ಕಾಫಿಗೆ ತೆಂಗಿನೆಣ್ಣೆ ಸೇರಿಸಿ ಕುಡಿದರೆ ಈ ಎಲ್ಲಾ ಕಾಯಿಲೆಗಳು ಮಾಯವಾಗುತ್ತವೆ!

Coconut Oil In Coffee: ಕಾಫಿಗೆ ತೆಂಗಿನೆಣ್ಣೆ ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರ ಗುಣಲಕ್ಷಣಗಳು ದೀರ್ಘ ಕಾಲದ ಕಾಯಿಲೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಆದರೆ ಒಮ್ಮೆ ಪ್ರಯತ್ನಿಸಿ ನೋಡಿ.   

Written by - Chetana Devarmani | Last Updated : Oct 7, 2023, 01:45 PM IST
  • ಕಾಫಿಗೆ ತೆಂಗಿನೆಣ್ಣೆ ಸೇರಿಸಿ ಕುಡಿಯಬೇಕು
  • ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ
  • ದೀರ್ಘ ಕಾಲದ ಕಾಯಿಲೆ ಗುಣವಾಗುತ್ತದೆ
ಕಾಫಿಗೆ ತೆಂಗಿನೆಣ್ಣೆ ಸೇರಿಸಿ ಕುಡಿದರೆ ಈ ಎಲ್ಲಾ ಕಾಯಿಲೆಗಳು ಮಾಯವಾಗುತ್ತವೆ!   title=
Coffee

Coconut Oil In Coffee: ಪ್ರತಿದಿನ ಕಾಫಿ ಕುಡಿಯುವುದು ಪೂರ್ವಜರಿಂದ ಬಂದ ಸಂಪ್ರದಾಯ. ಬೆಳಗ್ಗೆ ಎದ್ದ ತಕ್ಷಣ ಬೆಡ್ ಕಾಫಿಯಿಂದ ಶುರುಮಾಡಿ ಸಂಜೆಯವರೆಗೂ ಕಾಫಿ ಕುಡಿಯುತ್ತಲೇ ಇರುತ್ತಾರೆ. ಪ್ರತಿದಿನ ಒಂದಲ್ಲ ಎರಡಲ್ಲ 4 ರಿಂದ 5 ಸಲ ಕಾಫಿ ಕುಡಿಯುವವರೂ ಇದ್ದಾರೆ. ಪ್ರತಿದಿನ ಕಾಫಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಇದರ ಗುಣಲಕ್ಷಣಗಳು ಒತ್ತಡ ಮತ್ತು ಆತಂಕವನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಆದರೆ ಕಾಫಿಗೆ ತೆಂಗಿನೆಣ್ಣೆ ಸೇರಿಸುವುದರಿಂದ ದುಪ್ಪಟ್ಟು ಲಾಭವಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. 

ಪ್ರತಿದಿನ ಬೆಳಿಗ್ಗೆ ಒಂದು ಕಪ್ ಕಾಫಿಯಲ್ಲಿ ಎರಡು ಚಮಚ ತೆಂಗಿನ ಎಣ್ಣೆಯನ್ನು ಕುಡಿಯುವುದರಿಂದ ದೇಹಕ್ಕೆ ಡಬಲ್ ಪ್ರಯೋಜನಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್, ಹೃದ್ರೋಗ ಮತ್ತು ಇತರ ಅಪಾಯಕಾರಿ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಜೊತೆಗೆ ಕೊಬ್ಬರಿ ಎಣ್ಣೆ ಬೆರೆಸಿದ ಕಾಫಿ ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಬ್ಯಾಕ್ಟೀರಿಯಾ ಕೂಡ ಸುಲಭವಾಗಿ ಸಾಯುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಇದನ್ನೂ ಓದಿ : ಚಕ್ಕೆಯನ್ನು ನಿತ್ಯ ಸೇವಿಸುತ್ತಾ ಬನ್ನಿ ! ಈ 7 ಸಮಸ್ಯೆಗಳಿಗೆ ಸಿಗುವುದು ಶಾಶ್ವತ ಪರಿಹಾರ 

ಇವೆರಡರ ಮಿಶ್ರಣವನ್ನು ಕುಡಿಯುವುದರಿಂದ ಮೆದುಳು ಕೂಡ ಸುಲಭವಾಗಿ ಸುಧಾರಿಸುತ್ತದೆ. ಇದರಿಂದ ಏಕಾಗ್ರತೆ ಹೆಚ್ಚುತ್ತದೆ ಮತ್ತು ದೀರ್ಘಕಾಲದ ಕಾಯಿಲೆಗಳನ್ನು ತಡೆಯುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಮಿದುಳಿನ ನರಗಳನ್ನು ಸದೃಢವಾಗಿಡಲು ಸಹ ಇದು ಸಹಾಯ ಮಾಡುತ್ತದೆ. ಆಗಾಗ್ಗೆ ಜೀರ್ಣಕ್ರಿಯೆಯ ಸಮಸ್ಯೆಯಿಂದ ಬಳಲುತ್ತಿರುವವರು ತೆಂಗಿನೆಣ್ಣೆಯೊಂದಿಗೆ ಕಾಫಿಯನ್ನು ಸೇವಿಸಿದರೆ ಶೀಘ್ರದಲ್ಲೇ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ಇದರ ಗುಣಲಕ್ಷಣಗಳು ಮಧುಮೇಹದಿಂದ ಬಳಲುತ್ತಿರುವವರಿಗೆ ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಮತ್ತು ಇತರ ದೀರ್ಘಕಾಲದ ಕಾಯಿಲೆಗಳಿಂದ ದೇಹವನ್ನು ರಕ್ಷಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದು ಖಿನ್ನತೆಯನ್ನು ಕಡಿಮೆ ಮಾಡಲು ಮತ್ತು ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ : ಈ ಹೂವಿನ ಎಲೆಯನ್ನು ಅರೆದು ಹಚ್ಚಿದರೆ ಬಿಳಿಕೂದಲು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗುತ್ತೆ! 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮನೆಮದ್ದುಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News