Fruits For Diabetic Patients : ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದೆ. ಮೇದೋಜ್ಜೀರಕ ಗ್ರಂಥಿಯು ಇನ್ಸುಲಿನ್ ಅನ್ನು ಇನ್ನು ಮುಂದೆ ಉತ್ಪಾದಿಸಲು ಸಾಧ್ಯವಾಗದೇ ಇದ್ದಾಗ ಅಥವಾ ದೇಹವು ಉತ್ಪಾದಿಸುವ ಇನ್ಸುಲಿನ್ ಅನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗದಿರುವ ಸ್ಥಿತಿಯನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಮಧುಮೇಹ ಬಹಳ ವೇಗವಾಗಿ ಹರಡುತ್ತಿರುವ ಕಾಯಿಲೆಯಾಗಿದೆ. ಈ ಹಿನ್ನೆಲೆಯಲ್ಲಿ ಮಧುಮೇಹ ರೋಗಿಗಳು ತಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಧುಮೇಹ ರೋಗಿಗಳು ಪ್ರತಿಯೊಂದು ಹಣ್ಣನ್ನು ತಿನ್ನುವುದು ಸಾಧ್ಯವಾಗುವುದಿಲ್ಲ. ಆದರೆ ಕೆಲವೊಂದು ಹಣ್ಣುಗಳನ್ನು ತಿನ್ನುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಇನ್ಸುಲಿನ್ ಉತ್ಪಾದಿಸಲು ಅಥವಾ ಅದನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗದಿದ್ದಾಗ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗಲು ಕಾರಣವಾಗುತ್ತದೆ.
ಇದನ್ನೂ ಓದಿ : ಅನ್ನದ ಬದಲು ಚಪಾತಿ ತಿನ್ನುತ್ತಿರಾ? ಹಾಗಿದ್ದರೆ ದಿನಕ್ಕೆ ಇಷ್ಟೇ ಚಪಾತಿ ತಿನ್ನಬೇಕು
ಈ ಹಣ್ಣು ಮಧುಮೇಹಿಗಳಿಗೆ ಉಪಯುಕ್ತವಾಗಿದೆ :
1. ಕಿವಿ ಹಣ್ಣು :
ಕಿವಿ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳಿವೆ. ಜೊತೆಗೆ ವಿಟಮಿನ್-ಸಿ, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ನಂತಹ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಮಧುಮೇಹ ರೋಗಿಗಳು ಕಿವಿ ಜ್ಯೂಸ್ ಮತ್ತು ಸಲಾಡ್ ಅನ್ನು ತಿನ್ನಬೇಕು. ಈ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಆರೋಗ್ಯವನ್ನು ಕಾಪಾಡುವುದು ಸಾಧ್ಯವಾಗುತ್ತದೆ.
2. ನೇರಳೆ ಹಣ್ಣು :
ಬೇಸಿಗೆಯಲ್ಲಿ ನೇರಳೆ ಹಣ್ಣು ತಿನ್ನುವುದು ಪ್ರಯೋಜನಕಾರಿಯಾಗಿದೆ. ಈ ಹಣ್ಣಿನ ರುಚಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಮಧುಮೇಹಿಗಳು ಈ ಹಣ್ಣನ್ನು ಅವಶ್ಯಕವಾಗಿ ಸೇವಿಸಬೇಕು. ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಈ ಹಣ್ಣು ಮಾತ್ರವಲ್ಲ ಅದರ ಬೀಜ ಕೂಡಾ ಡಯಾಬಿಟೀಸ್ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಜಾಮೂನ್ ಬೀಜಗಳನ್ನು ಒಣಗಿಸಿ ಪುಡಿ ಮಾಡಿ ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ಕಂಟ್ರೋಲ್ ಮಾಡಬಹುದು.
ಇದನ್ನೂ ಓದಿ : Health Tips: ಹಲವು ದೊಡ್ಡ ಕಾಯಿಲೆಗಳ ಅಪಾಯ ತಗ್ಗಿಸುತ್ತದೆ ಕೆಫೆನ್, ನಿತ್ಯ ಎಷ್ಟು ಸೇವಿಸಬೇಕು?
ಕಿತ್ತಳೆ :
ಕಿತ್ತಳೆ ಹಣ್ಣು ವಿಟಮಿನ್ ಸಿಯ ಸಮೃದ್ಧ ಮೂಲವಾಗಿದೆ. ಈ ಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಮಧುಮೇಹ ರೋಗಿಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
4. ಪೇರಳೆ ಹಣ್ಣು :
ಪೇರಲೇ ಹಣ್ಣಿನ ಸೇವನೆ ಮಧುಮೇಹ ರೋಗಿಗಳಿಗೆ ತುಂಬಾ ಒಳ್ಳೆಯದು. ಏಕೆಂದರೆ ಪೇರಳೆ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಹೇರಳವಾಗಿ ಕಂಡು ಬರುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿ ಫೈಬರ್ ಅಸಹ ಕೂಡಾ ಅಧಿಕ ಪ್ರಮಾಣದಲ್ಲಿ ಇರುತ್ತದೆ. ಕಿವಿಯಲ್ಲಿ ಕಡಿಮೆ ಗ್ಲೂಕೋಸ್ ಸೂಚ್ಯಂಕದಿಂದಾಗಿ, ರಕ್ತದ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.
ಇದನ್ನೂ ಓದಿ : ಕಂಕುಳಲ್ಲಿ ಕೆಟ್ಟವಾಸನೆ ಬರುತ್ತಿದೆಯಾ..? ಯೋಚಿಸಬೇಡಿ ಕಾರಣ ಮತ್ತು ಪರಿಹಾರ ಇಲ್ಲಿದೆ..!
ಮಧುಮೇಹದಲ್ಲಿ ಮುಖ್ಯವಾಗಿ ಮೂರು ಮುಖ್ಯ ವಿಧಗಳಿವೆ. ಅವುಗಳೆಂದರೆ ಟೈಪ್ 1, ಟೈಪ್ 2 ಮತ್ತು ಗರ್ಭಾವಸ್ಥೆಯಲ್ಲಿ ಕಾಣಿಸಿಕೊಳ್ಳುವ ಮಧುಮೇಹ. ಟೈಪ್ 1 ಮಧುಮೇಹವು ಯಾವುದೇ ವಯಸ್ಸಿನಲ್ಲಿ ಬೆಳೆಯಬಹುದು, ಆದರೆ ಮಕ್ಕಳು ಮತ್ತು ಹದಿಹರೆಯದವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಟೈಪ್ 2 ಮಧುಮೇಹವು ಹೆಚ್ಚಾಗಿ ವಯಸ್ಕರಲ್ಲಿ ಸಾಮಾನ್ಯವಾಗಿ ಕಾಣಿಸುತ್ತದೆ. ಟೈಪ್ 2 ಡಯಾಬಿಟಿಸ್ ನಲ್ಲಿ ಇನ್ಸುಲಿನ್ ಅನ್ನು ಸರಿಯಾಗಿ ಬಳಸುವುದು ಸಾಧ್ಯವಾಗುವುದಿಲ್ಲ. ಗರ್ಭಾವಸ್ಥೆಯಲ್ಲಿ ಕಾಣಿಸಿಕೊಳ್ಳುವ ಗರ್ಭಾವಸ್ಥೆಯಲ್ಲಿ ರಕ್ತದ ಸಾಕ್ರೆ ಮಟ್ಟವನ್ನು ಹೆಚ್ಚಿಸುತ್ತದೆ. ಇದು ತಾಯಿ ಮತ್ತು ಮಗುವಿಗೆ ತೊಂದರೆಗಳನ್ನು ಉಂಟುಮಾಡುತ್ತದೆ. ಸಾಮಾನ್ಯವಾಗಿ ಹೆರಿಗೆಯ ನಂತರ ಈ ಸಮಸ್ಯೆ ಸರಿ ಹೋಗುತ್ತದೆ. ಆದರೆ ಮಹಿಳೆ ಮತ್ತು ಮಗುವಿಗೆ ಭವಿಷ್ಯದಲ್ಲಿ ಟೈಪ್ 2 ಮಧುಮೇಹ ಕಾಣಿಸಿಕೊಳ್ಳುವ ಅಪಾಯವನ್ನು ತಳ್ಳಿ ಹಾಕುವಂತಿಲ್ಲ.
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ