Clove Health benefits: ಚಳಿಗಾಲ ಶುರುವಾಗಿದೆ, ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದೆ. ಈ ಋತುವಿನಲ್ಲಿ ಶೀತ ವಾತಾವರಣದಿಂದಾಗಿ ಅನೇಕ ಜನರು ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಚಳಿಗಾಲದಲ್ಲಿ ನೆಗಡಿ, ಕೆಮ್ಮು, ಗಂಟಲು ನೋವು ಮುಂತಾದ ಅನೇಕ ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆ ಇದೆ. ಇದಲ್ಲದೆ, ಚಳಿಗಾಲದಲ್ಲಿ ದೇಹವು ಸಕ್ರಿಯವಾಗಿರುವುದಿಲ್ಲ. 


COMMERCIAL BREAK
SCROLL TO CONTINUE READING

ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ವಿಶೇಷ ಆಹಾರಗಳನ್ನು ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಳ್ಳಬೇಕು. ಚಳಿಗಾಲದಲ್ಲಿ ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪಾನೀಯಗಳನ್ನು ಕುಡಿಯುವುದು ತುಂಬಾ ಮುಖ್ಯ. ಈ ಚಳಿಗಾಲದಲ್ಲಿ ಲವಂಗದ ಹಾಲನ್ನು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ. ಅದ್ದರಿಂದ ನೀವು ಹಾಲಿನಲ್ಲಿ ಒಂದು ಲವಂಗವನ್ನು ಬೆರಸಿ ಕುಡಿಯುವುದು ಉತ್ತಮ.


ಭಾರತೀಯ ಅಡುಗೆಮನೆಯಲ್ಲಿ ಆಹಾರದ ರುಚಿಯನ್ನು ಹೆಚ್ಚಿಸುವ ಅನೇಕ ಮಸಾಲೆಗಳಿವೆ. ಅವು ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಕೂಡ ಹೌದು. ಈ ಮಸಾಲೆಗಳಲ್ಲಿ ಒಂದು ಲವಂಗ . ಇದು ಆಹಾರದ ರುಚಿಯನ್ನು ದ್ವಿಗುಣಗೊಳಿಸುವುದಷ್ಟೆ ಅಲ್ಲದೆ ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನು ನೀಡುತ್ತದೆ. ಲವಂಗವನ್ನು ಹಾಲಿಗೆ ಹಾಕಿ ಕುಡಿಯುವುದರಿಂದ ದೇಹಕ್ಕೆ ಹೆಚ್ಚಿನ ಲಾಭ ಸಿಗುತ್ತದೆ. 


ಲವಂಗದಲ್ಲಿ ಪ್ರೋಟೀನ್, ಕಬ್ಬಿಣ, ಕಾರ್ಬೋಹೈಡ್ರೇಟ್ ಮತ್ತು ಕ್ಯಾಲ್ಸಿಯಂನಂತಹ ಅನೇಕ ಪೋಷಕಾಂಶಗಳಿವೆ. ಅದ್ದರಿಂದ ಈ ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿರುವ ಲವಂಗವನ್ನು ಹಾಲಿನೊಂದಿಗೆ ಬೆರೆಸುವುದರಿಂದ ಅವುಗಳ ಆರೋಗ್ಯ ಪ್ರಯೋಜನ ಒಂದು ಪಟ್ಟು ಹೆಚ್ಚಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಮತ್ತು ಅಧಿಕ ಬಿಪಿಯಿಂದ ಬಳಲುತ್ತಿದ್ದಾರೆ. ಹೀಗಿರುವವರು.. ಲವಂಗ ಹಾಲು ಕುಡಿಯುವುದರಿಂದ ದೇಹದಲ್ಲಿ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಲವಂಗವು ರಕ್ತದೊತ್ತಡವನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿದೆ. ಅದಕ್ಕಾಗಿಯೇ ಬಿಪಿ ರೋಗಿಗಳು ಲವಂಗದ ಹಾಲನ್ನು ಕುಡಿಯಬೇಕು. 


ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಾದ ಮಲಬದ್ಧತೆ , ಅಜೀರ್ಣ, ಹೊಟ್ಟೆನೋವು ಇರುವವರು ಲವಂಗದ ಹಾಲನ್ನು ಕುಡಿಯಬೇಕು. ಲವಂಗ ಹಾಲು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಲವಂಗವು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. ಲವಂಗವನ್ನು ಹಾಲಿನೊಂದಿಗೆ ಬೆರೆಸಿ ಕುಡಿದರೆ, ಚಯಾಪಚಯವು ವೇಗಗೊಳ್ಳುತ್ತದೆ.


ಲವಂಗದಲ್ಲಿ ಕ್ಯಾಲ್ಸಿಯಂ ಇರುತ್ತದೆ ಇದನ್ನು ಹಾಲಿನಲ್ಲಿ ಸೇರಿಸಿ ಕುಡಿಯುವುದರಿಂದ ಕ್ಯಾಲ್ಸಿಯಂ ಗುಣಮಟ್ಟ ಹೆಚ್ಚುತ್ತದೆ. ಪ್ರತಿದಿನ ಈ ಹಾಲನ್ನು ಕುಡಿಯುವುದರಿಂದ ಮೂಳೆಗಳು ಮತ್ತು ಹಲ್ಲುಗಳು ಬಲವಾಗಿರುತ್ತವೆ. ಇದರಿಂದ ಹಲ್ಲು ನೋವು, ವಸಡು ಊದಿಕೊಳ್ಳುವುದು, ಬಾಯಿ ದುರ್ವಾಸನೆ ಮೊದಲಾದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎನ್ನುತ್ತಾರೆ ತಜ್ಞರು.


ಲವಂಗ ಹಾಲು ಕುಡಿಯುವುದರಿಂದ ದೇಹವು ಬಲಗೊಳ್ಳುತ್ತದೆ ಮತ್ತು ಆಯಾಸ ಮತ್ತು ಆಲಸ್ಯವನ್ನು ಹೋಗಲಾಡಿಸುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ದೇಹಕ್ಕೆ ಹೊಸ ಶಕ್ತಿಯನ್ನು ತುಂಬುತ್ತದೆ. ಚಳಿಗಾಲದಲ್ಲಿ ರೋಗಗಳ ಪ್ರಭಾವ ಹೆಚ್ಚು. ಈ ರೋಗಗಳ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿ ಅತ್ಯಗತ್ಯ. ಈ ಹಾಲನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.