Curry leaves for Diabetes control: ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ಮತ್ತು ಬೊಜ್ಜು ಬರದಂತೆ ತಡೆಯಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು. ಇದು ದೇಹದಲ್ಲಿನ ಕೆಟ್ಟ ಕೊಬ್ಬನ್ನು ನಿಯಂತ್ರಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ ಅಷ್ಟೆ ಅಲ್ಲದೆ  ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 


COMMERCIAL BREAK
SCROLL TO CONTINUE READING

ಇದು ಗ್ಯಾಸ್ಟ್ರೊದಂತಹ ಗಂಭೀರ ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳು ಸೇರಿದಂತೆ ವಿವಿಧ ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು,  ವಿಟಮಿನ್ ಎ, ಬಿ ಮತ್ತು ಇ ನಿಕೋಟಿನಿಕ್ ಆಮ್ಲದಂತಹ ಅಂಶಗಳಿಂದ ಕೂಡಿದೆ. 


ಕರಿಬೇವಿನ ಎಲೆಗಳು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ದಿವ್ಯ ಔಷಧವೆಂದೇ ಹೇಳಬಹುದು. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಆರೈಕೆಗೂ ತುಂಬಾ ಒಳ್ಳೆಯದು. 


ರೋಗನಿರೋಧಕ ಶಕ್ತಿ ಹೆಚ್ಚಾದಂತೆ ಅನೇಕ ರೋಗಗಳು ನಮ್ಮನ್ನು ತಲುಪುವುದಿಲ್ಲ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ರಕ್ತವನ್ನು ಶುಚಿಗೊಳಿಸುವುದರೊಂದಿಗೆ ಮೂಳೆ ಆರೋಗ್ಯವನ್ನು ಕಾಪಾಡುತ್ತದೆ. 


ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.