Effects of drinking cinnamon milk at night : ಅನೇಕ ಜನರು ರಾತ್ರಿ ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲನ್ನು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ರಾತ್ರಿ ವೇಳೆ ಬಿಸಿ ಹಾಲನ್ನು ಕುಡಿಯುವುದರಿಂದ ಶಾಂತ ನಿದ್ರೆ ನಿಮ್ಮದಾಗುವುದು. ಹಾಲಿನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಪೋಷಕ ತತ್ವಗಳು ಅಡಗಿವೆ. ಈ ಹಾಲನ್ನು ಇನ್ನಷ್ಟು ಪೌಷ್ಟಿಕವಾಗಿಸಲು  ವಿವಿಧ ರೀತಿಯ ಗಿಡಮೂಲಿಕೆಗಳನ್ನು ಹಾಲಿಗೆ ಸೇರಿಸಲಾಗುತ್ತದೆ.ಇಂಥಹ ಒಂದು ಪರಿಣಾಮಕಾರಿ ಗಿಡ ಮೂಲಿಕೆ ಎಂದರೆ ಚಕ್ಕೆ. ಚಕ್ಕೆ ಬೆರೆಸಿದ ಹಾಲನ್ನು ಕುಡಿಯುವುದರಿಂದ  ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಸಿಗುತ್ತವೆ.


COMMERCIAL BREAK
SCROLL TO CONTINUE READING

ಚಕ್ಕೆ ಬೆರೆಸಿದ ಹಾಲು ಕುಡಿದರೆ ಏನಾಗುತ್ತದೆ?: 
ಚಕ್ಕೆ ಮೂಲತಃ ಬಿಸಿ ಸ್ವಭಾವವನ್ನು ಹೊಂದಿರುತ್ತದೆ. ಇದು ಚಳಿಗಾಲದಲ್ಲಿ ದೇಹವನ್ನು ಶೀತದಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಕ್ಯಾಲ್ಸಿಯಂ, ವಿಟಮಿನ್ ಎ, ಮೆಗ್ನೀಸಿಯಮ್, ರಂಜಕ ಮತ್ತು ಕಬ್ಬಿಣದ ಹೊರತಾಗಿ, ಪೊಟ್ಯಾಸಿಯಮ್ ನಂಥಹ  ಅಂಶಗಳು ಚಕ್ಕೆಯಲ್ಲಿ ಕಂಡುಬರುತ್ತವೆ. ಈ ಎಲ್ಲಾ ಪೋಷಕಾಂಶಗಳು ನಿಮಗೆ ಶಕ್ತಿಯನ್ನು ನೀಡುವುದರೊಂದಿಗೆ ಒತ್ತಡವನ್ನು ಕಡಿಮೆ ಮಾಡುತ್ತದೆ.


ಇದನ್ನೂ ಓದಿ : ಕಪ್ಪು ದ್ರಾಕ್ಷಿ ಸೇವನೆಯಿಂದ ಆರೋಗ್ಯಕ್ಕೆ ಸಿಗುವುದು ಇಷ್ಟೆಲ್ಲಾ ಪ್ರಯೋಜನ !


ರೋಗನಿರೋಧಕ ಶಕ್ತಿ ಹೆಚ್ಚುತ್ತದೆ: 
ದಾಲ್ಚಿನ್ನಿ ಅಥವಾ ಚಕ್ಕೆಯ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು  ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುವ ಕೆಲಸ ಮಾಡುತ್ತದೆ.


ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : 
 ಚಕ್ಕೆ , ಹಾಲು ಮತ್ತು ಜೇನುತುಪ್ಪದ ಮಿಶ್ರಣವನ್ನು ಕುಡಿಯುವುದರಿಂದ  ಜೀರ್ಣಕ್ರಿಯೆ  ಸುಧಾರಿಸುತ್ತದೆ. ಜೀರ್ಣಕಾರಿ ಸಮಸ್ಯೆ ಇರುವವರು ದಾಲ್ಚಿನ್ನಿ ಜೊತೆ ಹಾಲು ಕುಡಿಯುವುದರಿಂದ ಪ್ರಯೋಜನವಾಗುತ್ತದೆ.ಈ ಮಿಶ್ರಣವು ಅಸಿಡಿಟಿ, ಹೊಟ್ಟೆಯ ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.


ತೂಕ ಇಳಿಕೆ : 
ಹೌದು, ಹಾಲು ಕುಡಿಯುವ ಮೂಲಕವೂ ತೂಕ ಇಳಿಸಿಕೊಳ್ಳಬಹುದು. ರಾತ್ರಿ ಬೆಚ್ಚಗಿನ ಹಾಲಿಗೆ ಸ್ವಲ್ಪ ಚಕ್ಕೆ ಪುಡಿ ಮತ್ತು ಜೇನುತುಪ್ಪವನ್ನು ಸೇರಿಸಿ.ಹಾಲಿನಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ಚಕ್ಕೆ ಚಯಾಪಚಯವನ್ನು ಹೆಚ್ಚಿಸುತ್ತದೆ.


ಇದನ್ನೂ ಓದಿ : ನಿತ್ಯ ಮುಂಜಾನೆ Ghee Coffee ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಅದ್ಭುತ ಪ್ರಯೋಜನ


ಕೀಲು ನೋವಿನಿಂದ ಪರಿಹಾರ : 
ಚಕ್ಕೆ ಮತ್ತು ಜೇನುತುಪ್ಪವನ್ನು ಬೆರೆಸಿ ಹಾಲು ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ ಮತ್ತು ಕೀಲು ನೋವು ಕಡಿಮೆಯಾಗುತ್ತದೆ. ಹಾಲು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ.ಜೇನುತುಪ್ಪ ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ.ಚಕ್ಕೆ ಮತ್ತು ಜೇನುತುಪ್ಪವನ್ನು ಬೆರೆಸಿದ ಹಾಲನ್ನು ನಿಯಮಿತವಾಗಿ ಕುಡಿಯುವುದರಿಂದ ಕೀಲು ಮತ್ತು ಮೂಳೆ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ.


ಹಾಲಿನೊಂದಿಗೆ ಚಕ್ಕೆ ಸೇವಿಸುವುದು ಹೇಗೆ? : 
ಒಂದು ಲೋಟ ಹಾಲಿಗೆ ಒಂದು ಚಮಚ ಚಕ್ಕೆ ಪುಡಿ ಸೇರಿಸಿ ಮತ್ತು ಹಾಲನ್ನು 5 ನಿಮಿಷಗಳ ಕಾಲ ಕುದಿಸಿ. ರುಚಿಗೆ ತಕ್ಕಂತೆ ಹಾಲಿಗೆ ಜೇನುತುಪ್ಪ ಸೇರಿಸಿ ಕುಡಿಯಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.