How to control blood sugar level : ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಮುಖ್ಯ. ಏಕೆಂದರೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಂಟ್ರೋಲ್ ನಲ್ಲಿ ಇಡದಿದ್ದರೆ ಅದು ಅನೇಕ ರೋಗಗಳನ್ನು ಜೊತೆಯಲ್ಲಿ ಹೊತ್ತುಕೊಂಡು ಬರುತ್ತದೆ. ಮಧುಮೇಹ ರೋಗಿಗಳು ನಿಯಮಿತ ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಮತ್ತು ವ್ಯಾಯಾಮದಂತಹ ನಿಯಮಗಳನ್ನು ಪಾಲಿಸಬೇಕು. ಸ್ವಲ್ಪ ಅಜಾಗರೂಕತೆ ತೋರಿದರೂ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಏರಿಕೆ ಕಂಡು ಬರಬಹುದು. ಈ ನಿಯಮಗಳ ಜೊತೆಗೆ, ರಕ್ತದಲ್ಲಿನ ಗ್ಲೂಕೋಸ್ ಅಥವಾ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಲು ಕೆಲವು ಮನೆಮದ್ದುಗಳ ಸಹಾಯವನ್ನು ತೆಗೆದುಕೊಳ್ಳಬಹುದು.
ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಇರುವ ಸುಲಭ ಮತ್ತು ಪರಿಣಾಮಕಾರಿ ಮನೆ ಮದ್ದು ಎಂದರೆ ದಾಲ್ಚಿನ್ನಿ ಅಥವಾ ಚಕ್ಕೆ ನೀರು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ವೇಗವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ನೀರನ್ನು ತಯಾರಿಸಲು ಒಂದು ಸರಿಯಾದ ವಿಧಾನ ಮತ್ತು ಕುಡಿಯಲು ನಿರ್ದಿಷ್ಟ ಸಮಯ ಎನ್ನುವುದಿದೆ.
ಇದನ್ನೂ ಓದಿ : ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮಗೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ!!
ಮಧುಮೇಹದಲ್ಲಿ ದಾಲ್ಚಿನ್ನಿ ಸೇವನೆ ಎಷ್ಟು ಪ್ರಯೋಜನಕಾರಿ? :
ಆಯುರ್ವೇದದಲ್ಲಿ, ದಾಲ್ಚಿನ್ನಿಯನ್ನು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಔಷಧವೆಂದು ಕರೆಯಲಾಗುತ್ತದೆ. ದಾಲ್ಚಿನ್ನಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ ಎನ್ನುವುದನ್ನು ಕೆಲವು ಅಧ್ಯಯನಗಳು ಮತ್ತು ಸಂಶೋಧನೆಗಳು ಕೂಡಾ ಸಾಬೀತುಪಡಿಸಿವೆ.
ದಾಲ್ಚಿನ್ನಿ ನೀರನ್ನು ಹೇಗೆ ತಯಾರಿಸುವುದು ?:
ಒಂದು ಲೋಟ ನೀರನ್ನು ಕುದಿಯಲು ಇರಿಸಬೇಕು. ಈ ನೀರಿನಲ್ಲಿ ಅರ್ಧ ಟೀ ಚಮಚ ದಾಲ್ಚಿನ್ನಿ ಪುಡಿಯನ್ನು ಮಿಶ್ರಣ ಮಾಡಿ ಚೆನ್ನಾಗಿ ಕುದಿಸಬೇಕು. ನಂತರ ಈ ನೀರನ್ನು ಶೋಧಿಸಿ ಕುಡಿಯಬೇಕು.
ಇದನ್ನೂ ಓದಿ : ಬರೀ ಎದೆನೋವಲ್ಲ.. ಇವು ಸಹ ಮಾರಕ ಹೃದಯಾಘಾತದ ಲಕ್ಷಣಗಳೇ! ಅಪ್ಪಿತಪ್ಪಿಯೂ ನಿರ್ಲಕ್ಷಿಸದಿರಿ..
ದಾಲ್ಚಿನ್ನಿಯ ಪ್ರಯೋಜನಗಳು :
ಈ ಮಸಾಲೆಯಲ್ಲಿ ಸಿನ್ನಮಾಲ್ಡಿಹೈಡ್‌ನಂತಹ ಸಕ್ರಿಯ ಸಂಯುಕ್ತಗಳು ಕಂಡುಬರುತ್ತವೆ. ಇದು ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ. ಇದು ದೇಹದ ಜೀವಕೋಶಗಳು ಗ್ಲೂಕೋಸ್ ಅನ್ನು ಉತ್ತಮವಾಗಿ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಯಾವಾಗ ಸೇವಿಸಬೇಕು ? :
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ದಾಲ್ಚಿನ್ನಿ ನೀರನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿಯಾಗಿದೆ. ಊಟ ಮಾಡಿದ ನಂತರವೂ ದಾಲ್ಚಿನ್ನಿ ನೀರನ್ನು ಕುಡಿಯಬಹುದು.
ಇದನ್ನು ನೆನಪಿನಲ್ಲಿಡಿ :
ನೀವು ಯಾವುದೇ ರೀತಿಯ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದರೆ, ದಾಲ್ಚಿನ್ನಿ ನೀರನ್ನು ಕುಡಿಯುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಏಕೆಂದರೆ, ಈ ನೀರನ್ನು ಕುಡಿಯುವುದರಿಂದ ಔಷಧಿಗಳೊಂದಿಗೆ ರಿಯಾಕ್ಟ್ ಮಾಡಬಹುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಕನ್ನಡ ಓ\ಇದನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









