್ನು ಜಗಿಯುವುದು ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.