ಬೆಂಗಳೂರು : ಮೊಸರನ್ನ ಬಹುತೇಕ ಮಂದಿ ಇಷ್ಟ ಪಟ್ಟು ತಿನ್ನುವ ಆಹಾರವಾಗಿದೆ. ಮೊಸರು ಮತ್ತು ಅನ್ನ ಈ ಎರಡೂ ವಸ್ತುಗಳು ಅನೇಕ ಪೋಷಕಾಂಶಗಳನ್ನು ಒಳಗೊಂಡಿರುತ್ತವ. ಇದು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಅನ್ನವನ್ನು ಮೊಸರಿನೊಂದಿಗೆ ಬೆರೆಸಿದಾಗ ಮೊಸರನ್ನ ಎನ್ನುವ ರುಚಿಕರ ಮತ್ತು ಪೌಷ್ಟಿಕ ಆಹಾರ ರೆಡಿಯಾಗುತ್ತದೆ.
ಮೊಸರನ್ನ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ಇದು ಸ್ನಾಯುಗಳ ನಿರ್ಮಾಣ ಮತ್ತು ಮೂಳೆಗಳ ಆರೋಗ್ಯಕ್ಕೆ ಅವಶ್ಯಕವಾಗಿದ್ದು, ಫೈಬರ್‌ನ ಉತ್ತಮ ಮೂಲವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮೊಸರನ್ನವನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ನೋಡೋಣ.
ಇದನ್ನೂ ಓದಿ : ಮಲಬದ್ಧತೆ ಕೇವಲ 15 ನಿಮಿಷದಲ್ಲಿ ಕಡಿಮೆ ಮಾಡುತ್ತೆ ಈ ಮನೆಮದ್ದು
ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲ:
ಮೊಸರನ್ನ ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ಸ್ನಾಯುಗಳ ಆರೋಗ್ಯಕ್ಕೆ ಪ್ರೋಟೀನ್ ಅವಶ್ಯಕವಾಗಿದೆ. ಮೂಳೆ ಮತ್ತು ಹಲ್ಲುಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಅತ್ಯಗತ್ಯ.
ಕರುಳಿನ ಆರೋಗ್ಯ:
ಮೊಸರನ್ನದಲ್ಲಿ ಪ್ರೋಬಯಾಟಿಕ್‌ಗಳಿವೆ. ಇವುಗಳು ಉತ್ತಮ ಬ್ಯಾಕ್ಟೀರಿಯಾಗಳು, ಇದು ಕರುಳಿನ ಆರೋಗ್ಯವನ್ನು ವೃದ್ದಿಸುತ್ತದೆ. ಪ್ರೋಬಯಾಟಿಕ್‌ಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ತೂಕ ಇಳಿಸಲು ಸಹಾಯ ಮಾಡುತ್ತದೆ:
ಮೊಸರನ್ನ ಸಮತೋಲಿತ ಆಹಾರವಾಗಿದ್ದು ಅದು ತೂಕ ಇಳಿಸಲು ಸಹಾಯ ಮಾಡುತ್ತದೆ. ಮೊಸರಿನಲ್ಲಿ ಹೇರಳವಾಗಿ ಪ್ರೋಟೀನ್ ಕಂಡು ಬರುತ್ತದೆ. ಇದು ಹಸಿವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ಸೀತಾಫಲ ಎಲೆಯಿಂದ ದೇಹಕ್ಕಿದೆ ಹಲವಾರು ಪ್ರಯೋಜನ
ಮೊಸರು :
ಅನ್ನವು ಪ್ರೋಟೀನ್ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತದೆ. ಇದು ಶಕ್ತಿಯನ್ನು ನೀಡಿ, ಆಯಾಸವನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಮೊಸರನ್ನವನ್ನು ತಿನ್ನುವುದರಿಂದ ದೇಹಕ್ಕೆ ಹೊಸ ಚೈತನ್ಯ ಸಿಗುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ:
ಮೊಸರನ್ನ ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಲಬದ್ಧತೆ ಮತ್ತು ಇತರ ಜೀರ್ಣಕಾರಿ ಸಮಸ್ಯೆಗಳನ್ನು ತಡೆಯಲು ಮೊಸರನ್ನ ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿ :
ಮೊಸರನ್ನದಲ್ಲಿ ವಿಟಮಿನ್‌ಗಳು ಮತ್ತು ಖನಿಜಗಳಿವೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೊಸರನ್ನವನ್ನು ತಿನ್ನುವುದರಿಂದ ದೇಹವು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ಈ ಸಮಸ್ಯೆಗಳನ್ನು ದೂರ ತಳ್ಳಬೇಕಾದರೆ ವಾರಕ್ಕೆ ಒಮ್ಮೆಯಾದರೂ ತಿನ್ನಬೇಕು ವಾಟರ್ ಆಪಲ್ !
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಯಾವುದೇ ವೈದ್ಯಕೀಯ ಸಲಹೆಗೆ ಪರ್ಯಾಯವಾಗಿಲ್ಲ. ಇದನ್ನುಮಾಹಿತಿಯ ಉದ್ದೇಶಕ್ಕಾಗಿ ಮಾತ್ರ ನೀಡಲಾಗುತ್ತಿದೆ. ಇದನ್ನೂ ಅಳವಡಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳಿ. zee kannada news ಇದನ್ನು ಅನುಮೋದಿಸುವುದಿಲ್ಲ .)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.