ಜೇನುತುಪ್ಪಕ್ಕೆ ಈ ವಸ್ತು ಬೆರೆಸಿ ಸೇವಿಸಿದರೆ ರಕ್ತ ನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು

Bad Cholesterol Home Remedies:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ, ಅದು ರಕ್ತನಾಳಗಳಲ್ಲಿ  ಜಮೆ ಆಗಲು ಆರಂಭವಾಗುತ್ತದೆ.  ಕೆಲವು ಮನೆಮದ್ದುಗಳು ದೇಹದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

Written by - Ranjitha R K | Last Updated : Feb 22, 2024, 02:23 PM IST
  • ಕೊಲೆಸ್ಟ್ರಾಲ್ ದೇಹದಲ್ಲಿ ಸೇರಿಕೊಂಡಿರುವಂತಹ ಮೇಣದಂತಹ ವಸ್ತುವಾಗಿದೆ
  • ಇದು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅಗತ್ಯವಾಗಿರುತ್ತದೆ.
  • ದೇಹವನ್ನು ಆರೋಗ್ಯವಾಗಿಡಲು ಒಳ್ಳೆಯ ಕೊಲೆಸ್ಟ್ರಾಲ್ ಅತ್ಯಗತ್ಯ.
ಜೇನುತುಪ್ಪಕ್ಕೆ ಈ ವಸ್ತು ಬೆರೆಸಿ ಸೇವಿಸಿದರೆ ರಕ್ತ ನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು  title=

Bad Cholesterol Home Remedies : ಇತ್ತೀಚಿನ ದಿನಗಳಲ್ಲಿ ಜನರು ತಾವು ಅನುಸರಿಸುವ ತಪ್ಪು ಆಹಾರ ಪದ್ಧತಿ ಮತ್ತು ಕೆಟ್ಟ ಜೀವನಶೈಲಿಯಿಂದಾಗಿ ಅನೇಕ ಗಂಭೀರ ಕಾಯಿಲೆಗಳನ್ನು ಎದುರಿಸುವಂತಾಗಿದೆ. ಈ ಕಾಯಿಲೆಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯೂ ಒಂದು. ಕೊಲೆಸ್ಟ್ರಾಲ್ ದೇಹದಲ್ಲಿ ಸೇರಿಕೊಂಡಿರುವಂತಹ ಮೇಣದಂತಹ ವಸ್ತುವಾಗಿದೆ. ಇದು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅಗತ್ಯವಾಗಿರುತ್ತದೆ. ಕೊಲೆಸ್ಟ್ರಾಲ್ ನಲ್ಲಿ ಎರಡು ವಿಧ. ಒಳ್ಳೆಯ ಕೊಲೆಸ್ಟ್ರಾಲ್ (ಎಚ್ಡಿಎಲ್) ಮತ್ತು ಕೆಟ್ಟ ಕೊಲೆಸ್ಟ್ರಾಲ್ (ಎಲ್ಡಿಎಲ್). 

ದೇಹವನ್ನು ಆರೋಗ್ಯವಾಗಿಡಲು ಒಳ್ಳೆಯ ಕೊಲೆಸ್ಟ್ರಾಲ್ ಅತ್ಯಗತ್ಯ. ಆದರೆ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ, ಅದು ರಕ್ತನಾಳಗಳಲ್ಲಿ ಜಮೆ ಆಗಲು ಆರಂಭವಾಗುತ್ತದೆ. ಈ ಕಾರಣದಿಂದಾಗಿ, ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಗಂಭೀರ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.  ಹೀಗಾದಾಗ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಜನರು ಸಾಮಾನ್ಯವಾಗಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಔಷಧಿಗಳ ಮೊರೆ ಹೋಗುತ್ತಾರೆ. ಆದರೆ, ಕೆಲವು ಮನೆಮದ್ದುಗಳು ದೇಹದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.  

ಇದನ್ನೂ ಓದಿ : Desi Ghee Benefits: ತೂಕ ಹೆಚ್ಚಳ ಅಲ್ಲ ಶರೀರವನ್ನು ಆಂತರಿಕವಾಗಿ ಗಟ್ಟಿಗೊಳಿಸುತ್ತೆ ದೇಸಿ ತುಪ್ಪ!

ನೆಲ್ಲಿಕಾಯಿ ಪುಡಿ ಮತ್ತು ಜೇನುತುಪ್ಪದ ಮಿಶ್ರಣ : 
ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಲ್ಲಿ ನೆಲ್ಲಿಕಾಯಿ ಮತ್ತು ಜೇನುತುಪ್ಪದ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ನೆಲ್ಲಿಕಾಯಿ ಮತ್ತು ಜೇನುತುಪ್ಪದಲ್ಲಿರುವ ಔಷಧೀಯ ಗುಣಗಳು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ಆಲ್ಕಲಾಯ್ಡ್‌ಗಳು, ಫ್ಲೇವನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಕಂಡು ಬರುತ್ತವೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೆಲ್ಲಿಕಾಯಿ ಪ್ರಯೋಜನಕಾರಿಯಾಗಿದೆ. ಇದು ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಬ್ಬು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಿ ದೇಹದಿಂದ ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಅಪಧಮನಿಯ ಗೋಡೆಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.ಜೇನುತುಪ್ಪದಲ್ಯೂ ಅನೇಕ ಪೋಷಕಾಂಶಗಳು ಕಂಡು ಬರುತ್ತವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಗಳ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೆಲ್ಲಿಕಾಯಿ ಮತ್ತು ಜೇನುತುಪ್ಪವನ್ನು ನಿಯಮಿತವಾಗಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. 

ಸೇವಿಸುವುದು ಹೇಗೆ ? : 
ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯನ್ನು ಹೋಗಲಾಡಿಸಲು, ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಒಂದು ಚಮಚ ಜೇನುತುಪ್ಪದೊಂದಿಗೆ ಬೆರೆಸಿ ತಿನ್ನಬಹುದು. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಮಿಶ್ರಣವನ್ನು ಸೇವಿಸುವುದರಿಂದ ದೇಹದಲ್ಲಿ ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

ಇದನ್ನೂ ಓದಿ : ಒಂದು ಗ್ಲಾಸ್ ಬೂದು ಗುಂಬಳಕಾಯಿ ಜ್ಯೂಸ್… ದೇಹದ ಹಠಮಾರಿ ಬೊಜ್ಜು ಕರಗಲು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ!

ನೆಲ್ಲಿಕಾಯಿ ಮತ್ತು ಜೇನುತುಪ್ಪದ ಸೇವನೆಯು ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ. ಆದರೆ ನೀವು ಯಾವುದೇ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರೆ, ಇದನ್ನು ಸೇವಿಸುವ ಮೊದಲು ತಜ್ಞರ ಸಲಹೆಯನ್ನು ತೆಗೆದುಕೊಳ್ಳಿ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News