ಮೊಸರಿಗೆ ಒಂದು ಚಮಚ ಇದನ್ನು ಬೆರೆಸಿ ಸೇವಿಸಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಸುಲಭವಾಗಿ ಕರಗುವುದು !

High cholesterol control tips:ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ,ಕೆಲವು ವಿಧಾನಗಳನ್ನು ಅನುಸರಿಸುವ ಮೂಲಕ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಬಹುದು.    

Written by - Ranjitha R K | Last Updated : May 29, 2024, 12:48 PM IST
  • ಜೀವನಶೈಲಿ ಮತ್ತು ಸೇವಿಸುವ ಆಹಾರ ನಮ್ಮನ್ನು ಕಾಯಿಲೆಗಳತ್ತ ತಳ್ಳುತ್ತಿದೆ.
  • ಯುವಕರು ಕೂಡಾ ಕೊಲೆಸ್ಟ್ರಾಲ್ ಸಮಸ್ಯೆಯನ್ನು ಎದುರಿಸುವಂತಾಗಿದೆ.
  • ಸರಿಯಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.
ಮೊಸರಿಗೆ ಒಂದು ಚಮಚ ಇದನ್ನು ಬೆರೆಸಿ ಸೇವಿಸಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಸುಲಭವಾಗಿ ಕರಗುವುದು ! title=

High cholesterol control tips : ಇತ್ತೀಚಿನ ದಿನಗಳಲ್ಲಿ ನಾವು ಅನುಸರಿಸುತ್ತಿರುವ ತಪ್ಪು ಜೀವನಶೈಲಿ ಮತ್ತು ಸೇವಿಸುವ ಆಹಾರ ನಮ್ಮನ್ನು ಕಾಯಿಲೆಗಳತ್ತ ತಳ್ಳುತ್ತಿದೆ.ಇತ್ತೀಚಿನ ದಿನಗಳಲ್ಲಿ ಯುವಕರು ಕೂಡಾ ಕೊಲೆಸ್ಟ್ರಾಲ್ ಸಮಸ್ಯೆಯನ್ನು ಎದುರಿಸುವಂತಾಗಿದೆ.ದೇಹದಲ್ಲಿ  ಹೆಚ್ಚಾಗುತ್ತಿರುವ ಕೊಲೆಸ್ಟ್ರಾಲ್ ಪ್ರಮಾಣವು ಹೃದ್ರೋಗದಂತಹ ಗಂಭೀರ ಕಾಯಿಲೆಗಳ ಕಡೆಗೆ ನಿಮ್ಮನ್ನು ತಳ್ಳಬಹುದು.ಆದ್ದರಿಂದ, ಸರಿಯಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ,ಕೆಲವು ವಿಧಾನಗಳನ್ನು ಅನುಸರಿಸುವ ಮೂಲಕ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಬಹುದು.  

ಇಸಾಬ್ಗೋಲ್  : 
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ನಿಯಂತ್ರಿಸುವ ಸಲುವಾಗಿ  ಅನೇಕ ಮನೆಮದ್ದುಗಳನ್ನು ಪ್ರಯತ್ನಿಸಬಹುದು.ಅವುಗಳಲ್ಲಿ ಅತ್ಯಂತ ಪರಿಣಾಮಕಾರಿಯಾದ ಮನೆಮದ್ದು ಎಂದರೆ ಇಸಾಬ್ಗೋಲ್.ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.ಇದರ ಸೇವನೆ ಮೂಲಕ ನಮ್ಮ ದೇಹದ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್  ತೆಗೆದುಹಾಕಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ.

ಇದನ್ನೂ ಓದಿ : Blood Sugar : ಮಧುಮೇಹ ಇರುವವರು ಲವಂಗ ತಿಂದರೆ ಏನಾಗುತ್ತೆ ಗೊತ್ತಾ?

ಇಸಾಬ್ಗೋಲ್ ಎಂದರೇನು ? : 
ಇಸಾಬ್ಗೋಲ್ ವಿಶೇಷ ಅಂಶಗಳನ್ನು ಒಳಗೊಂಡಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳಲು ಕರುಳಿಗೆ ಬಿಡುವುದಿಲ್ಲ. ಅದರ ಸಹಾಯದಿಂದ ಕೊಲೆಸ್ಟ್ರಾಲ್ ದೇಹದಲ್ಲಿ ಸಂಗ್ರಹವಾಗುವ ಬದಲು ಮಲದ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೇಹದಿಂದ ಹೊರ ಹಾಕಲು ಸಹಾಯ ಮಾಡುತ್ತದೆ. 

ಇದನ್ನು ಮೊಸರಿನ ಜೊತೆ ಸೇವಿಸಿದರೆ ಪ್ರಯೋಜನ : 
ಇಸಾಬ್ಗೋಲ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಮಾತ್ರ ಅದರ ಆರೋಗ್ಯ ಪ್ರಯೋಜನ ಸಿಗುವುದು. ಇದನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಹಾಕಿ ಕುಡಿಯುವ ಪದ್ದತಿಯೂ ಇದೆ. ಆದರೆ, ಮೊಸರಿನೊಂದಿಗೆ ಇಸಾಬ್ಗೋಲ್ ಸೇವಿಸಿದರೆ,ಅದು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು ಎನ್ನುವುದು ಅಧ್ಯಯನದ ಮೂಲಕ ಸಾಬೀತಾಗಿದೆ. 

ಇದನ್ನೂ ಓದಿ :ನಿಂಬೆ ರಸಕ್ಕೆ ಈ ಎಲೆ ಸೇರಿಸಿ ಕುಡಿಯಿರಿ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರಬರುವುದು!ಕೀಲು ನೋವಿನಿಂದಲೂ ಸಿಗುವುದು ಪರಿಹಾರ

ಮೊಸರು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಮಾತ್ರವಲ್ಲ  ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುವ ಹಲವಾರು ಇತರ ಅಂಶಗಳು ಕೂಡಾ ಇದರಲ್ಲಿ ಕಂಡುಬರುತ್ತವೆ.ಆದ್ದರಿಂದ ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ತಾಜಾ ಮೊಸರಿಗೆ ಇಸಾಬ್ಗೋಲ್ ಸೇರಿಸಿ ಅದನ್ನು ಸೇವಿಸಬೇಕು.  ಇಸಾಬ್ಗೋಲ್ ಅನ್ನು ಮೊಸರಿನೊಂದಿಗೆ ವಾರಕ್ಕೆ ಎರಡರಿಂದ ಮೂರು ಬಾರಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎನ್ನುವುದು ಅನೇಕ ಅಧ್ಯಯನಗಳಿಂದ ಕಂಡು ಕೊಂಡಿರುವ ಸತ್ಯ. 

(ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ._

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News