Dengue Outbreak In Karnataka- New Guidelines For Schools: ರಾಜ್ಯಾದ್ಯಂತ ಡೆಂಗ್ಯೂ ಜ್ವರದ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 22,000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈವರೆಗೂ ಡೆಂಘೀ ಜ್ವರಕ್ಕೆ 10 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಒಂದು ವರ್ಷದೊಳಗಿನ ಸುಮಾರು 400ಕ್ಕೂ ಹೆಚ್ಚು ಮಕ್ಕಳಲ್ಲಿ ಡೆಂಗ್ಯೂ ಜ್ವರ ಕಂಡು ಬಂದಿದೆ. ಶಾಲೆಗಳಿಗೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 


COMMERCIAL BREAK
SCROLL TO CONTINUE READING

ಕರ್ನಾಟಕದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ (Dengue Outbreak In Karnataka) ದಿನೇ ದಿನೇ ತಾರಕಕ್ಕೇರುತ್ತಿರುವ ಹಿನ್ನಲೆಯಲ್ಲಿ, ವರದಿಗಳ ಬೆನ್ನಲ್ಲೇ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿದೆ. 


ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ-  ಮಾನ್ಸೂನ್‌ನಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಪ್ಪಿಸುವುದು ಹೇಗೆ?


ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಈ ಕೆಳಕಂಡಂತಿದೆ:- 
1. ವಿದ್ಯಾರ್ಥಿಗಳು (ಫುಲ್ ಸ್ಲೀವ್ಡ್ ಟಾಪ್ಸ್/ಶರ್ಟ್ಸ್ & ಪ್ಯಾಂಟ್/ಲೆಗ್ಗಿಂಗ್ಸ್) ಧರಿಸುವುದು ಕಡ್ಡಾಯ. 


2. ಶಾಲೆಗೆ ಬರುವ ಮುನ್ನ ಸೊಳ್ಳೆ ನಿವಾರಕ (Mosquito Repellent) ಗಳನ್ನು ಕೈ-ಕಾಲುಗಳಿಗೆ ಹಚ್ಚಿಕೊಳ್ಳುವುದು.


3. ಡೆಂಗ್ಯೂ ನಿಯಂತ್ರಣ (Dengue Control)  ಕ್ರಮಗಳ ಕುರಿತ Do's & Don't's ಶಾಲೆಯ / ಶಾಲಾ ಕೊಠಡಿಯ ನೋಟಿಸ್‌ ಬೋರ್ಡ್‌ ಗಳಲ್ಲಿ ಪ್ರದರ್ಶಿಸುವುದು


4. ಶುದ್ಧ ನೀರಿನ ಸಂಗ್ರಹಣಾ ಪರಿಕರಗಳನ್ನು ಭದ್ರವಾಗಿ ಮುಚ್ಚುವುದು ಹಾಗೂ ಕಡ್ಡಾಯವಾಗಿ ವಾರಕ್ಕೊಮ್ಮೆ ಉಜ್ಜಿ ತೊಳೆದು ಸ್ವಚ್ಛಗೊಳಿಸಿ. ನಂತರ ನೀರನ್ನು ತುಂಬಿಸುವುದು.


5. ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಕಡ್ಡಾಯವಾಗಿ ಶೀಘ್ರ ವಿಲೇವಾರಿ ಮಾಡುವುದು. 


ಇದನ್ನೂ ಓದಿ- ಎಚ್ಚರದಿಂದಿರಿ..! ಡೆಂಗ್ಯೂ ವಾಸಿಯಾದ ನಂತರವೂ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ!


6. ಶಾಲಾ ಆವರಣದ ಕಟ್ಟಡಗಳ ಟೆರಸ್‌ನ ಮೇಲೆ ಬೀಳುವ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸುವುದು. 


7. ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಮಾಹಿತಿಯನ್ನು ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಪ್ರಚುರಪಡಿಸುವುದು. 


8. ಪೋಷಕರ ಸಭೆಗಳಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಅರಿವು ಮೂಡಿಸುವುದರೊಂದಿಗೆ ಪೋಷಕರ ವಾಟ್ಸಾಪ್ ಗ್ರೂಪ್ ಗಳಲ್ಲಿ ಮಾಹಿತಿ ಹಂಚಿಕೊಳ್ಳುವುದು. 


9. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಸ್.ಡಿ.ಎಂ.ಸಿ ಸಹಕಾರದೊಂದಿಗೆ ಸೊಳ್ಳೆ ನಿರೋಧಕ (Mosquito Repellent) ಗಳನ್ನು ವಿದ್ಯಾರ್ಥಿಗಳಿಗೆ ಆದ್ಯತೆಯ ಮೇಲೆ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು.  


10. ಶಾಲೆಯ ಅಕ್ಕ-ಪಕ್ಕದಲ್ಲಿರುವ ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಸಂಗ್ರಹವಾಗದಂತೆ ಕ್ರಮವಹಿಸುವುದು.


ಅಗತ್ಯವಿದ್ದಲ್ಲಿ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ಪಡೆಯುವುದು.
ಇಷ್ಟು ಅಂಶಗಳನ್ನು ‌ಕಡ್ಡಾಯವಾಗಿ ಪಾಲಿಸುವಂತೆ ಶಿಕ್ಷಣ ‌ಇಲಾಖೆ ಎಲ್ಲಾ ಶಾಲೆಗಳಿಗೂ ಮಾರ್ಗಸೂಚಿ ಪ್ರಕಟಿಸಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.