Egg Side Effects : ಮೊಟ್ಟೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್-ಬಿ, ವಿಟಮಿನ್ ಬಿ12, ರೈಬೋಫ್ಲಾವಿನ್, ಬಯೋಟಿನ್, ಥಯಾಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳಿವೆ. ಇದು ದೇಹವನ್ನು ಆರೋಗ್ಯವಾಗಿರಿಸಾಲು ತುಂಬಾ ಸಹಕಾರಿಯಾಗಿದೆ. ಮೊಟ್ಟೆಗಳನ್ನು ಸೇವನೆಯಿಂದ ಮೂಳೆಗಳು, ಮೆದುಳು, ಕಣ್ಣುಗಳು, ಸ್ನಾಯುಗಳು ಮತ್ತು ಕೂದಲನ್ನು ಬಲಪಡಿಸುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ದೇಹದಿಂದ ಅನೇಕ ರೋಗಗಳನ್ನು ತೆಗೆದುಹಾಕಲು ಸಹಾಯಕವಾಗಿದೆ.


COMMERCIAL BREAK
SCROLL TO CONTINUE READING

ಚಹಾ


ಹೆಚ್ಚಿನ ಜನರು ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆ ಸೇವಿಸಲು ಇಷ್ಟಪಡುತ್ತಾರೆ. ಈ ಸಮಯದಲ್ಲಿ ಚಹಾ ಕೂಡ ಕುಡಿಯುತ್ತಾರೆ. ಮೊಟ್ಟೆಯೊಂದಿಗೆ ಚಹಾವನ್ನು ಕುಡಿಯುವುದರಿಂದ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗುತ್ತದೆ. ಇದು ಮಲಬದ್ಧತೆ ಮತ್ತು ಅಜೀರ್ಣಕ್ಕೆ ಕಾರಣವಾಗುತ್ತದೆ. ಆದ್ದರಿಂದ, ಮೊಟ್ಟೆ ಮತ್ತು ಚಹಾವನ್ನು ಒಟ್ಟಿಗೆ ಸೇವಿಸುವುದನ್ನು ತಪ್ಪಿಸಬೇಕು.


ಇದನ್ನೂ ಓದಿ : ಚ್ಯವನ್ಪ್ರಾಶ್ ಆರೋಗ್ಯಕ್ಕೆ ತುಂಬಾ ಲಾಭಕಾರಿ, ಆದ್ರೆ ಈ ಜನರು ಮರೆತೂ ಸೇವಿಸಬಾರದು


ಹುಳಿ ಪದಾರ್ಥಗಳು


ಮೊಟ್ಟೆಯೊಂದಿಗೆ ಹುಳಿ ಪದಾರ್ಥಗಳನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾಗಿದೆ. ಹುಳಿ ಪದಾರ್ಥಗಳೊಂದಿಗೆ ಮೊಟ್ಟೆಗಳನ್ನು ಸೇವಿಸುವುದರಿಂದ ಹೃದಯಾಘಾತದಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.


ಸೋಯಾಬೀನ್ ಉತ್ಪನ್ನಗಳು


ಸೋಯಾಬೀನ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಸೇವನೆಯಿಂದ ಆರೋಗ್ಯಕ್ಕೆ ಹಲವಾರು ಲಾಭಗಳಿವೆ ಆದರೆ ಸೋಯಾಬೀನ್ ನಿಂದ ತಯಾರಿಸಿದ ಪದಾರ್ಥಗಳನ್ನು ಮೊಟ್ಟೆಯೊಂದಿಗೆ ಸೇವಿಸುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮೊಟ್ಟೆ ಮತ್ತು ಸೋಯಾ ಚಂಕ್ಸ್‌ಗಳನ್ನು ಒಟ್ಟಿಗೆ ತಿನ್ನುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.


ಹಸಿ ಹಾಲು


ಹಸಿ ಹಾಲನ್ನು ಮೊಟ್ಟೆಯೊಂದಿಗೆ ಸೇವಿಸಬಾರದು. ಹಸಿ ಹಾಲಿನಲ್ಲಿರುವ ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾಗಳು ಮೊಟ್ಟೆಗಳೊಂದಿಗೆ ಬೆರೆತು ಆರೋಗ್ಯಕ್ಕೆ ಹಾನಿಯನ್ನುಂಟುಮಾಡುತ್ತವೆ. ಅದಕ್ಕಾಗಿಯೇ ಈ ಪದಾರ್ಥಗಳನ್ನು ಒಟ್ಟಿಗೆ ಸೇವಿಸಲೇಬಾರದು.


ಸಿಹಿ ಪದಾರ್ಥಗಳು


ಮೊಟ್ಟೆಗಳೊಂದಿಗೆ ಸಿಹಿ ಪದಾರ್ಥಗಳನ್ನು ಸೇವಿಸಬೇಡಿ. ಮೊಟ್ಟೆಯಲ್ಲಿರುವ ಅಮೈನೋ ಆಮ್ಲಗಳು ಸಿಹಿ ಪದಾರ್ಥಗಳೊಂದಿಗೆ ಬೆರೆಸಿ ಆರೋಗ್ಯಕ್ಕೆ ಹಾನಿಯುಂಟುಮಾಡುತ್ತವೆ. ಅದಕ್ಕಾಗಿಯೇ ಅಂತಹ ಪದಾರ್ಥಗಳನ್ನು ಆಹಾರದ ಜೊತೆ ಸೇವಿಸುವುದನ್ನು ತಪ್ಪಿಸಬೇಕು.


ಇದನ್ನೂ ಓದಿ : ಕ್ಯಾನ್ಸರ್-ಹೃದ್ರೋಗಗಳಂತಹ ಮಾರಕ ಕಾಯಿಲೆಗಳ ಅಪಾಯ ತಗ್ಗಿಸುತ್ತದೆ ಈ ಕಪ್ಪು ಗಜ್ಜರಿ


ಬಾಳೆಹಣ್ಣು


ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ಒಟ್ಟಿಗೆ ತಿನ್ನುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಮೊಟ್ಟೆ ಮತ್ತು ಬಾಳೆಹಣ್ಣನ್ನು ಒಟ್ಟಿಗೆ ತಿನ್ನುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.