ಈ ಮೂರು ಹಣ್ಣನ್ನು ಸೇವಿಸುತ್ತಾ ಬಂದರೆ ನಿಯಂತ್ರಣದಲ್ಲಿರುವುದು ರಕ್ತದೊತ್ತಡ

Fruits For High Blood Pressure:ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸದಿದ್ದರೆ, ಅದು ಮಾರಣಾಂತಿಕವಾಗಿ ಪರಿಣಮಿಸಬಹುದು. ಇದರಿಂದ ಮೆದುಳಿನ ರಕ್ತಸ್ರಾವ, ಪಾರ್ಶ್ವವಾಯು  ಮುಂತಾದ ಗಂಭೀರ ಕಾಯಿಲೆಗ ಅಪಾಯವನ್ನು ಎದುರಿಸಬೇಕಾಗುತ್ತದೆ. 

Written by - Ranjitha R K | Last Updated : Nov 24, 2022, 04:44 PM IST
  • ಜನರು ನಾನಾ ರೀತಿಯ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ.
  • ಜನ ಅನುಸರಿಸುವ ಜೀವ ಪದ್ದತಿಯೇ ಇದಕ್ಕೆ ಮುಖ್ಯ ಕಾರಣ.
  • ರಕ್ತದೊತ್ತಡವನ್ನು ನಿಯಂತ್ರಿಸದಿದ್ದರೆ ಮಾರಣಾಂತಿಕವಾಗಿ ಪರಿಣಮಿಸಬಹುದು.
ಈ ಮೂರು ಹಣ್ಣನ್ನು ಸೇವಿಸುತ್ತಾ ಬಂದರೆ ನಿಯಂತ್ರಣದಲ್ಲಿರುವುದು ರಕ್ತದೊತ್ತಡ  title=
Fruits For High Blood Pressure

Fruits For High Blood Pressure : ಪ್ರಸ್ತುತ ಕಾಲಘಟ್ಟದಲ್ಲಿ ಜನರು ನಾನಾ ರೀತಿಯ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಜನ ಅನುಸರಿಸುವ ಜೀವ ಪದ್ದತಿಯೇ ಇದಕ್ಕೆ ಮುಖ್ಯ ಕಾರಣ. ಬದಲಾಗುತ್ತಿರುವ ಜೀವನಶೈಲಿಗೆ ಅನುಗುಣವಾಗಿ ಆರೋಗ್ಯಕರ ಆಹಾರವನ್ನು ಸೇವಿಸದಿರುವುದು, ವ್ಯಾಯಾಮ ಮಾಡದಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಪರಿಣಾಮವಾಗಿ ಕ್ಯಾನ್ಸರ್, ಮಧುಮೇಹ, ಬೊಜ್ಜು ಇತ್ಯಾದಿ ಮಾರಣಾಂತಿಕ ಕಾಯಿಲೆಯನ್ನು ಎದುರಿಸಬೇಕಾಗುತ್ತದೆ. 

ಈ ಹಣ್ಣುಗಳನ್ನು ತಿನ್ನುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸಿ :
ಅಧಿಕ ರಕ್ತದೊತ್ತಡವು  ಜೀವನ ಪೂರ್ತಿ ಉಳಿಯುವ ಕಾಯಿಲೆಯಾಗಿದೆ.  ಒಮ್ಮೆ ಅಧಿಕ ರಕ್ತದೊತ್ತಡ ಕಾಯಿಲೆ ಬಂತೆಂದರೆ ಅದನ್ನು ನಿಯಂತ್ರಿಸುವತ್ತ ಗಮನ ಹರಿಸಬೇಕಾಗುತ್ತದೆ.  ಅಧಿಕ ರಕ್ತದೊತ್ತಡವನ್ನು  ನಿಯಂತ್ರಿಸದಿದ್ದರೆ, ಅದು ಮಾರಣಾಂತಿಕವಾಗಿ ಪರಿಣಮಿಸಬಹುದು. ಇದರಿಂದ ಮೆದುಳಿನ ರಕ್ತಸ್ರಾವ, ಪಾರ್ಶ್ವವಾಯು  ಮುಂತಾದ ಗಂಭೀರ ಕಾಯಿಲೆಗಳ ಅಪಾಯವನ್ನು ಎದುರಿಸಬೇಕಾಗುತ್ತದೆ.  ಈ ಹಿನ್ನೆಲೆಯಲ್ಲಿ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಕೆಲವೊಂದು ಹಣ್ಣುಗಳನ್ನು ಸೇವಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. 

ಇದನ್ನೂ ಓದಿ : Makhana: ಈ ಜನರು ಮರೆತೂ ಕೂಡ ಮಖನಾ ಸೇವಿಸಬಾರದು, ಸಮಸ್ಯೆ ಉಲ್ಬಣಿಸುತ್ತದೆ

1. ಬಾಳೆಹಣ್ಣು :
ಬಾಳೆಹಣ್ಣು ವರ್ಷ ಪೂರ್ತಿ ಸಿಗುವ ಹಣ್ಣು.  ಈ ಹಣ್ಣು ಅನೇಕ ಪೌಷ್ಟಿಕಾಂಶಗಳನ್ನು ಹೊಂದಿದೆ. ಇದು ಜೀರ್ಣಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಬಾಳೆಹಣ್ಣಿನಲ್ಲಿ ಕಂಡುಬರುವ ಪೋಷಕಾಂಶಗಳು ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಾಯ ಮಾಡುತ್ತದೆ.  ಪ್ರತಿದಿನ ಒಂದು ಬಾಳೆಹಣ್ಣು ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಮಾತ್ರವಲ್ಲ ಇದು ಪಾರ್ಶ್ವವಾಯುವಿನ ಅಪಾಯವನ್ನು ಕೂಡಾ ತಪ್ಪಿಸುತ್ತದೆ. 

2. ಕಿವಿ ಹಣ್ಣು : 
ಕಿವಿ ತುಂಬಾ ಪೌಷ್ಟಿಕಾಂಶವಿರುವ ಹಣ್ಣು. ಇದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಸಾಕಷ್ಟು ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳಿವೆ.  ಇದು ಜೀರ್ಣಕ್ರಿಯೆಯನ್ನು  ಸುಧಾರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಕೂಡಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. 

ಇದನ್ನೂ ಓದಿ : Diabetes: ಕಣ್ಣುಗಳಲ್ಲಿ ಕಾಣಿಸಿಕೊಳ್ಳುವ ಈ ಲಕ್ಷಣಗಳು ರಕ್ತದಲ್ಲಿನ ಅನಿಯಂತ್ರಿತ ಸಕ್ಕರೆಯ ಮಟ್ಟದ ಸಂಕೇತಗಳಾಗಿವೆ ಎಚ್ಚರ!

3. ಮಾವು :
ಬೇಸಿಗೆ ಕಾಲದಲ್ಲಿ ಸಿಗುವ ಈ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಇದು ತಿನ್ನಲು ಎಷ್ಟು ರುಚಿಕರವಾಗಿರುತ್ತದೆಯೋ ಅಷ್ಟೇ ಆರೋಗ್ಯ ಗುಣಗಳನ್ನು ಕೂಡಾ ಹೊಂದಿದೆ. ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಮಾವಿನಹಣ್ಣು ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಬೀಟಾ ಕ್ಯಾರೋಟಿನ್ ಮತ್ತು ಫೈಬರ್ ಅಂಶಗಳಿಂದಾಗಿ ಇದು ಬಿಪಿ ನಿಯಂತ್ರಣದಲ್ಲಿಡಲು  ಸಹಾಯ ಮಾಡುತ್ತದೆ. 

 
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.) 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News