Curd/Yoghurt Tips: ಮೊಸರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ತಿನ್ನುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ವಿಶೇಷವಾಗಿ ಬೇಸಿಗೆಯಲ್ಲಿ, ಇದು ಹೊಟ್ಟೆಯ ಹಲವು ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಆದರೆ ಮೊಸರನ್ನು ಕೆಲವು ವಸ್ತುಗಳೊಂದಿಗೆ ತಿನ್ನಬಾರದು ಎಂದು ನಿಮಗೆ ತಿಳಿದಿದೆಯೇ. ಕೆಲವು ಪದಾರ್ಥಗಳನ್ನು ಮೊಸರಿನೊಂದಿಗೆ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುತ್ತದೆ.
ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಮೊಸರು:
ಮೊಸರು (Curd) ಪ್ರೋಬಯಾಟಿಕ್ಗಳನ್ನು ಹೊಂದಿರುತ್ತದೆ. ಜೀರ್ಣಕ್ರಿಯೆಗೆ ಇದು ಮುಖ್ಯವಾಗಿದೆ. ಇದನ್ನು ತಿನ್ನುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುವುದಿಲ್ಲ. ಜೀರ್ಣಕ್ರಿಯೆ ಉತ್ತಮವಾಗಿರುವುದರ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ದೂರವಿರಬಹುದು.
ಇದನ್ನೂ ಓದಿ- Skin Care : ಕುತ್ತಿಗೆ ಸುತ್ತಲಿನ ಕಪ್ಪು ಕಲೆಯನ್ನು ತೊಡೆದುಹಾಕಲು ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ
ಮೊಸರಿನಲ್ಲಿ ವಿಟಮಿನ್ ಬಿ -2, ವಿಟಮಿನ್ ಬಿ -12 (Vitamin B-12), ರಂಜಕ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಇತ್ಯಾದಿ ಇರುತ್ತದೆ. ಆದರೆ ಮೊಸರಿನೊಂದಿಗೆ ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಲಾಗುತ್ತದೆ. ಹಾಗಿದ್ದರೆ ಮೊಸರಿನ ಜೊತೆಗೆ ಯಾವ ಆಹಾರಗಳನ್ನು ಸೇವಿಸಬಾರದು ಎಂಬುದನ್ನು ತಿಳಿಯೋಣ...
>> ಮೊಸರಿನೊಂದಿಗೆ ಮೀನು ಸೇವಿಸುವುದನ್ನು ನಿಷೇಧಿಸಲಾಗಿದೆ. ಇದನ್ನು ಆಯುರ್ವೇದದಲ್ಲೂ ಉಲ್ಲೇಖಿಸಲಾಗಿದೆ.
>> ಆಧುನಿಕ ವಿಜ್ಞಾನದ ದೃಷ್ಟಿಕೋನದಿಂದ, ಇದನ್ನು ನಿಷೇಧಿಸಲಾಗಿದೆ. ಏಕೆಂದರೆ ಮೀನು ಮತ್ತು ಮೊಸರು ಎರಡೂ ಪ್ರೋಟೀನ್ನ ಉತ್ತಮ ಮೂಲಗಳಾಗಿವೆ. ತುಂಬಾ ಪ್ರೋಟೀನ್ ತಿನ್ನುವುದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಉದ್ಭವವಾಗುವ ಸಾಧ್ಯತೆ ಇದೆ. ಇದಲ್ಲದೆ ಹೊಟ್ಟೆ ಉಬ್ಬರದಂತಹ ಸಮಸ್ಯೆಗಳೂ ಉಂಟಾಗಬಹುದು ಎಂದು ಹೇಳಲಾಗುತ್ತದೆ.
ಇದನ್ನೂ ಓದಿ- ಈರುಳ್ಳಿ ಕತ್ತರಿಸುವಾಗ ಈ ಟ್ರಿಕ್ಸ್ ಬಳಸಿ, ಖಂಡಿತಾ ಕಣ್ಣಲ್ಲಿ ನೀರು ಬರುವುದಿಲ್ಲ.
>> ಮೊಸರು ಸೇವಿಸಿದ ನಂತರ ಹೆಚ್ಚು ಎಣ್ಣೆಯುಕ್ತ ಆಹಾರ ಸೇವಿಸಬೇಡಿ. ಇದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುವ ಸಾಧ್ಯತೆ ಇದೆ.
>> ಮೊಸರಿನ ಜೊತೆಗೆ, ಮೊಸರು ಸೇವಿಸುವ ಕೆಲವೇ ನಿಮಿಷಗಳ ಮೊದಲು ಅಥವಾ ನಂತರ ಯಾವುದೇ ಕಾರಣಕ್ಕೂ ಹಾಲನ್ನು ಸೇವಿಸಬಾರದು. ಇದು ಮಲಬದ್ಧತೆ, ಅತಿಸಾರ ಇತ್ಯಾದಿಗಳಿಗೆ ಕಾರಣವಾಗಬಹುದು.
>> ಸಿಟ್ರಸ್ ಹಣ್ಣುಗಳನ್ನು ಮೊಸರಿನೊಂದಿಗೆ ತಿನ್ನಬಾರದು. ಇದರಿಂದಾಗಿ ದೇಹದ ಜೀರ್ಣಾಂಗ ವ್ಯವಸ್ಥೆಯು ಹಾಳಾಗುತ್ತದೆ.
(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಂಪೂರ್ಣ ಸತ್ಯವಾಗಿದೆ ಮತ್ತು ಸ್ಫುಟವಾಗಿದೆ ಎಂಬುದನ್ನು ಝೀ ಹಿಂದೂಸ್ತಾನ್ ಕನ್ನಡ ಪುಷ್ಟೀಕರಿಸುವುದಿಲ್ಲ. ಈ ಮಾಹಿತಿಯನ್ನು ಅನುಸರಿಸುವ ಮುನ್ನ ಸಂಬಂಧಿತ ಕ್ಷೇತ್ರದ ತಜ್ಞರ ಸಲಹೆ ಪಡೆಯುವುದು ಉತ್ತಮ)
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.