ಇಂದಿನ ಯಾಂತ್ರಿಕ ಜೀವನದಿಂದ ಅತಿ ಹೆಚ್ಚು ಜನರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಆದರೆ, ಈ ಖಾಯಿಲೆ ಅವರಿಗೆ ಇದೆ ಎಂಬುದೇ ಅವರಿಗೆ ತಿಳಿದಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಅದೆಷ್ಟೋ ಜನರು ಖಿನ್ನತೆಯ ಕಾರಣದಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸಂಕಷ್ಟಗಳನ್ನು ಎದುರಿಸುತ್ತಾರೆ. ಹಾಗಿದ್ದರೆ, ನೀವು ಖಿನ್ನತೆಯಿಂದ ಬಳುತ್ತಿದ್ದೀರೆಯೇ ಎಂಬುದನ್ನು ತಿಳಿಯಲು ಈ ಕೆಳಗಿನ 10 ಅಂಶಗಳು ನಿಮಗೆ ಸಹಾಯ ಮಾಡುತ್ತವೆ.


COMMERCIAL BREAK
SCROLL TO CONTINUE READING

1. ಹೆಚ್ಚಿನ ಸಮಯದಲ್ಲಿ ದುಃಖ ಅಥವಾ ಬೇಸರದಲ್ಲಿರುವುದು.
2. ದೈನಂದಿನ ಚಟುವಟಿಕೆಗಳನ್ನು ನಿಭಾಯಿಸಲು ಕಷ್ಟ ಪಡುವುದು ಮತ್ತು ಅವುಗಳಲ್ಲಿ ಆಸಕ್ತಿ ಕಳೆದುಕೊಳ್ಳುವುದು. ದಿನವಿಡೀ ಸುಸ್ತಾದಂತೆ ಅನಿಸುವುದು. ಮುಂಚೆ ಇಷ್ಟ ಪಟ್ಟು ಮಾಡುತ್ತಿದ್ದ ಕೆಲಸಗಳಲ್ಲಿ ಈಗ ನಿರಾಸಕ್ತಿಯ ಭಾವ.
3. ಏಕಾಗ್ರತೆಯ ಕೊರತೆ, ಯೋಚಿಸಲು ಅಥವಾ ನಿರ್ಧಾರ ತೆಗೆದುಕೊಳ್ಳಲು ಕಷ್ಟವಾಗುವುದು (ಉದಾ: ಹವ್ಯಾಸ, ಅಧ್ಯಯನದ ಮೇಲೆ ಗಮನ ನೀಡಲು ಕಷ್ಟ, ಇತ್ಯಾದಿ).
4. ಆತ್ಮವಿಶ್ವಾಸ ಮತ್ತು ಆತ್ಮಗೌರವ ಕಡಿಮೆಯಾಗುವುದು. ತನ್ನ ಬಗ್ಗೆ, ಜೀವನದ ಬಗ್ಗೆ ಹಾಗೂ ಭವಿಷ್ಯದ ಬಗ್ಗೆ ಋಣಾತ್ಮಕ ಭಾವನೆ. ಹಸಿವಾಗದಿರುವುದು ಅಥವಾ ಅತಿಯಾಗಿ ತಿನ್ನುವುದು. ಹಿಂದಿನ ಸೋಲುಗಳಿಗೆ ತನ್ನನ್ನೇ ದೂಷಿಸಿಕೊಳ್ಳುವುದು, ಅಪರಾಧಿ ಭಾವ; ತಾನು ಅನುಪಯುಕ್ತ ಎಂಬ ಭಾವನೆ.
5. ಓದು, ಕೆಲಸ, ಮತ್ತು ಇತರ ಕಾರ್ಯಗಳಲ್ಲಿ ನಿರಾಸಕ್ತಿ. ಎಲ್ಲಾ ಕಾರ್ಯಗಳಲ್ಲೂ ವಿಳಂಬ ಮಾಡುವುದು. ತಮ್ಮ ಕೊಠಡಿ, ವಸ್ತುಗಳ ಶುಚಿತ್ವದ ಬಗ್ಗೆ ಕಡೆಗಣಿಸುವುದು. 
6. ಸರಿಯಾಗಿ ನಿದ್ರೆ ಬಾರದಿರುವುದು ಅಥವಾ ನಿದ್ರೆ ಮಾಡಲು ಸಾಧ್ಯವೇ ಆಗದಿರುವುದು. ತಲೆ ನೋವು, ಕತ್ತು ನೋವು, ಸೆಳೆತ ಹೀಗೆ ದೇಹದ ವಿವಿಧ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುವುದು
7. ಲೈಂಗಿಕ ವಿಚಾರ/ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಕಳೆದುಕೊಳ್ಳುವುದು.
8. ಆತ್ಮಹತ್ಯೆ ಅಥವಾ ಸ್ವಯಂ ಹಾನಿಯ ಬಗ್ಗೆ ಯೋಚಿಸುವುದು.
9. ಸೋಶಿಯಲ್ ಮಿಡಿಯಾದಲ್ಲಿ ಅತಿಹೆಚ್ಚು ಆಕ್ಟೀವ್ ಆಗಿರುವುದು. ಸ್ನೇಹಿತರೊಂದಿಗೆ ಬೆರೆಯದೆ ಒಂಟಿಯಾಗಿರಲು ಬಯಸುವುದು. 
10. ಅತಿಹೆಚ್ಚು ಮದ್ಯಪಾನ, ಧೂಮಪಾನ ಮಾಡುವುದು.