ಚಳಿಗಾಲದಲ್ಲಿ ಜ್ಯೂಸ್ ಕುಡಿಯುವುದು ಒಳ್ಳೆಯದೋ ಕೆಟ್ಟದ್ದೋ? ಆಯುರ್ವೇದ ತಜ್ಞರು ಹೇಳುವುದೇನು ?

ತಪ್ಪು ಆಹಾರ ಪದ್ಧತಿ ಚಳಿಗಾಲದಲ್ಲಿ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

Written by - Ranjitha R K | Last Updated : Dec 28, 2023, 03:58 PM IST
  • ಚಯಾಪಚಯ ಹೆಚ್ಚಿಸುವ ಆಹಾರಕ್ಕೆ ಒತ್ತು
  • ಚಳಿಗಾಲದಲ್ಲಿ ಅನೇಕರ ದೇಹದಲ್ಲಿ ಪೋಷಕಾಂಶಗಳ ಕೊರತೆ
  • ಚಳಿಗಾಲದಲ್ಲಿ ಜ್ಯೂಸ್ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಅಥವಾ ಕೆಟ್ಟದ್ದೋ
ಚಳಿಗಾಲದಲ್ಲಿ ಜ್ಯೂಸ್ ಕುಡಿಯುವುದು ಒಳ್ಳೆಯದೋ ಕೆಟ್ಟದ್ದೋ? ಆಯುರ್ವೇದ ತಜ್ಞರು ಹೇಳುವುದೇನು ?  title=

ಬೆಂಗಳೂರು : ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ಮನೆ ಬಿಟ್ಟು ಹಿರಕ್ಕೆ ಬರುವುದೇ ಒಂದು ಸಾಹಸ. ಈ ಸಮಯದಲ್ಲಿ ದೇಹವನ್ನು ಎಷ್ಟು ಸಾಧ್ಯವೂ ಅಷ್ಟು ಬೆಚ್ಚಗಿಟ್ಟುಕೊಳ್ಳಬೇಕು. ಇದರೊಂದಿಗೆ ಸರಿಯಾದ ಆಹಾರ ಪದ್ದತಿಯನ್ನು ಅನುಸರಿಸುವುದು ಕೂಡಾ ಬಹಳ ಮುಖ್ಯ. ತಪ್ಪು ಆಹಾರ ಪದ್ಧತಿ ಚಳಿಗಾಲದಲ್ಲಿ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಚಳಿಗಾಲದಲ್ಲಿ ಚಯಾಪಚಯ ಹೆಚ್ಚಿಸುವ ಆಹಾರವನ್ನು ಸೇವಿಸುವಂತೆ ಸಲಹೆ ನೀಡಲಾಗುತ್ತದೆ. ಅಂದರೆ ಬೇಳೆಕಾಳುಗಳು, ಮೊಳಕೆ ಕಾಳು, ತರಕಾರಿಗಳು, ಹಣ್ಣುಗಳು ಮತ್ತು ಕಾರ್ಬೋಹೈಡ್ರೇಟ್‌ಗಳು ಕಡಿಮೆ ಇರುವ ಆಹಾರಗಳನ್ನು ಚಳಿಗಾಲದಲ್ಲಿ ಸೇವಿಸುವುದು ಉತ್ತಮ. ಚಳಿಗಾಲದಲ್ಲಿ ಅನೇಕರ ದೇಹದಲ್ಲಿ ಪೋಷಕಾಂಶಗಳ ಕೊರತೆ ಎದ್ದು ಕಾಣುತ್ತದೆ. ಹೀಗಾದ ಜ್ಯೂಸ್ ಸೇವನೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಆದರೆ ಚಳಿಗಾಲದಲ್ಲಿ ಜ್ಯೂಸ್ ಸೇವನೆ  ಆರೋಗ್ಯಕ್ಕೆ ಒಳ್ಳೆಯದೋ ಅಥವಾ ಕೆಟ್ಟದ್ದೋ ? ಆಯುರ್ವೇದ ಈ ಬಗ್ಗೆ ಏನು ಹೇಳುತ್ತದೆ ಎನ್ನುವ ಮಾಹಿತಿ ಇಲ್ಲಿದೆ. 

ಇದನ್ನೂ ಓದಿ : Benefits of Elaichi: ಪ್ರತಿದಿನ ಏಲಕ್ಕಿ ಸೇವಿಸಿದ್ರೆ ಏನಾಗುತ್ತೆ ಗೊತ್ತಾ..?

ಏನು ಹೇಳುತ್ತದೆ ಆಯುರ್ವೇದ ? : 
ಆಯುರ್ವೇದದ ಪ್ರಕಾರ, ಚಳಿಗಾಲದಲ್ಲಿ ಜೀರ್ಣಾಂಗ ವ್ಯವಸ್ಥೆಯು ದುರ್ಬಲವಾಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ಜ್ಯೂಸ್ ಕುಡಿಯುವುದು ಆಯಾಸ ಮತ್ತು ವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.  ಹಾಗಂತ ಚಳಿಗಾಲದಲ್ಲಿ ಜ್ಯೂಸ್ ಕುಡಿಯಬಾರದು ಎಂದಲ್ಲ. ವೈದ್ಯಕೀಯ ಆರೋಗ್ಯ ತಜ್ಞರ ಪ್ರಕಾರ, ಜ್ಯೂಸ್ ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಇದನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಪ್ರಯೋಜನಕಾರಿಯಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. 

 ಜ್ಯೂಸ್ ಅನಾರೋಗ್ಯಕರ ಎನ್ನುವುದರ ಹಿಂದಿನ ಕಾರಣ : 
ಜ್ಯೂಸ್ ಹೆಚ್ಚಿನ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತದೆ. ಇದು ನಿಮ್ಮ ದೇಹದಲ್ಲಿ ಹೆಚ್ಚುವರಿ ಸಕ್ಕರೆಯನ್ನು ಸಂಗ್ರಹಿಸಲು ಕಾರಣವಾಗಬಹುದು. ಆದ್ದರಿಂದ, ಚಳಿಗಾಲದಲ್ಲಿ ಹೆಚ್ಚು ಜ್ಯೂಸ್ ಕುಡಿಯಬೇಡಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಚಳಿಗಾಲದಲ್ಲಿ ಹೆಚ್ಚು ಜ್ಯೂಸ್ ಕುಡಿಯುವುದು ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅಲ್ಲದೆ ಜ್ಯೂಸ್ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟುಮಾಡುತ್ತದೆ ಮತ್ತು ವಾಂತಿಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಜ್ಯೂಸ್ ಹಲ್ಲುಗಳಿಗೆ ಕೂಡಾ ಒಳ್ಳೆಯದಲ್ಲ. ಇದು ಕುಳಿಗಳಿಗೆ ಕಾರಣವಾಗಬಹುದು. ಆದರೆ ಚಳಿಗಾಲದಲ್ಲಿ ಕುಡಿಯಬಹುದಾದ ಕೆಲವು ಜ್ಯೂಸ್‌ಗಳಿವೆ. 

ಇದನ್ನೂ ಓದಿ : ಈ ರೋಗಗಳನ್ನು ಬುಡ ಸಮೇತ ಕಿತ್ತೆಸೆಯುವುದು ಒಂದು ತುಂಡು ಬೆಲ್ಲ !

ಕಿತ್ತಳೆ ರಸ : 
ಕಿತ್ತಳೆ ರಸದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಶೀತ ಮತ್ತು ಕೆಮ್ಮಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಉರಿಯೂತ ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕ್ರ್ಯಾನ್ಬೆರಿ ಜ್ಯೂಸ್:
ಈ ಜ್ಯೂಸ್ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಯೂರಿಕ್ ಸೋಂಕಿನ ಅಪಾಯಗಳಿಂದ ರಕ್ಷಿಸುತ್ತದೆ.

ಎಬಿಸಿ ಜ್ಯೂಸ್ : 
ಎಬಿಸಿ ಜ್ಯೂಸ್ ಎಂದರೆ ಸೇಬು, ಬೀಟ್ರೂಟ್ ಮತ್ತು ಕ್ಯಾರೆಟ್ ಜ್ಯೂಸ್. ಈ ರಸವು ಬೀಟಾ-ಕ್ಯಾರೋಟಿನ್‌ನಲ್ಲಿ ಸಮೃದ್ಧವಾಗಿದೆ. ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಫೋಲೇಟ್‌ನಂತಹ ಅನೇಕ ಅಗತ್ಯ ಪೋಷಕಾಂಶಗಳನ್ನು ಇದು ಹೊಂದಿರುತ್ತದೆ. ಈ ಜ್ಯೂಸ್ ಕುಡಿಯುವುದರಿಂದ ಊತದ ಸಮಸ್ಯೆಯನ್ನು ಕಡಿಮೆ ಮಾಡಬಹುದು. 

(ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News