Cashew Side Effects: ಖಾಲಿ ಹೊಟ್ಟೆಯಲ್ಲಿ ಮರೆತೂ ಗೋಡಂಬಿ ತಿನ್ನಬೇಡಿ

Cashew Side Effects: ಗೋಡಂಬಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ನಿಮಗೆ ಹಾನಿಯಾಗಬಹುದು. ಅದರಲ್ಲೂ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಈ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

Written by - Yashaswini V | Last Updated : Dec 15, 2021, 11:42 AM IST
  • ಇದರಿಂದ ವಾಯು ಮತ್ತು ಗ್ಯಾಸ್ ಸಮಸ್ಯೆ ಉಂಟಾಗುತ್ತದೆ
  • ಅಧಿಕ ರಕ್ತದೊತ್ತಡದ ಸಮಸ್ಯೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗೋಡಂಬಿ ಸೇವನೆ ಹಾನಿಕಾರಕ
  • ಮೂತ್ರಪಿಂಡದ ಕಾಯಿಲೆ ಹೊಂದಿರುವವರೂ ಸಹ ಗೋಡಂಬಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಬಾರದು
Cashew Side Effects: ಖಾಲಿ ಹೊಟ್ಟೆಯಲ್ಲಿ ಮರೆತೂ ಗೋಡಂಬಿ ತಿನ್ನಬೇಡಿ title=
Cashew Side Effects

Cashew Side Effects: ಗೋಡಂಬಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಮೆಗ್ನೀಸಿಯಮ್, ಪೊಟ್ಯಾಸಿಯಮ್, ತಾಮ್ರ, ಸತು, ಕಬ್ಬಿಣ, ಮ್ಯಾಂಗನೀಸ್ ಮತ್ತು ಸೆಲೆನಿಯಂನಂತಹ ಖನಿಜಗಳು ಇದರಲ್ಲಿ ಕಂಡುಬರುತ್ತವೆ ಮತ್ತು ವಿಟಮಿನ್ ಇ ಕೂಡ ಇದರಲ್ಲಿ ಸಮೃದ್ಧವಾಗಿದೆ. ಆದರೆ ಕೆಲವು ಆರೋಗ್ಯ ಸಮಸ್ಯೆ ಹೊಂದಿರುವವರು ಗೋಡಂಬಿ ಸೇವನೆಯನ್ನು ತಪ್ಪಿಸಬೇಕು. ಅದರಲ್ಲೂ ಮುಖ್ಯವಾಗಿ ಖಾಲಿ ಹೊಟ್ಟೆಯಲ್ಲಿ ಹೆಚ್ಚು ಗೋಡಂಬಿಯನ್ನು ಸೇವಿಸಿದರೆ, ಅದು ಹಾನಿ ಉಂಟು ಮಾಡುತ್ತದೆ (Cashew Side Effects).

ಅಧಿಕ ರಕ್ತದೊತ್ತಡದ ಸಮಸ್ಯೆ ಇರುವವರು:
ಗೋಡಂಬಿಯಲ್ಲಿ (Cashew) ಸೋಡಿಯಂ ಇರುತ್ತದೆ. ನೀವು ಇದನ್ನು ಅತಿಯಾಗಿ ಸೇವಿಸಿದರೆ, ಅದು ದೇಹದಲ್ಲಿ ಸೋಡಿಯಂ ಮಟ್ಟವನ್ನು ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡದ ಸಮಸ್ಯೆ ಇರುವವರಲ್ಲಿ ಸೋಡಿಯಂ ಮಟ್ಟ ಹೆಚ್ಚಾಗುವುದರಿಂದ ನಿಮ್ಮ ಸಮಸ್ಯೆ ಹೆಚ್ಚಾಗಬಹುದು.

ಇದನ್ನೂ ಓದಿ- Full Cream Milk: ಫುಲ್ ಕ್ರೀಂ ಹಾಲು ಆರೋಗ್ಯಕ್ಕೆ ಒಳ್ಳೆಯದೇ ಅಥವಾ ಅಪಾಯಕಾರಿಯೇ? ಇಲ್ಲಿದೆ ಮಾಹಿತಿ

ವಾಯು ಮತ್ತು ಅನಿಲ ಸಮಸ್ಯೆಗಳು:
ಗೋಡಂಬಿಯಲ್ಲಿ ಹೆಚ್ಚಿನ ಫೈಬರ್ ಅಂಶವಿದೆ. ಹಾಗಾಗಿ ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಮತ್ತು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ದೇಹದಲ್ಲಿ ಫೈಬರ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದರಿಂದ ವಾಯು ಮತ್ತು ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.
 
ಇದನ್ನೂ ಓದಿ-  Guava Leaves: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೀಬೆ ಎಲೆ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ

ಮೂತ್ರಪಿಂಡದ ಸಮಸ್ಯೆ ಇರುವವರಿಗೆ ಅಪಾಯಕಾರಿ:
ಗೋಡಂಬಿಯಲ್ಲಿ (Cashew Side Effects) ಪೊಟ್ಯಾಸಿಯಮ್ ಇದೆ. ಹಾಗಾಗಿ ಕಿಡ್ನಿ ಸಂಬಂಧಿ ಸಮಸ್ಯೆಗಳಿದ್ದರೆ ದೇಹದಲ್ಲಿ ಪೊಟ್ಯಾಸಿಯಮ್ ಪ್ರಮಾಣ ಹೆಚ್ಚುವುದರಿಂದ ಸಮಸ್ಯೆ ಬಿಗಡಾಯಿಸಬಹುದು. ಕಿಡ್ನಿ ಸಂಬಂಧಿ ಸಮಸ್ಯೆ ಇರುವವರು ಎಂತಹುದೇ ಸಂದರ್ಭದಲ್ಲಿ ಗೋಡಂಬಿಯನ್ನು ಅತಿಯಾಗಿ ಸೇವಿಸಬೇಡಿ. 
ಸಾಮಾನ್ಯವಾಗಿ ಒಬ್ಬ ಆರೋಗ್ಯವಂತ ವ್ಯಕ್ತಿಯು ದಿನಕ್ಕೆ 4 ರಿಂದ 5 ಗೋಡಂಬಿಯನ್ನು ಸೇವಿಸಬಹುದು. ಆದರೆ ನೀವು ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರೆ, ತಜ್ಞರ ಸಲಹೆಯ ಮೇರೆಗೆ ಗೋಡಂಬಿ ಸೇವಿಸುವುದು ಉತ್ತಮ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News