Cholesterol Reduce Tips: ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸರಳ ಮನೆಮದ್ದು

Cholesterol Reduce Tips: ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದು ಸಾಮಾನ್ಯವಾಗುತ್ತಿದೆ. ಇದರಿಂದ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ.  

Written by - Yashaswini V | Last Updated : May 11, 2022, 01:15 PM IST
  • ಕೊಲೆಸ್ಟ್ರಾಲ್ ಕಡಿಮೆ ಸರಳ ಮನೆಮದ್ದುಗಳು ಸಹಕಾರಿ
  • ಬೆಳ್ಳುಳ್ಳಿ ದೇಹದಲ್ಲಿ ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ
  • ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಗ್ರೀನ್ ಟೀ ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತದೆ
Cholesterol Reduce Tips: ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸರಳ ಮನೆಮದ್ದು  title=
Cholesterol Reduce Tips

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಲಹೆಗಳು: ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ದೇಹದಲ್ಲಿ ಕೊಲೆಸ್ಟ್ರಾಲ್ ಹದಗೆಡುವುದು ಸಾಮಾನ್ಯವಾಗುತ್ತಿದೆ. ಇದರಿಂದಾಗಿ ಹೃದಯದ ಆರೋಗ್ಯವೂ ಕಾಳಜಿಯ ವಿಷಯವಾಗಿದೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ, ಹೃದಯಾಘಾತದ ಅಪಾಯವೂ ಹೆಚ್ಚಾಗುತ್ತದೆ. ಈ ಪರಿಸ್ಥಿತಿಯನ್ನು ತಪ್ಪಿಸಲು, ನಿಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕು, ಇಲ್ಲದಿದ್ದರೆ ಸಣ್ಣ ಸಮಸ್ಯೆಗಳು ಭವಿಷ್ಯದಲ್ಲಿ ತೊಂದರೆಗಳನ್ನು ಉಂಟುಮಾಡಬಹುದು. 

ಉತ್ತಮ ಆರೋಗ್ಯಕ್ಕೆ ಕೊಲೆಸ್ಟ್ರಾಲ್ ಕೂಡ ಅಗತ್ಯ. ವಾಸ್ತವವಾಗಿ, ಎರಡು ರೀತಿಯ ಕೊಲೆಸ್ಟ್ರಾಲ್ ಇದೆ ಎಂದು ಎಲ್ಲರಿಗೂ ತಿಳಿದಿದೆ. ಮೊದಲನೆಯದು  ಒಳ್ಳೆಯ ಕೊಲೆಸ್ಟ್ರಾಲ್, ಎರಡನೆಯದು ಕೆಟ್ಟ ಕೊಲೆಸ್ಟ್ರಾಲ್. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಹಾಗಾದರೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದು ಹೇಗೆ? ಯಾವ ಸಲಹೆಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದನ್ನು ತಿಳಿಯೋಣ....

ದೇಹದಲ್ಲಿ ಅನಾರೋಗ್ಯಕರ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇವುಗಳನ್ನು ತಪ್ಪದೇ ಬಳಸಿ:
1. ಬೆಳ್ಳುಳ್ಳಿಯನ್ನು ಆಹಾರದಲ್ಲಿ ಸೇರಿಸಿ:

ನಿಮ್ಮ ಅಡುಗೆಮನೆಯಲ್ಲಿರುವ ಬೆಳ್ಳುಳ್ಳಿ ನಿಮಗೆ ತುಂಬಾ ಉಪಯುಕ್ತವಾಗಿದೆ ಎಂದು ನಿಮಗೆ ತಿಳಿದಿದೆಯೇ? ಇದನ್ನು ತಿನ್ನುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಸಮತೋಲನದಲ್ಲಿರುತ್ತದೆ. ಮುಖ್ಯವಾಗಿ ಬೆಳ್ಳುಳ್ಳಿ ದೇಹದಲ್ಲಿ ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ. 

ಇದನ್ನೂ ಓದಿ- Weight Loss: ದೇಹದ ತೂಕ ಇಳಿಸಲು ದಕ್ಷಿಣ ಭಾರತದ ಆಹಾರ ಪದ್ಧತಿ ಸೂಕ್ತವಂತೆ..!

2. ಗ್ರೀನ್-ಟೀ ಸಹ ಸಹಾಯ ಮಾಡುತ್ತದೆ:
ಗ್ರೀನ್-ಟೀ ತೂಕವನ್ನು ಕಡಿಮೆ ಮಾಡುವುದರ ಜೊತೆಗೆ,  ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಕೆಲವೇ ಜನರಿಗೆ ತಿಳಿದಿದೆ. ನೀವು ನಿಮ್ಮ ಡಯಟ್ ನಲ್ಲಿ ಗ್ರೀನ್-ಟೀ ಸೇರಿಸುವುದರಿಂದ ಉತ್ತಮ ಆರೋಗ್ಯ ನಿಮ್ಮದಾಗಬಹುದು.

3. ಅರಿಶಿನದ ಹಾಲು:
ಅರಿಶಿನದೊಂದಿಗೆ ಹಾಲು ಅನೇಕ ರೋಗಗಳಿಂದ ನಿಮ್ಮನ್ನು ದೂರವಿಡುತ್ತದೆ. ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುವವರಿಗೆ ಅರಿಶಿನ ಹಾಲು ಉತ್ತಮ ಪರಿಹಾರ ಎಂದು ಸಾಬೀತು ಪಡಿಸಬಹುದು. ಹಾಗಾಗಿ, ಉತ್ತಮ ಆರೋಗ್ಯಕ್ಕಾಗಿ ಜನರು ತಮ್ಮ ಆಹಾರದಲ್ಲಿ ಅರಿಶಿನ ಹಾಲನ್ನು ಖಂಡಿತವಾಗಿ ಸೇರಿಸಿಕೊಳ್ಳಬೇಕು.  ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು ಮಾತ್ರವಲ್ಲ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ  ಸುಲಭವಾಗಿ ನಿಯಂತ್ರಿಸಬಹುದು. 

ಇದನ್ನೂ ಓದಿ- Skin Care: ಮುಖಕ್ಕೆ ಅರಿಶಿನ ಹಚ್ಚುವುದರಿಂದ ಸಿಗುತ್ತೆ ಈ ಅದ್ಭುತ ಪ್ರಯೋಜನ

4. ಅಗಸೆ ಬೀಜಗಳು :
ಅಗಸೆ ಬೀಜಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ ಎಂದು ಕೆಲವೇ ಜನರಿಗೆ ತಿಳಿದಿದೆ. ವಾಸ್ತವವಾಗಿ, ಅಗಸೆ ಬೀಜಗಳು ಒಮೆಗಾ 3 ಕೊಬ್ಬಿನಾಮ್ಲಗಳು ಮತ್ತು ಲಿನೋಲೆನಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ನೇರವಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಆಕ್ರಮಣ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News