ಪ್ರತಿದಿನ ಹಲ್ಲುಜ್ಜಿದರೂ ಬಾಯಿಯ ದುರ್ವಾಸನೆ ಬರುತ್ತಿದೆಯೇ..? ಹಾಗಿದ್ರೆ ಅದಕ್ಕೆ ಇದೇ ಕಾರಣ

Oral Health tips : ನಾವು ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜುತ್ತೇವೆ, ಇದರಿಂದ ನಮ್ಮ ಬಾಯಿ ತಾಜಾವಾಗಿರುತ್ತದೆ. ಆದರೆ ಕೆಲವರಿಗೆ ಹಲ್ಲುಜ್ಜುತ್ತಿದ್ದರೂ ಮತ್ತು ಬಾಯಿ ತೊಳೆದರೂ ದುರ್ವಾಸನೆ ಬರುತ್ತಿದ್ದರೆ, ಚಿಂತಿಸುವ ಅಗತ್ಯವಿಲ್ಲ. ಇದಕ್ಕಾಗಿ ಪದೇ ಪದೇ ಹಲ್ಲುಜ್ಜುವ ಅಗತ್ಯವಿಲ್ಲ. ಇದು ನಿಮ್ಮ ದೇಹದಲ್ಲಿ ವಿಟಮಿನ್ ಬಿ 12 ಕೊರತೆಯಿಂದ ಉಂಟಾಗುತ್ತದೆ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

Written by - Krishna N K | Last Updated : Apr 24, 2025, 07:17 PM IST
    • ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜುತ್ತೇವೆ, ಇದರಿಂದ ನಮ್ಮ ಬಾಯಿ ತಾಜಾವಾಗಿರುತ್ತದೆ.
    • ಕೆಲವರಿಗೆ ಹಲ್ಲುಜ್ಜುತ್ತಿದ್ದರೂ ಮತ್ತು ಬಾಯಿ ತೊಳೆದರೂ ದುರ್ವಾಸನೆ ಉಂಟಾಗುತ್ತೆ.
    • ಇದು ನಿಮ್ಮ ದೇಹದಲ್ಲಿ ವಿಟಮಿನ್ ಬಿ 12 ಕೊರತೆಯಿಂದ ಉಂಟಾಗುತ್ತದೆ.
ಪ್ರತಿದಿನ ಹಲ್ಲುಜ್ಜಿದರೂ ಬಾಯಿಯ ದುರ್ವಾಸನೆ ಬರುತ್ತಿದೆಯೇ..? ಹಾಗಿದ್ರೆ ಅದಕ್ಕೆ ಇದೇ ಕಾರಣ

Health tips in Kannada : ವಿಟಮಿನ್ ಬಿ 12 ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು, ಇದು ಕೆಂಪು ರಕ್ತ ಕಣಗಳ ರಚನೆ, ನರಮಂಡಲದ ಆರೋಗ್ಯ ಮತ್ತು ಡಿಎನ್ಎ ಸಂಶ್ಲೇಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿ ಇದರ ಕೊರತೆಯಿದ್ದಾಗ, ಬಾಯಿಯಲ್ಲಿ ಬ್ಯಾಕ್ಟೀರಿಯಾಗಳು ಅತಿಯಾಗಿ ಬೆಳೆದು, ದುರ್ವಾಸನೆಯನ್ನು ಉಂಟುಮಾಡಬಹುದು.

Add Zee News as a Preferred Source

ವಿಟಮಿನ್ ಬಿ12 ಕೊರತೆಯನ್ನು ಪತ್ತೆಹಚ್ಚುವುದು ಸುಲಭ. ವಿಟಮಿನ್ ಬಿ12 ಕೊರತೆಯು ನಿರಂತರ ದುರ್ವಾಸನೆ, ಬಿಳಿ ಅಥವಾ ಕೆಂಪು ನಾಲಿಗೆ, ಒಸಡುಗಳಲ್ಲಿ ರಕ್ತಸ್ರಾವ, ಆಯಾಸ, ದೌರ್ಬಲ್ಯ ಮತ್ತು ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಮುಂತಾದ ಸಮಸ್ಯೆಗಳನ್ನು ಕಾಣಿಸಿಕೊಳ್ಳುತ್ತದೆ..

ಇದನ್ನೂ ಓದಿ:ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತೆ ಈ ಹಣ್ಣು..! ಮಧುಮೇಹಕ್ಕೂ ಇದು ಮದ್ದು

ವಿಟಮಿನ್ ಬಿ 12 ಕೊರತೆ ನಿವಾರಣೆ : ಈ ಕೊರತೆ ನಿಗಿಸಲು, ನೀವು ಮೊಟ್ಟೆ, ಹಾಲು, ಮೊಸರು, ಪನೀರ್, ಸಾಲ್ಮನ್, ಟ್ಯೂನ ಮೀನು, ಕೋಳಿ, ಕೆಂಪು ಮಾಂಸ, ಬ್ರೆಡ್ ಧಾನ್ಯಗಳಂತಹ ಪೌಷ್ಟಿಕ ಆಹಾರಗಳನ್ನು ಸೇವಿಸಬೇಕು. ಇದು ವಿಟಮಿನ್ ಬಿ 12 ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ನೀವು ಸಸ್ಯಾಹಾರಿಗಳಾಗಿದ್ದರೆ, ನಿಮ್ಮ ವೈದ್ಯರು ಸಲಹೆ ನೀಡಿದಂತೆ ಬಿ12 ಪೂರಕಗಳು ಅಥವಾ ಇಂಜೆಕ್ಷನ್‌ಗಳನ್ನು ತೆಗೆದುಕೊಳ್ಳಬಹುದು.

ವಿಟಮಿನ್ ಬಿ 12 ಬಾಯಿಯ ದುರ್ವಾಸನೆಗೆ ಮಾತ್ರವಲ್ಲ, ದೇಹದ ಅನೇಕ ಪ್ರಮುಖ ಕಾರ್ಯಗಳಿಗೂ ಅವಶ್ಯಕ. ಇದು ಮೆದುಳಿನ ಕಾರ್ಯವನ್ನು ಸುಧಾರಿಸಲು, ಸ್ಮರಣೆಯನ್ನು ಹೆಚ್ಚಿಸಲು ಮತ್ತು ಮನಸ್ಥಿತಿಯನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. 

ಇದನ್ನೂ ಓದಿ:ಕಣ್ಣುಗಳು ಮಸುಕಾಗಿ ಕಾಣುತ್ತಿದ್ದರೆ ಇವು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು!

ಆದ್ದರಿಂದ, ಮೇಲಿನ ಲಕ್ಷಣಗಳು ಕಂಡುಬಂದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ವಿಟಮಿನ್ ಬಿ 12 ಪರೀಕ್ಷೆಯನ್ನು ಮಾಡಿಸಿಕೊಳ್ಳುವುದು ಮುಖ್ಯ. ಸರಿಯಾದ ಆಹಾರವನ್ನು ಸೇವಿಸುವ ಮೂಲಕ ಮತ್ತು ಅಗತ್ಯವಿದ್ದರೆ ಔಷಧಿಗಳನ್ನು ತೆಗೆದುಕೊಳ್ಳುವ ಮೂಲಕ ಈ ಕೊರತೆಯನ್ನು ನೀಗಿಸಬಹುದು. ನಿರ್ಲಕ್ಷ್ಯ ಮಾಡಿದರೆ, ಇದು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ, ಇದನ್ನು ZEE KANNADA NEWS ಖಚಿತ ಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News