Lemon Water Health Problems : ನಿಂಬೆ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನಮ್ಮಲ್ಲಿ ಬಹುತೇಕರು ಬೆಳಗ್ಗೆ ಎದ್ದ ನಂತರ ಒಂದು ಲೋಟ ನಿಂಬೆ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಇದು ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ನಿಂಬೆ ನೀರಿನಲ್ಲಿ ವಿಟಮಿನ್ ಸಿ ಹೇರಳ ಪ್ರಮಾಣದಲ್ಲಿರುತ್ತದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಅನೇಕ ರೋಗಗಳಿಗೆ ಬಲಿಯಾಗದಂತೆ ನಿಮ್ಮನ್ನು ರಕ್ಷಿಸುತ್ತದೆ. ಆದರೆ ನಿಂಬೆ ನೀರಿನ ಸೇವನೆಯು ಕೆಲವರಿಗೆ ಹಾನಿಕಾರಕವಾಗಿದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಹೌದು, ನಿಂಬೆ ನೀರನ್ನು ಅತಿಯಾಗಿ ಕುಡಿಯುವುದರಿಂದ ದೇಹದಲ್ಲಿ ಹಲವಾರು ಸಮಸ್ಯೆಗಳು ಉಂಟಾಗಬಹುದು (Side Effects Of Drinking Lemon Water). ಹಾಗಾದರೆ ಬನ್ನಿ, ಯಾವ ಜನರು ನಿಂಬೆ ನೀರನ್ನು ಕುಡಿಯಬಾರದು ಎಂಬುದನ್ನು ತಿಳಿದುಕೊಳ್ಳೋಣ, (Health News In Kananada)
ಅಸಿಡಿಟಿ ಸಮಸ್ಯೆ ಇರುವವರು
ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ನಿಂಬೆ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸಬೇಕು. ವಾಸ್ತವದಲ್ಲಿ, ಇದು ದೊಡ್ಡ ಪ್ರಮಾಣದಲ್ಲಿ ಸಿಟ್ರಿಕ್ ಆಸಿಡ್ ಅನ್ನು ಹೊಂದಿರುತ್ತದೆ, ಇದು ದೇಹದಲ್ಲಿ ಆಮ್ಲೀಯತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ ನಿಮಗೆ ಇತರ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಬಹುದು.
ದಂತ ಸಮಸ್ಯೆ ಇರುವವರು (Lemon water side effect on teeth)
ಯಾವುದೇ ರೀತಿಯ ಹಲ್ಲಿನ ಸಮಸ್ಯೆ ಇರುವವರು ನಿಂಬೆ ನೀರನ್ನು ಕುಡಿಯುವುದನ್ನು ತಪ್ಪಿಸಬೇಕು. ನಿಂಬೆ ಹಣ್ಣಿನಲ್ಲಿರುವ ಆಮ್ಲವು ಹಲ್ಲಿನ ದಂತಕವಚವನ್ನು ಹಾನಿಗೊಳಿಸುತ್ತದೆ. ಇದು ಹಲ್ಲುಗಳಲ್ಲಿ ಸೆನ್ಸಿಟಿವಿಟಿ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮಗೆ ಹಲ್ಲಿನ ಸಮಸ್ಯೆಗಳಿದ್ದರೆ, ಅದನ್ನು ಸೇವಿಸುವ ಮೊದಲು ನಿಮ್ಮ ದಂತವೈದ್ಯರನ್ನು ಸಂಪರ್ಕಿಸಿ.
ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಇರುವವರು (lemon water side effect on bones)
ಮೂಳೆ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರು ನಿಂಬೆ ನೀರನ್ನು ಸೇವಿಸಬಾರದು. ನಿಂಬೆ ನೀರನ್ನು ಅತಿಯಾಗಿ ಸೇವಿಸುವುದರಿಂದ ನಿಮ್ಮ ಮೂಳೆಗಳಿಗೆ ಹಾನಿಯಾಗುತ್ತದೆ. ವಾಸ್ತವದಲ್ಲಿ, ಇದರಲ್ಲಿರುವ ಆಮ್ಲದ ಕಾರಣದಿಂದಾಗಿ, ಮೂಳೆಗಳಲ್ಲಿನ ಕ್ಯಾಲ್ಸಿಯಂನ ತೀವ್ರ ಸವೆತ ಅನುಭವಿಸುತ್ತದೆ, ಇದು ಮೂತ್ರದ ಮೂಲಕ ಹೊರಹಾಕಲ್ಪಡುತ್ತದೆ. ಈ ಕಾರಣದಿಂದಾಗಿ ಮೂಳೆಗಳು ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ ಮತ್ತು ಒಳಗಿನಿಂದ ಟೊಳ್ಳಾಗುತ್ತವೆ. ಇದು ಆಸ್ಟಿಯೊಪೊರೋಸಿಸ್ ಅಪಾಯವನ್ನೂ ಸಹ ಹೆಚ್ಚಿಸಬಹುದು.
ಇದನ್ನೂ ಓದಿ-Weight Loss: ಕೆಲವೇ ದಿನಗಳಲ್ಲಿ ತೂಕ ಇಳಿಕೆ ಮಾಡಿಕೊಳ್ಳಬೇಕೆ? ಈ ಎರಡೂ ಪದಾರ್ಥಗಳನ್ನು ಏಕಕಾಲಕ್ಕೆ ಸೇವಿಸಿ!
ಕಿಡ್ನಿ ಸಮಸ್ಯೆ ಇರುವವರು (lemon water side effects on kidney)
ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವವರು ನಿಂಬೆ ನೀರನ್ನು ಸೇವಿಸಬಾರದು. ಇದು ಮೂತ್ರಪಿಂಡಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡುತ್ತದೆ, ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವವರು ಇದನ್ನು ಮರೆತೂ ಕೂಡ ಸೇವಿಸಬಾರದು.
ಇದನ್ನೂ ಓದಿ-Bad Cholesterol Symptoms: ಕೆಟ್ಟ ಕೊಲೆಸ್ಟ್ರಾಲ್ ನ ಈ ಸಂಕೇತಗಳನ್ನು ಮರೆತೂ ನಿರ್ಲಕ್ಷಿಸಬೇಡಿ!
ಎದೆಯುರಿ ಸಮಸ್ಯೆ
ಎದೆಯುರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಂಬೆ ನೀರನ್ನು ಸೇವಿಸುವುದನ್ನು ತಪ್ಪಿಸಬೇಕು. ವಾಸ್ತವದಲ್ಲಿ, ಇದು ಪೆಪ್ಸಿನ್ ಎಂಬ ಕಿಣ್ವವನ್ನು ಸಕ್ರಿಯಗೊಳಿಸುತ್ತದೆ. ಇದಲ್ಲದೇ ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಪೆಪ್ಟಿಕ್ ಅಲ್ಸರ್ ಸಮಸ್ಯೆಯು ಹೆಚ್ಚಾಗಬಹುದು.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ