ಸೀತಾಫಲ ಎಲೆಯಿಂದ ದೇಹಕ್ಕಿದೆ ಹಲವಾರು ಪ್ರಯೋಜನ
Custard Apple Leaves: ಸೀತಾಫಲದ ಹೊರತಾಗಿ ಇದರ ಎಲೆಗಳೂ ದೇಹಕ್ಕೆ ಪ್ರಯೋಜನಕಾರಿ ಎನ್ನುತ್ತಾರೆ ಆಯುರ್ವೇದ ತಜ್ಞರು. ಇದರ ಗುಣಲಕ್ಷಣಗಳು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
Custard Apple Leaves Benefits : ಸೀತಾಫಲ ಹಣ್ಣನ್ನು ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಇದರಲ್ಲಿ ದೇಹಕ್ಕೆ ಅಗತ್ಯವಿರುವ ಫೈಬರ್, ವಿಟಮಿನ್ ಸಿ, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮುಂತಾದ ಹೆಚ್ಚಿನ ಪ್ರಮಾಣದ ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ದೇಹಕ್ಕೆ ವಿಟಮಿನ್-ಎ, ವಿಟಮಿನ್-ಸಿ, ವಿಟಮಿನ್-ಬಿ, ಕಬ್ಬಿಣಾಂಶ ಮತ್ತು ಕ್ಯಾಲ್ಸಿಯಂ ದೊರೆಯುತ್ತದೆ. ಸೀತಾಫಲ ಎಲೆಗಳೂ ದೇಹಕ್ಕೆ ಪರಿಣಾಮಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಆದ್ದರಿಂದ ಈ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತೆ: ನಾರಿನಂಶ ಮತ್ತು ಇತರ ಔಷಧೀಯ ಗುಣಗಳಿವೆ. ಆದ್ದರಿಂದ ಇವುಗಳನ್ನು ನಿಯಮಿತವಾಗಿ ಜಗಿಯುವುದರಿಂದ ಜೀರ್ಣಕ್ರಿಯೆಯು ಆರೋಗ್ಯಕರವಾಗಿರುತ್ತದೆ. ಇದು ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಇದು ಹೆಚ್ಚಿನ ಪ್ರಮಾಣದಲ್ಲಿ ಟ್ಯಾನಿನ್ ಎಂಬ ಕಿಣ್ವವನ್ನು ಸಹ ಹೊಂದಿರುತ್ತದೆ. ಇವುಗಳನ್ನು ತಿನ್ನುವುದರಿಂದ ಲೂಸ್ ಮೋಷನ್ ಸಮಸ್ಯೆಗಳು ನಿವಾರಣೆಯಾಗುತ್ತವೆ.
ಇದನ್ನೂ ಓದಿ: ಬೊಜ್ಜು ಕಡಿಮೆ ಮಾಡುವ ಈ ಹಣ್ಣು ಮನುಷ್ಯರ ಮಾಂಸವನ್ನೇ ಕರಗಿಸಿಬಿಡುತ್ತದೆಯಂತೆ ! ಇದು ಸತ್ಯ
ಮಧುಮೇಹ ನಿಯಂತ್ರಿಸುತ್ತದೆ: ಸೀತಾಫಲ ಎಲೆಗಳಲ್ಲಿ ಇರುವ ನಾರಿನಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದಲ್ಲದೆ ಮಧುಮೇಹ ಇರುವವರಿಗೆ ಇದು ತುಂಬಾ ಪ್ರಯೋಜನಕಾರಿ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.
ಮೊಡವೆಗಳನ್ನು ಹೋಗಲಾಡಿಸಲು: ಸೀತಾಫಲದ ಎಲೆಗಳ ಪ್ರಯೋಜನಗಳು ಮೊಡವೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದರಲ್ಲಿರುವ ವಿಟಮಿನ್ ಸಿ ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದಲ್ಲದೆ, ಈ ಎಲೆಗಳಲ್ಲಿ ಕಂಡುಬರುವ ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳು ಮೊಡವೆಗಳು ಹರಡುವುದನ್ನು ತಡೆಯುತ್ತದೆ.
ಹೃದಯದ ಆರೋಗ್ಯಕ್ಕಾಗಿ: ಸೀತಾಫಲದ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕೂಡ ಲಭ್ಯವಿದೆ. ಆದ್ದರಿಂದ ಇವುಗಳನ್ನು ಅಗಿಯುವುದರಿಂದ ಹೃದಯ ಸ್ನಾಯುವಿನ ತೊಂದರೆಗಳನ್ನು ಸುಲಭವಾಗಿ ನಿವಾರಿಸಬಹುದು. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಈ ಎಲೆಯ ನೀರನ್ನು 10 ನಿಮಿಷಗಳವರೆಗೆ ಕೂದಲಿಗೆ ಹಚ್ಚಿದರೆ ಸಾಕು ಬಿಳಿ ಕೂದಲು ಕಪ್ಪಾಗುವುದು !
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.