ಒಂದೇ ತಿಂಗಳಲ್ಲಿ 5 ಕೆಜಿ ತೂಕ ಇಳಿಸುತ್ತೆ ಸೌತೆಕಾಯಿ: ಆದ್ರೆ ತಿನ್ನುವ ಸಮಯ-ವಿಧಾನ ಇದೇ ಆಗಿರಬೇಕು

Cucumber Benefits: ಸೌತೆಕಾಯಿ ತೂಕವನ್ನು ಕಡಿಮೆ ಮಾಡಲು ಮತ್ತು ದೇಹವನ್ನು ಹೈಡ್ರೀಕರಿಸುವಲ್ಲಿ ಬಹಳ ಸಹಾಯಕವಾಗಿದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಮ್ಯಾಂಗನೀಸ್ ಅನ್ನು ಒಳಗೊಂಡಿರುತ್ತದೆ.

Written by - Bhavishya Shetty | Last Updated : Apr 26, 2024, 05:31 PM IST
    • ಸೌತೆಕಾಯಿಯಲ್ಲಿ ಅನೇಕ ಆರೋಗ್ಯಕಾರಿ ಅಂಶಗಳು ಕಂಡುಬರುತ್ತವೆ
    • ತೂಕವನ್ನು ಕಡಿಮೆ ಮಾಡಲು ಮತ್ತು ದೇಹವನ್ನು ಹೈಡ್ರೀಕರಿಸುವಲ್ಲಿ ಬಹಳ ಸಹಾಯಕ
    • ಸೌತೆಕಾಯಿ ಸಿಪ್ಪೆಯಲ್ಲಿ ಬಹಳಷ್ಟು ಸಿಲಿಕಾ ಅಂಶವಿದೆ
ಒಂದೇ ತಿಂಗಳಲ್ಲಿ 5 ಕೆಜಿ ತೂಕ ಇಳಿಸುತ್ತೆ ಸೌತೆಕಾಯಿ: ಆದ್ರೆ ತಿನ್ನುವ ಸಮಯ-ವಿಧಾನ ಇದೇ ಆಗಿರಬೇಕು title=
Cucumber Benefits

Cucumber Benefits: ಸೌತೆಕಾಯಿಯಲ್ಲಿ ಅನೇಕ ಆರೋಗ್ಯಕಾರಿ ಅಂಶಗಳು ಕಂಡುಬರುತ್ತವೆ. ಇದರಲ್ಲಿ ಖನಿಜಗಳು, ಜೀವಸತ್ವಗಳು ಮತ್ತು ಎಲೆಕ್ಟ್ರೋಲೈಟ್‌’ಗಳಿರುವುದರಿಂದ ಆರೋಗ್ಯದ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ.

ಸೌತೆಕಾಯಿ ತೂಕವನ್ನು ಕಡಿಮೆ ಮಾಡಲು ಮತ್ತು ದೇಹವನ್ನು ಹೈಡ್ರೀಕರಿಸುವಲ್ಲಿ ಬಹಳ ಸಹಾಯಕವಾಗಿದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಮ್ಯಾಂಗನೀಸ್ ಅನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!

ಸೌತೆಕಾಯಿ ಸಿಪ್ಪೆಯಲ್ಲಿ ಬಹಳಷ್ಟು ಸಿಲಿಕಾ ಅಂಶವಿದೆ. ಇದು ಮೂಳೆಗಳನ್ನು ಬಲಪಡಿಸುವುದಲ್ಲದೆ, ಇದರಲ್ಲಿರುವ ಕ್ಯಾಲ್ಸಿಯಂ ಮೂಳೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ.

ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸೌತೆಕಾಯಿಯನ್ನು ಸೇವಿಸಬಹುದು. ಸೌತೆಕಾಯಿಯು ವಿಟಮಿನ್ ಸಿ, ಬೀಟಾ ಕ್ಯಾರೋಟಿನ್ ನಂತಹ ಆಂಟಿ-ಆಕ್ಸಿಡೆಂಟ್‌ಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿರುವ ಸ್ವತಂತ್ರ ರಾಡಿಕಲ್‌ಗಳನ್ನು ತೆಗೆದುಹಾಕುತ್ತದೆ.

ತೂಕ ನಷ್ಟಕ್ಕೆ ಸೌತೆಕಾಯಿಯನ್ನು ಅತ್ಯಂತ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಸೌತೆಕಾಯಿಯು 96 ಪ್ರತಿಶತದಷ್ಟು ನೀರನ್ನು ಹೊಂದಿದ್ದು, ಇದು ಚಯಾಪಚಯವನ್ನು ಬಲಪಡಿಸುತ್ತದೆ. ಇದನ್ನು ತಿನ್ನುವುದರಿಂದ ಹೆಚ್ಚು ಹಸಿವು ಉಂಟಾಗುವುದಿಲ್ಲ.

ಸೌತೆಕಾಯಿಯನ್ನು ರಾತ್ರಿ ಊಟವಾದ ಬಳಿಕ ತಿಂದರೆ ಒಳ್ಳೆಯದು. ಇದು ಜೀರ್ಣಕ್ರಿಯೆಗೆ ಸಹಕಾರಿಯಾಗುವುದಲ್ಲದೆ, ಚಯಾಪಚಯವನ್ನು ಬಲಪಡಿಸುತ್ತದೆ. ಒಂದು ತಿಂಗಳ ಕಾಲ ನಿತ್ಯ ರಾತ್ರಿ ಸಮಯದಲ್ಲಿ ಸೌತೆಕಾಯಿ ತಿನ್ನಿ, ಸಲಾಡ್ ರೂಪದಲ್ಲಿ ಸೇವಿಸಿದರೆ ಮತ್ತಷ್ಟು ಪ್ರಯೋಜನ ನೀಡುತ್ತದೆ.

ಇದನ್ನೂ ಓದಿ: ಐಸಿಸಿ ಪುರುಷರ T20 ವಿಶ್ವಕಪ್ 2024ರ ರಾಯಭಾರಿಯಾಗಿ ಯುವರಾಜ್ ಸಿಂಗ್ ನೇಮಕ

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಪರ್ಯಾಯವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ಯಾವಾಗಲೂ ತಜ್ಞರು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಗೆ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News