Dates for mens health : ಮನೆ, ಕುಟುಂಬ ಮತ್ತು ಕಚೇರಿಯ ದೊಡ್ಡ ಜವಾಬ್ದಾರಿಗಳು ಸೇರಿದಂತೆ ಹೆಚ್ಚಾಗಿ ಪುರುಷರಿಗೆ ಹಲವಾರು ಒತ್ತಡಗಳಿರುತ್ತವೆ. ಇದರಿಂದಾಗಿ ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸುವುದಿಲ್ಲ. ದೇಹಕ್ಕೆ ಸಾಕಷ್ಟು ವಿಶ್ರಾಂತಿ, ಸಮಯೋಚಿತ ಆಹಾರ ಮತ್ತು ಒತ್ತಡವಿಲ್ಲದ ಸಮಯ, ಆರೋಗ್ಯ ಹದಗೆಡಲು ಕಾರಣವಾಗುತ್ತದೆ.


COMMERCIAL BREAK
SCROLL TO CONTINUE READING

ಹೌದು.. ಒತ್ತಡ ಬದುಕಿನಲ್ಲಿರುವ ಪುರುಷರು ತಮ್ಮ ದಿನನಿತ್ಯದ ಆಹಾರದಲ್ಲಿ ಖರ್ಜೂರವನ್ನು ಸೇರಿಸಿಕೊಳ್ಳಬೇಕು. ಇದರಿಂದ ಅವರು ದೇಹಕ್ಕೆ ಬೇಕಾದ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ವಿಟಮಿನ್ ಎ, ವಿಟಮಿನ್ ಬಿ 6, ವಿಟಮಿನ್ ಕೆ, ಪ್ರೊಟೀನ್, ಮ್ಯಾಂಗನೀಸ್, ಮೆಗ್ನೀಸಿಯಮ್, ರಂಜಕ ಮತ್ತು ಸತುವುಗಳಂತಹ ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆ. ಬನ್ನಿ ಸಧ್ಯ ಖರ್ಜೂರದ ಆರೋಗ್ಯ ಪ್ರಯೋಜನಗಳನ್ನು ತಿಳಿಯೋಣ.


ಇದನ್ನೂ ಓದಿ: ʼಲಿವರ್‌ ಸಮಸ್ಯೆʼ ನಿವಾರಣೆಗಾಗಿ ನಿಮ್ಮ ಆಹಾರದಲ್ಲಿ ಈ '4' ವಸ್ತುಗಳನ್ನು ತಪ್ಪದೇ ಸೇರಿಸಿ..! 


ಖರ್ಜೂರದಲ್ಲಿ ಕಬ್ಬಿಣಾಂಶ ಹೇರಳವಾಗಿದ್ದು, ಕೂದಲಿನ ಬೆಳವಣಿಗೆಗೆ ಇದು ತುಂಬಾ ಉಪಯುಕ್ತವಾಗಿದೆ. ಇದರೊಂದಿಗೆ ಇದರಲ್ಲಿರು ವಿಟಮಿನ್ ಇ ಮುಖಕ್ಕೆ ಕಾಂತಿ ನೀಡುತ್ತದೆ.


ಖರ್ಜೂರದಲ್ಲಿರುವ ಪೋಷಕಾಂಶಗಳು ಪುರುಷ ದೇಹಕ್ಕೆ ಎಲ್ಲಾ ರೀತಿಯಲ್ಲೂ ಪ್ರಯೋಜನವನ್ನು ನೀಡುತ್ತದೆ. ಇದನ್ನು ತಿನ್ನುವುದರಿಂದ ಆಹಾರದ ಜೀರ್ಣಕ್ರಿಯೆಯು ಸುಲಭವಾಗುವಂತೆ ಚಯಾಪಚಯವನ್ನು ಸುಧಾರಿಸುತ್ತದೆ. ಇದಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.


ಫೈಬರ್‌ ಖರ್ಜೂರದಲ್ಲಿ ಹೆಚ್ಚಾಗಿರುತ್ತದೆ. ಇದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಲಬದ್ಧತೆಯಂತಹ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ. ಈ ಕಾರಣದಿಂದಾಗಿ, ಆಹಾರವು ಚೆನ್ನಾಗಿ ಜೀರ್ಣವಾಗುತ್ತದೆ ಮತ್ತು ಕ್ರಮೇಣ ತೂಕ ನಷ್ಟ ಪ್ರಾರಂಭವಾಗುತ್ತದೆ.


ಇದನ್ನೂ ಓದಿ: ದಿನಕ್ಕೆ ಒಂದು ನಿಂಬೆಹಣ್ಣು ಸಾಕು ಈ ರೋಗಗಳು ನಿಮ್ಮ ಬಳಿಯೂ ಸುಳಿಯಲ್ಲ!


ಖರ್ಜೂರದಲ್ಲಿ ಸ್ವಾಭಾವಿಕ ಸಿಹಿ ಅಂಶ ಇದ್ದು, ಮಧುಮೇಹಿಗಳಿಗೂ ಹಾನಿಯಾಗುವುದಿಲ್ಲ. ಖರ್ಜೂರವನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಹಾಗೂ ಇನ್ಸುಲಿನ್ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಮೂಳೆಗಳು ದುರ್ಬಲವಾಗಿರುವವರು ತಮ್ಮ ನಿತ್ಯದ ಆಹಾರದಲ್ಲಿ ಖರ್ಜೂರವನ್ನು ಸೇರಿಸಿಕೊಳ್ಳಬೇಕು. ಇದು ಮೂಳೆಗಳನ್ನು ಬಲಪಡಿಸುತ್ತದೆ.


(ಹಕ್ಕುತ್ಯಾಗ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE Kannada news ಅದನ್ನು ಅನುಮೋದಿಸುವುದಿಲ್ಲ.)


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.