Home Remedies For Bad Cholesterol : ಇತ್ತೀಚಿನ ದಿನಗಳಲ್ಲಿ ಜನರು ತಾವು ಅನುಸರಿಸುತ್ತಿರುವ ಆಹಾರ ಪದ್ಧತಿ ಮತ್ತು ಕೆಟ್ಟ ಜೀವನಶೈಲಿಯಿಂದ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇವುಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯೂ ಸೇರಿದೆ. ನಮ್ಮ ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಕಂಡುಬರುತ್ತದೆ. ಒಂದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಇನ್ನೊಂದು ಕೆಟ್ಟ ಕೊಲೆಸ್ಟ್ರಾಲ್. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದು ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ. ಈ ಕಾರಣದಿಂದಾಗಿ, ಅಧಿಕ ರಕ್ತದೊತ್ತಡ, ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಗಂಭೀರ ಕಾಯಿಲೆಗಳ ಅಪಾಯ ಕೂಡಾ ಹೆಚ್ಚಾಗುತ್ತದೆ. ಹೀಗಾದಾಗ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಔಷಧಗಳು ಮತ್ತು ಸರಿಯಾದ ಆಹಾರ ಪದ್ಧತಿಗಳ ಸಹಾಯದಿಂದ, ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಸಾಧ್ಯವಾಗುತ್ತದೆ.  


COMMERCIAL BREAK
SCROLL TO CONTINUE READING

ಕೆಲವು ಮನೆಮದ್ದುಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಮ್ಮ ಅಡುಗೆಮನೆಯಲ್ಲಿ ಇರಿಸಲಾಗಿರುವ ಕೆಲವು ಮಸಾಲೆಗಳು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಈ ಮಸಾಲೆಗಳಲ್ಲಿ ಮುಖ್ಯವಾದುದು ಚಕ್ಕೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಚಕ್ಕೆ ಒಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದರೆ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬೇಕಾದರೆ ಚಕ್ಕೆಯನ್ನು ಸೇವಿಸುವ ವಿಧಾನ ಯಾವುದು ನೋಡೋಣ.


ಇದನ್ನೂ ಓದಿ :  Weight Loss: 40 ವರ್ಷಗಳ ನಂತರ ತೂಕ ಕಳೆದುಕೊಳ್ಳುವುದು ಕಷ್ಟ ಏಕೆ ಗೊತ್ತೇ ? 


ಚಕ್ಕೆ ಕೊಲೆಸ್ಟ್ರಾಲ್ ಅನ್ನು ಹೇಗೆ ಕಡಿಮೆ ಮಾಡುತ್ತದೆ? : 
ಚಕ್ಕೆಯನ್ನು ಭಾರತೀಯ ಮನೆಗಳಲ್ಲಿ ಮಸಾಲೆಯಾಗಿ ಬಳಸಲಾಗುತ್ತದೆ.ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ.ಉತ್ಕರ್ಷಣ ನಿರೋಧಕಗಳಲ್ಲಿಯೂ ಸಮೃದ್ಧವಾಗಿದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ, ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರ ಸೇವನೆಯು ದೇಹದಲ್ಲಿನ ಒಟ್ಟು ಕೊಲೆಸ್ಟ್ರಾಲ್, ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್‌ಗಳ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ದೇಹದಲ್ಲಿನ ಊತವನ್ನು ಕಡಿಮೆ ಮಾಡುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. 


ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಚಕ್ಕೆಯನ್ನು ಸೇವಿಸುವುದು ಹೇಗೆ? : 
ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಚಕ್ಕೆ ಚಹಾವನ್ನು ಸೇವಿಸಬಹುದು. ಇದಕ್ಕಾಗಿ, ಒಂದು ಲೋಟ ನೀರನ್ನು ಬಿಸಿ ಮಾಡಿಕೊಳ್ಳಬೇಕು. ನಂತರ ಅದರಲ್ಲಿ ಒಂದು ಅಥವಾ ಎರಡು ಚಕ್ಕೆ ತುಂಡುಗಳು ಅಥವಾ ಒಂದು ಚಮಚ  ಚಕ್ಕೆ  ಪುಡಿಯನ್ನು ಸೇರಿಸಿ ಸುಮಾರು 5 ನಿಮಿಷಗಳವರೆಗೆ ಚೆನ್ನಾಗಿ ಕುದಿಸಿ.ನಂತರ ಅದನ್ನು ಶೋಧಿಸಿ ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ಸೇವಿಸಿ. ಇದನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಇದಲ್ಲದೆ, ರಕ್ತದಲ್ಲಿನ ಸಕ್ಕರೆಯ ಮಟ್ಟ ಮತ್ತು ತೂಕವನ್ನು ನಿಯಂತ್ರಿಸುವಲ್ಲಿಯೂ ಸಹಾಯ ಮಾಡುತ್ತದೆ. 


ಇದನ್ನೂ ಓದಿ : Coconut Chutney Health Benefits: ತೂಕ ಇಳಿದೇ ಸೇರಿದಂತೆ ಹೈ ಬಿಪಿ ನಿಯಂತ್ರಣಕ್ಕೆ ರಾಮಬಾಣ ಈ ಚಟ್ನಿ!


ಚಕ್ಕೆ ಸೇವನೆಯು ದೇಹದಲ್ಲಿ ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಆದರೆ ಇದನ್ನು ಯಾವಾಗಲೂ ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು ಎನ್ನುವುದನ್ನು ಕೂಡಾ ನೆನಪಿನಲ್ಲಿ ಇಡಬೇಕು. ಯಾವುದೇ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರೆ, ಚಕ್ಕೆಯನ್ನು ಸೇವಿಸುವ ಮೊದಲು ಖಂಡಿತವಾಗಿಯೂ ತಜ್ಞರ ಸಲಹೆಯನ್ನು ತೆಗೆದುಕೊಳ್ಳಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.