ಬೆಂಗಳೂರು : ಕಡಲೆ ಕಾಳು  ತುಂಬಾ ಆರೋಗ್ಯಕರ  ಆಹಾರ. ಇದು ಕಬ್ಬಿಣದ ಉತ್ತಮ ಮೂಲವಾಗಿದೆ. ಇದಲ್ಲದೆ, ಪ್ರೋಟೀನ್, ಕ್ಯಾಲ್ಸಿಯಂನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದನ್ನು ಹಲವು ವಿಧದ ಪಾಕವಿಧಾನಗಳ ರೂಪದಲ್ಲಿ ಸೇವಿಸಬಹುದು. ಇದಲ್ಲದೇ ಹೆಚ್ಚಿನವರು ಇದನ್ನು ನೆನೆಸಿಟ್ಟು ತಿನ್ನಲು ಇಷ್ಟಪಡುತ್ತಾರೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಾಳುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ನಿಮ್ಮ ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸುವುದರಿಂದ ಹಿಡಿದು ಮೂಳೆ ಸಮಸ್ಯೆಗಳನ್ನು ನಿವಾರಿಸುತ್ತದೆ.


COMMERCIAL BREAK
SCROLL TO CONTINUE READING

ನೆನೆಸಿದ ಕಾಳುಗಳನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು : 
ಮೊದಲೇ ಹೇಳಿದ ಹಾಗೆ ಕಡಲೆ ಕಾಳು ಪ್ರೋಟೀನ್ ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಾಳುಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಹಿಮೋಗ್ಲೋಬಿನ್‌ ಪಡೆಯುವುದು ಸಾಧ್ಯವಾಗುತ್ತದೆ. ಈ ಕಾರಣದಿಂದಾಗಿ, ದೌರ್ಬಲ್ಯ ಮತ್ತು ಆಯಾಸ ಸಮಸ್ಯೆ ನಿವಾರಣೆಯಾಗುತ್ತದೆ. ಬೆಳಗಿನ ಉಪಾಹಾರದಲ್ಲಿ ನೆನೆಸಿದ ಕಡಲೆ ಕಾಳು ತಿನ್ನುವುದರಿಂದ, ದಿನವಿಡೀ ಶಕ್ತಿಯುತವಾಗಿರಬಹುದು.


ಇದನ್ನೂ ಓದಿ : Frizzy Hair Solution: ಈ ಒಂದು ವಸ್ತುವನ್ನು ಕೂದಲಿಗೆ ಹಚ್ಚಿದರೆ ಕೂದಲು ಸೂಪರ್ ಸಿಲ್ಕಿಯಾಗುತ್ತದೆ !


ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : 
ನೆನೆಸಿದ ಕಡಲೆ ಕಾಳುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಬಹುದು. ಇದರಲ್ಲಿ ಉತ್ತಮ ಪ್ರಮಾಣದ ಫೈಬರ್ ಅಂಶ ಕೂಡಾ ಇದೆ. ಇದು ನಿಮ್ಮ ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ. ಇದರೊಂದಿಗೆ ಮಲಬದ್ಧತೆ, ಅಜೀರ್ಣ, ಅಸಿಡಿಟಿಯಂತಹ ಸಮಸ್ಯೆಗಳನ್ನು ದೂರ ಮಾಡಬಹುದು. 


ಹೃದಯದ ಆರೋಗ್ಯಕ್ಕೆ ಬೆಸ್ಟ್ : 
ಕಡಲೆ ಕಾಳಿನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಟೊನ್ಯೂಟ್ರಿಯೆಂಟ್‌ಗಳು ಸಮೃದ್ಧವಾಗಿವೆ. ಇದು ನಿಮ್ಮ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದಲ್ಲದೆ ಇದರಲ್ಲಿರುವ ಪೋಷಕಾಂಶಗಳು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. 


ಇದನ್ನೂ ಓದಿ : Nutmeg : ಜಾಯಿಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳಿವು..!


ತೂಕ ನಷ್ಟದಲ್ಲಿ ಪರಿಣಾಮಕಾರಿ : 
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಾಳುಗಳನ್ನು ತಿನ್ನುವುದರಿಂದ ತೂಕವನ್ನು ನಿಯಂತ್ರಿಸಬಹುದು. ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದಲ್ಲದೆ, ಫೈಬರ್ ಕೂಡಾ ಅಧಿಕ ಪ್ರಮಾಣದಲ್ಲಿ ಇದೆ. ಇದು ನಿಮ್ಮ ಹೊಟ್ಟೆಯನ್ನು ದೀರ್ಘಕಾಲದವರೆಗೆ ತುಂಬಿರುವಂತೆ ಮಾಡುತ್ತದೆ.  ಬೆಳಿಗ್ಗೆ ಆರೋಗ್ಯಕರ ಉಪಹಾರವಾಗಿ ಕಡಲೆ ಕಾಳನ್ನು ಸೇವಿಸಬಹುದು. 


ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ : 
ನೆನೆಸಿದ ಕಾಳುಗಳಲ್ಲಿ ಕರಗುವ ನಾರಿನಂಶವಿದ್ದು, ದೇಹದಲ್ಲಿ ಹೆಚ್ಚುತ್ತಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇದು ಪರಿಣಾಮಕಾರಿಯಾಗಿದೆ.  ಏರುತ್ತಿರುವ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬೇಕಾದರೆ ಇದನ್ನು ಸೇವಿಸಬೇಕು. ಇದರಿಂದ ಹೃದಯದ ಆರೋಗ್ಯವನ್ನೂ ಸುಧಾರಿಸಬಹುದು. 


ಇದನ್ನೂ ಓದಿ : Health Tips: ಉತ್ತಮ ಆರೋಗ್ಯ ಪಡೆಯಲು ಈ ಆಹಾರ ಸೇವಿಸಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.