Coriander Leaves Benefits: ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಈ ಸಮಸ್ಯೆಗಳಿಗೂ ಪರಿಹಾರ ನೀಡುತ್ತೆ ಕೊತ್ತಂಬರಿ ಸೊಪ್ಪು

Coriander Leaves Benefits: ಸಾಮಾನ್ಯವಾಗಿ ಆಹಾರದ ರುಚಿ ಹೆಚ್ಚಿಸಲು ಕೊತ್ತಂಬರಿ ಸೊಪ್ಪನ್ನು ಬಳಸಲಾಗುತ್ತದೆ. ಆದರೆ, ಇದು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?

Written by - Yashaswini V | Last Updated : Jun 13, 2022, 10:34 AM IST
  • ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್‌ಗಳು ಮತ್ತು ಪ್ರೋಟೀನ್‌ಗಳ ಜೊತೆಗೆ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮ್ಯಾಂಗನೀಸ್ ಹೇರಳವಾಗಿ ಕಂಡುಬರುತ್ತದೆ
  • ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.
  • ಮಾತ್ರವಲ್ಲ ಕೊತ್ತಂಬರಿ ಸೊಪ್ಪಿನ ನಿಯಮಿತ ಸೇವನೆಯು ಹೃದಯ ಸಂಬಂಧಿ ಸಮಸ್ಯೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
Coriander Leaves Benefits: ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಈ ಸಮಸ್ಯೆಗಳಿಗೂ ಪರಿಹಾರ ನೀಡುತ್ತೆ ಕೊತ್ತಂಬರಿ ಸೊಪ್ಪು  title=
Coriander Leaves Benefits

ಕೊತ್ತಂಬರಿ ಸೊಪ್ಪಿನ ಪ್ರಯೋಜನಗಳು:  ಹಸಿರು ಕೊತ್ತಂಬರಿಯು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಅದರ ಪರಿಮಳವು ತುಂಬಾ ಉಲ್ಲಾಸಕರವಾಗಿರುತ್ತದೆ. ಹಸಿರು ಕೊತ್ತಂಬರಿ ಎಲೆಗಳಲ್ಲಿ ಅಂತಹ ಅನೇಕ ಕಿಣ್ವಗಳು  ಕಂಡುಬರುತ್ತವೆ, ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಯುರ್ವೇದ ವೈದ್ಯ ಡಾ. ಅಬ್ರಾರ್ ಮುಲ್ತಾನಿ ಅವರ ಪ್ರಕಾರ, ಅಧಿಕ ರಕ್ತದೊತ್ತಡ ಅಥವಾ ಟೈಪ್ ಟು ಡಯಾಬಿಟಿಸ್ ಸಮಸ್ಯೆ ಇರುವವರಿಗೆ ಹಸಿರು ಕೊತ್ತಂಬರಿ ಸೊಪ್ಪನ್ನು ತಿನ್ನುವುದರಿಂದ ಹೆಚ್ಚು ಪ್ರಯೋಜನ ಪಡೆಯುತ್ತಾರೆ.

ಕೊತ್ತಂಬರಿ ಸೊಪ್ಪನ್ನು ಹೆಚ್ಚಾಗಿ ಅಲಂಕಾರಕ್ಕಾಗಿ ಬಳಸಲಾಗುತ್ತದೆ. ಆದಾಗ್ಯೂ, ಹಸಿ ಕೊತ್ತಂಬರಿ ಸೊಪ್ಪನ್ನು ತಿನ್ನುವುದು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿ ಎಂದು ಕೆಲವೇ ಜನರಿಗೆ ತಿಳಿದಿದೆ. ಕೊತ್ತಂಬರಿ ಸೊಪ್ಪಿನಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಪ್ರೋಟೀನ್ ಇದೆ. ಜೊತೆಗೆ ಕೊತ್ತಂಬರಿ ಸೊಪ್ಪಿನಲ್ಲಿ ಸ್ವಲ್ಪ ಪ್ರಮಾಣದ ಕ್ಯಾಲ್ಸಿಯಂ, ಫಾಸ್ಪರಸ್ ಮತ್ತು ಪೊಟ್ಯಾಸಿಯಮ್ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು. 

ಹೃದಯದ ಆರೋಗ್ಯಕ್ಕೆ ಹಸಿರು ಕೊತ್ತಂಬರಿ ಪ್ರಯೋಜನಕಾರಿ:
ಆಯುರ್ವೇದ ತಜ್ಞರಾದ ಡಾ. ಅಬ್ರಾರ್ ಮುಲ್ತಾನಿ ಅವರ ಪ್ರಕಾರ, ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್‌ಗಳು ಮತ್ತು ಪ್ರೋಟೀನ್‌ಗಳ ಜೊತೆಗೆ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮ್ಯಾಂಗನೀಸ್ ಹೇರಳವಾಗಿ ಕಂಡುಬರುತ್ತದೆ, ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಹೃದಯ ಸಂಬಂಧಿ ಸಮಸ್ಯೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ- Heart Attack Risk: ಈ ಸೊಪ್ಪಿನ ಸೇವನೆಯಿಂದ ಕಡಿಮೆ ಆಗುತ್ತೆ ಹೃದಯಾಘಾತದ ಅಪಾಯ

ಹಸಿರು ಕೊತ್ತಂಬರಿ ಎಲೆಗಳ ಪ್ರಯೋಜನಗಳು:
* ಹಸಿರು ಕೊತ್ತಂಬರಿಯು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ, ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.
* ಕೊತ್ತಂಬರಿ ಸೊಪ್ಪು ಚಯಾಪಚಯವನ್ನು ಉತ್ತೇಜಿಸಲು,  ಹೊಟ್ಟೆ ಉಬ್ಬರ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಂದ ದೂರವಿರಿಸಲು ಸಹ ಪ್ರಯೋಜನಕಾರಿಯಾಗಿದೆ.
* ಕೊತ್ತಂಬರಿ ಸೊಪ್ಪಿನಲ್ಲಿ ಇರುವಂತಹ ಆ್ಯಂಟಿ ಆಕ್ಸಿಡೆಂಟ್‌ಗಳು ಒತ್ತಡವನ್ನು ಕಡಿಮೆ ಮಾಡಲು ಸಹಕಾರಿ. 
* ಇದರ ಸೇವನೆಯಿಂದ ಆತಂಕದ ಸಮಸ್ಯೆ ನಿವಾರಣೆಯಾಗುತ್ತದೆ. 
* ಹಸಿರು ಕೊತ್ತಂಬರಿ ಸೊಪ್ಪನ್ನು ತಿನ್ನುವುದರಿಂದ ಜ್ಞಾಪಕ ಶಕ್ತಿ ಹೆಚ್ಚುತ್ತದೆ ಎನ್ನಲಾಗುತ್ತದೆ.
*  ಕೊತ್ತಂಬರಿ ಸೊಪ್ಪು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ತುಂಬಾ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ- ಹೃದಯಾಘಾತದ ಅಪಾಯದಿಂದ ಪಾರಾಗಲು ತಪ್ಪದೇ ಸೇವಿಸಿ ಈ ಡ್ರೈ ಫ್ರೂಟ್

ಚರ್ಮಕ್ಕೆ ಪ್ರಯೋಜನಕಾರಿ:
ಚರ್ಮದ ಸೋಂಕುಗಳನ್ನು ತೊಡೆದುಹಾಕಲು ಸಿಲಾಂಟ್ರೋ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಈ ಎಲೆಗಳು ಉರಿಯೂತ ಮತ್ತು ತುರಿಕೆ ನಿವಾರಿಸುವ ಗುಣಗಳನ್ನು ಹೊಂದಿವೆ. ಕೊತ್ತಂಬರಿಯಲ್ಲಿರುವ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಚರ್ಮದ  ಹಾನಿಯಿಂದ ರಕ್ಷಿಸುತ್ತದೆ ಎಂದೂ ಸಹ ಹೇಳಲಾಗುತ್ತದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News