Health Tips: ಎಲ್ಲೆಡೆ ಬಹಳ ಸುಲಭವಾಗಿ ಲಭ್ಯವಿರುವ ತರಕಾರಿಗಳಲ್ಲಿ ಬೆಳ್ಳುಳ್ಳಿಯೂ ಒಂದು. ಬೆಳ್ಳುಳ್ಳಿ ಸೇವನೆಯಿಂದ ಆರೋಗ್ಯಕ್ಕೆ ಹತ್ತು ಹಲವು ಪ್ರಯೋಜನಗಳಿವೆ. ಸಾಮಾನ್ಯವಾಗಿ, ಕಾಣಿಸಿಕೊಳ್ಳುವ ಶೀತ, ನೆಗಡಿಯಂತಹ ಸಮಸ್ಯೆಗಳಿಗೆ ಇದು ಅತ್ಯುತ್ತಮ ಮನೆಮದ್ದು. ಆದಾಗ್ಯೂ, ಕೆಲವರಿಗೆ ಬೆಳ್ಳುಳ್ಳಿ ಸೇವನೆ ಒಳ್ಳೆಯದಲ್ಲ. ತಜ್ಞರ ಪ್ರಕಾರ, ಕೆಲವು ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಬೆಳ್ಳುಳ್ಳಿ ಸೇವನೆ ಅಪಾಯಕಾರಿ ಎಂದು ನಿಮಗೆ ತಿಳಿದಿದೆಯೇ?
ಹೌದು, ಆಹಾರದ ರುಚಿ ಹೆಚ್ಚಿಸುವ, ಆರೋಗ್ಯಕ್ಕೆ ಹತ್ತು ಹಲವು ಪ್ರಯೋಜನಗಳನ್ನೂ ಒದಗಿಸುವ ಬೆಳ್ಳುಳ್ಳಿ ಕೆಲವರಿಗೆ ತುಂಬಾ ಅಡ್ಡಪರಿಣಾಮಗಳನ್ನು ಕೂಡ ಉಂಟು ಮಾಡುತ್ತದೆ. ಹಾಗಾಗಿಯೇ, ಕೆಲವು ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಬೆಳ್ಳುಳ್ಳಿ ಸೇವಿಸದಂತೆ ಸಲಹೆ ನೀಡಲಾಗುತ್ತದೆ. ಹಾಗಿದ್ದರೆ, ಯಾವ ಆರೋಗ್ಯ ಸಮಸ್ಯೆ ಇರುವವರು ಬೆಳ್ಳುಳ್ಳಿಯಿಂದ ದೂರ ಇರಬೇಕು ಎಂದು ತಿಳಿಯೋಣ...
ಈ ಆರೋಗ್ಯ ಸಮಸ್ಯೆಗಳಿರುವವರಿಗೆ ತುಂಬಾ ಹಾನಿಕಾರಕ ಬೆಳ್ಳುಳ್ಳಿ:
* ಚರ್ಮ ಸಂಬಂಧಿ ಸಮಸ್ಯೆಗಳು:
ಚರ್ಮ ಸಂಬಂಧಿ ಸಮಸ್ಯೆಗಳಿರುವವರು ಬೆಳ್ಳುಳ್ಳಿಯನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ಆಗಾಗ್ಗೆ ಬಾಯಲ್ಲಿ ಹುಣ್ಣು ಕಾಣಿಸಿಕೊಳ್ಳುವವರು, ಮೊಡವೆ ಸಮಸ್ಯೆ, ತುರಿಕೆ, ದದ್ದು ರೀತಿಯ ಸಮಸ್ಯೆ ಹೊಂದಿರುವವರು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಸೇವಿಸುವುದರಿಂದ ಇದು ಅಲರ್ಜಿ ಸಮಸ್ಯೆಗೆ ಕಾರಣವಾಗಬಹುದು.
ಇದನ್ನೂ ಓದಿ- Women's Health: ಉತ್ತಮ ಆರೋಗ್ಯಕ್ಕಾಗಿ ಮಹಿಳೆಯರು ಕುಡಿಯಲೇಬೇಕು ಈ 3 ಪಾನೀಯ
ಅತಿಸಾರ ಸಮಸ್ಯೆ:
ಕೆಲವರು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆಯಿಂದ ತೂಕ ಇಳಿಕೆ ಸಾಧ್ಯವಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ, ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆಯು ಅತಿಸಾರವನ್ನು ಪ್ರಚೋದಿಸುವುದರಿಂದ ಅತಿಸಾರ ಸಮಸ್ಯೆ ಇರುವವರು ಬೆಳ್ಳುಳ್ಳಿ ಸೇವನೆಯನ್ನು ತಪ್ಪಿಸಬೇಕು. ಇಲ್ಲದಿದ್ದರೆ, ಜೀರ್ಣಾಂಗ ವ್ಯವಸ್ಥೆ ದುರ್ಬಲಗೊಳ್ಳುವ ಸಾಧ್ಯತೆ ಇರುತ್ತದೆ.
ವಾಕರಿಕೆ, ವಾಂತಿ ಮತ್ತು ಎದೆಯುರಿ:
ಬೆಳ್ಳುಳ್ಳಿ ಆರೋಗ್ಯಕ್ಕೆ ಒಳ್ಳೆಯದೇ ಆದರೂ ಈಗಾಗಲೇ ವಾಕರಿಕೆ, ವಾಂತಿ ಮತ್ತು ಎದೆಯುರಿಯಂತಹ ಸಮಸ್ಯೆ ಎದುರಿಸುತ್ತಿರುವವರಿಗೆ ಇದು ಒಳ್ಳೆಯದಲ್ಲ. ನ್ಯಾಶನಲ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಫ್ ಯುಎಸ್ ಪ್ರಕಟಿಸಿದ ವರದಿಯ ಪ್ರಕಾರ, ಬೆಳ್ಳುಳ್ಳಿಯು GERD (ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ) ಉಂಟುಮಾಡುವ ಕೆಲವು ಸಂಯುಕ್ತಗಳನ್ನು ಹೊಂದಿರುತ್ತದೆ. ಹಾಗಾಗಿ, ವಾಕರಿಕೆ, ವಾಂತಿ ಮತ್ತು ಎದೆಯುರಿ ಸಮಸ್ಯೆ ಇರುವವರಿಗೆ ಇದು ಹಾನಿಕಾರಕ ಎನ್ನಲಾಗುತ್ತದೆ.
ಇದನ್ನೂ ಓದಿ- ಎಚ್ಚರಿಕೆ..! ವೇಗವಾಗಿ ಆಹಾರ ತಿನ್ನುತ್ತೀರಾ..? ಗಂಭೀರ ಆರೋಗ್ಯ ಸಮಸ್ಯೆ ಬರುತ್ತೆ
ಗರ್ಭಿಣಿಯರಿಗೆ:
ಬೆಳ್ಳಿಳ್ಳಿ ದೇಹವನ್ನು ಬೆಚ್ಚಗಿರಿಸುತ್ತದೆ. ಹಾಗಾಗಿ, ಶೀತ, ಕೆಮ್ಮು ಕಾಣಿಸಿಕೊಂಡಾಗ ಬೆಳ್ಳುಳ್ಳಿ ಗೊಜ್ಜು, ರಸಂನ ನಂತಹ ಆಹಾರಗಳನ್ನು ನೀಡಲಾಗುತ್ತದೆ. ಆದರೆ, ಕೆಲವು ಮಹಿಳೆಯರು ಗರ್ಭಾವಸ್ಥೆಯಲ್ಲಿಯೂ ಸಹ ಯೋಚಿಸಿದೆ ಬೆಳ್ಳುಳ್ಳಿ ಸೇವಿಸುತ್ತಾರೆ. ಆದರೆ, ಇದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಹುದು. ಹಾಗಾಗಿ, ಗರ್ಭಾವಸ್ಥೆಯಲ್ಲಿ, ಮಹಿಳೆಯರು ತಮ್ಮ ಆಹಾರದಲ್ಲಿ ಬೆಳ್ಳುಳ್ಳಿ ಸೇರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಲು ಮರೆಯಬೇಡಿ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.