ಮಧುಮೇಹ ರೋಗಿಗಳು ಈ ಐದು ಆಹಾರಗಳ ಸಹಾಯದಿಂದ ಇಮ್ಯುನಿಟಿ ಹೆಚ್ಚಿಸಿಕೊಳ್ಳಬಹುದು .!
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಹಾರ ಮತ್ತು ಪಾನೀಯಗಳ ಬಗ್ಗೆ ಗಮನ ಹರಿಸುವುದು ಕೂಡಾ ಬಹಳ ಮುಖ್ಯ. ಪ್ರತಿಯೊಬ್ಬರ ಪೌಷ್ಟಿಕಾಂಶ ಮತ್ತು ಕಾರ್ಬೋಹೈಡ್ರೇಟ್ ಅಗತ್ಯಗಳು ವಿಭಿನ್ನವಾಗಿರಬಹುದು.
ಬೆಂಗಳೂರು : ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಈ ಯುಗದಲ್ಲಿ, ರೋಗನಿರೋಧಕ ಶಕ್ತಿಯ ಪಾತ್ರವು ಬಹಳ ಮಹತ್ವದ್ದಾಗಿದೆ. ವಿಶೇಷವಾಗಿ ಮಧುಮೇಹ ರೋಗಿಗಳು ರೋಗ ನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಮಧುಮೇಹವು ನಿಮ್ಮ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರಬಹುದು. ಇದರಿಂದಾಗಿ ಇತರ ಸೋಂಕುಗಳ ಅಪಾಯವೂ ಹೆಚ್ಚಾಗುತ್ತದೆ. ಆದರೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವ ಅನೇಕ ಸೂಪರ್‌ಫುಡ್‌ಗಳಿವೆ. ಅವುಗಳ ಸಹಾಯದಿಂದ, ಮಧುಮೇಹವಿದ್ದಾಗಲೂ ಕೂಡಾ ಆರೋಗ್ಯಕರ ಜೀವನವನ್ನು ನಡೆಸಬಹುದು. ಮಧುಮೇಹವಿದ್ದಾಗ, ಯಾವ ರೀತಿಯ ಜೀವನಶೈಲಿ ನಡೆಸುತ್ತೇವೆ ಎನ್ನುವುದು ಬಹಳ ಮುಖ್ಯವಾಗಿರುತ್ತದೆ. ಸರಿಯಾದ ಆಹಾರ ಮತ್ತು ದೈಹಿಕ ಚಟುವಟಿಕೆಗಳು ಉತ್ತಮ ಜೀವನಶೈಲಿಯ ಪ್ರಮುಖ ಭಾಗಗಳಾಗಿವೆ. ಈ ಸಮಯದಲ್ಲಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಹಾರ ಮತ್ತು ಪಾನೀಯಗಳ ಬಗ್ಗೆ ಗಮನ ಹರಿಸುವುದು ಕೂಡಾ ಬಹಳ ಮುಖ್ಯ. ಪ್ರತಿಯೊಬ್ಬರ ಪೌಷ್ಟಿಕಾಂಶ ಮತ್ತು ಕಾರ್ಬೋಹೈಡ್ರೇಟ್ ಅಗತ್ಯಗಳು ವಿಭಿನ್ನವಾಗಿರಬಹುದು.
ಸಿಟ್ರಸ್ ಹಣ್ಣುಗಳು :
ಚಳಿಗಾಲ ಬಂದಾಗ, ಜನರು ಹೆಚ್ಚಾಗಿ ವಿಟಮಿನ್ ಸಿ ಹೊಂದಿರುವ ಆಹಾರವನ್ನು ಸೇವಿಸುತ್ತಾರೆ. ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿರುವ ಹಣ್ಣುಗಳು ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚು ಮಾಡುತ್ತದೆ. ಇದು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ಮಧುಮೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಿಮ್ಮ ಜೀವನಶೈಲಿಯಲ್ಲಿ ಈ ಐದು ಬದಲಾವಣೆಗಳನ್ನು ಮಾಡಿ
ಕುಂಬಳಕಾಯಿ :
ಕುಂಬಳಕಾಯಿಯನ್ನು ಬಹುತೇಕ ಮಂದಿ ಇಷ್ಟಪಡುವುದಿಲ್ಲ. ಆದರೆ ಇದು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ವಿಟಮಿನ್ ಎ, ಸಿ ಮತ್ತು ಇ ನಂತಹ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಈ ತರಕಾರಿಯಲ್ಲಿ ಹೇರಳವಾಗಿ ಕಂಡು ಬರುತ್ತವೆ. ವಿಟಮಿನ್ ಎ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ :
ಈರುಳ್ಳಿ ಮತ್ತು ಬೆಳ್ಳುಳ್ಳಿ ಅಡುಗೆಗೆ ಘಮ ನೀಡುವುದಲ್ಲದೆ, ರುಚಿಯನ್ನು ಕೂಡಾ ಹೆಚ್ಚಿಸುತ್ತದೆ. ಇದರ ಜೊತೆಗೆ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುವ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಬೆಳ್ಳುಳ್ಳಿಯು ದೇಹದ ನೈಸರ್ಗಿಕ ನಿರ್ವಿಶೀಕರಣವನ್ನು ಬೆಂಬಲಿಸುವ ವಿಶಿಷ್ಟವಾದ ಸಲ್ಫ್ಯೂರಿಕ್ ಸಂಯುಕ್ತಗಳನ್ನು ಹೊಂದಿದೆ.
ಇದನ್ನೂ ಓದಿ : Men Health Tips: ಪುರುಷರು ಚಳಿಗಾಲದಲ್ಲಿ ಇದನ್ನು ಸೇವಿಸಿದರೆ ಸಿಗುತ್ತೆ ಅದ್ಭುತ ಲಾಭ!
ಆಕ್ರೋಟ್ :
ಮೆದುಳಿನ ಆರೋಗ್ಯ ಮತ್ತು ಕಾರ್ಯನಿರ್ವಹಣೆಯನ್ನು ಹೆಚ್ಚಿಸಲು ವಾಲ್‌ನಟ್‌ಗಳನ್ನು ಸಾಮಾನ್ಯವಾಗಿ ಸೇವಿಸಲಾಗುತ್ತದೆ. ಆದರೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ವಾಲ್‌ನಟ್ಸ್‌ನಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಮತ್ತು ವಿಟಮಿನ್ ಇ ಇದೆ. ಈ ಪೋಷಕಾಂಶಗಳು ಉರಿಯೂತದ ಗುಣಲಕ್ಷಣಗಳಿಂದಾಗಿ ಹೃದಯದ ಆರೋಗ್ಯವನ್ನು ಕಾಪಾಡುತ್ತವೆ. ಮತ್ತು ಆರೋಗ್ಯಕರ ಗ್ಲೈಸೆಮಿಕ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.