Diabetics: ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಬೇಕೆ? ಈ ಆಹಾರ ಪದಾರ್ಥಗಳಿಂದ ಅಂತರ ಕಾಯ್ದುಕೊಳ್ಳಿ

Diabetes Control Tips:ಮಧುಮೇಹ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು, ಏಕೆಂದರೆ ಸಣ್ಣ-ಸಣ್ಣ ತಪ್ಪುಗಳಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಹೇಗೆ ತಿಳಿದುಕೊಳ್ಳೋಣ ಬನ್ನಿ,  

Written by - Nitin Tabib | Last Updated : Jan 7, 2023, 10:24 PM IST
  • ಮ್ಮ ಜೀವನಶೈಲಿಯಿಂದ ಕೆಲವು ವಿಷಯಗಳನ್ನು ತೆಗೆದುಹಾಕುವುದರಿಂದ
  • ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು ಎಂಬುದು ನಿಮಗೆ ನಿಮಗೆ ತಿಳಿದಿದೆಯೇ?
  • ಹೌದು, ಕೇವಲ ಚಿಕ್ಕ-ಪುಟ್ಟ ಸಲಹೆಗಳನ್ನು ಅನುಸರಿಸುವ ಮೂಲಕ ನೀವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಬಹುದು.
Diabetics: ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಬೇಕೆ? ಈ ಆಹಾರ ಪದಾರ್ಥಗಳಿಂದ ಅಂತರ ಕಾಯ್ದುಕೊಳ್ಳಿ title=
Taming Diabetics

Diabetes Control Tips For Patients:ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಜನರು ಎಲ್ಲಾ ಕ್ರಮಗಳನ್ನು ಅಳವಡಿಸಿಕೊಂಡ ನಂತರವೂ ಔಷಧಿಗಳ ಮೇಲೆ ಅವಲಂಬಿತರಾಗಿದ್ದಾರೆ, ಆದರೆ ನಿಮ್ಮ ಅಭ್ಯಾಸಗಳನ್ನು ಬದಲಾಯಿಸುವುದರಿಂದ ಮತ್ತು ನಿಮ್ಮ ಜೀವನಶೈಲಿಯಿಂದ ಕೆಲವು ವಿಷಯಗಳನ್ನು ತೆಗೆದುಹಾಕುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು ಎಂಬುದು ನಿಮಗೆ ನಿಮಗೆ ತಿಳಿದಿದೆಯೇ? ಹೌದು, ಕೇವಲ ಚಿಕ್ಕ-ಪುಟ್ಟ ಸಲಹೆಗಳನ್ನು ಅನುಸರಿಸುವ ಮೂಲಕ ನೀವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಬಹುದು.

ಹುರಿದ-ಕರಿದ ಆಹಾರಗಳಿಂದ ದೂರವಿರಿ
ಹುರಿದ ಮತ್ತು ಕರಿದ ಆಹಾರಗಳನ್ನು ತಿನ್ನುವ ಮೂಲಕ ನೀವು ಯಾವುದೇ ರೋಗವನ್ನು ಹೆಚ್ಚಿಸುತ್ತಿರುವಿರಿ ಎಂಬುದು ನಿಮಗೆ ತಿಳಿದಿದೆಯೇ. ಹೌದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕೂಡ ಹೆಚ್ಚಿಸುತ್ತದೆ. ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ಸಮತೋಲನದಲ್ಲಿಲ್ಲದಿದ್ದರೆ ನಿಮ್ಮ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು.

ಮೈದಾದಿಂದ ತಯಾರಿಸಿದ ಪದಾರ್ಥಗಳಿಂದ ದೂರವಿರಿ
ಮಧುಮೇಹಿಗಳಿಗೆ ಮೈದಾ ಮತ್ತು ಅದರಿಂದ ತಯಾರಿಸಲಾಗುವ ಪದಾರ್ಥಗಳು ಅನಾರೋಗ್ಯಕರ. ಡಯಾಬಿಟಿಸ್ ರೋಗಿಗಳು ಮೈದಾದಿಂದ ಮಾಡಿದ ಆಹಾರ ಪದಾರ್ಥಗಳಿಂದ ದೂರವಿರಬೇಕು. ನೀವು ಈ ಆಹಾರಗಳನ್ನು ಸೇವಿಸಿದರೆ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗಬಹುದು. ವಾಸ್ತವದಲ್ಲಿ, ಮೈದಾದಲ್ಲಿ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಹೆಚ್ಚಾಗಿರುತ್ತದೆ, ಇದು ನಿಮ್ಮ ಸಮಸ್ಯೆಯನ್ನು ಹೆಚ್ಚಿಸುತ್ತದೆ.

ಆಲೂಗಡ್ಡೆಯಿಂದ ದೂರವಿರಿ
ಆಲೂಗಡ್ಡೆ ಭಾರತೀಯ ಅಡುಗೆಮನೆಯಲ್ಲಿ ಹೆಚ್ಚು ಬಳಸಲ್ಪಡುವ ತರಕಾರಿಯಾಗಿದೆ, ಆದರೆ ಮಧುಮೇಹ ರೋಗಿಗಳಿಗೆ ಆಲೂಗಡ್ಡೆ ವಿಷವಾಗಿದೆ ಎಂದು ನಿಮಗೆ ತಿಳಿದಿದೆಯೇ? ಕಾರ್ಬೋಹೈಡ್ರೇಟ್‌ಗಳು ಅಧಿಕವಾಗಿರುವುದರ ಜೊತೆಗೆ ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್‌ನ ಪ್ರಮಾಣವೂ ತುಂಬಾ ಹೆಚ್ಚಾಗಿರುತ್ತದೆ, ಇದು ಮಧುಮೇಹದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ-Heart Attack ನಂತಹ ಮಾರಕ ಕಾಯಿಲೆಯಿಂದ ರಕ್ಷಣೆ ಒದಗಿಸುತ್ತದೆ ಈ ಗಿಡದ ತೊಗಟೆ

ಫ್ಲೆವರ್ಡ್ ಮೊಸರು ತಿನ್ನಬೇಡಿ
ಮಧುಮೇಹ ರೋಗಿಗಳು ಫ್ಲೆವರ್ಡ್ ಮೊಸರನ್ನು ಸಹ ಸೇವಿಸಬಾರದು. ವಾಸ್ತವದಲ್ಲಿ, ಇಂತಹ ಮೊಸರಿನಲ್ಲಿ ಸಕ್ಕರೆಯ ಪ್ರಮಾಣವು ತುಂಬಾ ಹೆಚ್ಚಾಗಿರುತ್ತದೆ. ಇದರೊಂದಿಗೆ ಹಲವು ರೀತಿಯ ಕೃತಕ ವಸ್ತುಗಳು ಇದರಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ-Cancer Symptoms: ಶರೀರದ ಈ ಲಕ್ಷಣಗಳು ಕ್ಯಾನ್ಸರ್ ಸಂಕೇತಗಳಾಗಿರಬಹುದು! ಮರೆತೂ ನಿರ್ಲಕ್ಷಿಸಬೇಡಿ

(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಮನೆಮದ್ದು ಹಾಗೂ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News