Amla Juice For Hair: ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ಅಮೃತ ಎಂದು ಕರೆಯಲಾಗುತ್ತದೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ನೆಲ್ಲಿಕಾಯಿ ಸಮೃದ್ಧವಾಗಿರುತ್ತದೆ. ಇದು ಆಂಟಿಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ನಿಯಮಿತವಾಗಿ ಆಮ್ಲಾ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ. ಅದರಲ್ಲೂ ಬೆಳಗೆದ್ದು ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ರಸ ಕುಡಿದರೆ ಕೂದಲಿನ ಆರೋಗ್ಯ ಸುಧಾರಿಸುವುದು. 


COMMERCIAL BREAK
SCROLL TO CONTINUE READING

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ನೆಲ್ಲಿಕಾಯಿಯಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.


ಜೀರ್ಣಾಂಗ ವ್ಯವಸ್ಥೆಯ ಆರೋಗ್ಯ: ನೆಲ್ಲಿಕಾಯಿ ಜೀರ್ಣಾಂಗ ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತದೆ. ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.


ಇದನ್ನೂ ಓದಿ: ಪ್ರತಿದಿನ ಬೆಳಗ್ಗೆ ಹೀಗೆ ಮಾಡಿದರೆ ಒಂದು ತಿಂಗಳಲ್ಲಿ ಕೊಲೆಸ್ಟ್ರಾಲ್ ಮಂಜುಗಡ್ಡೆಯಂತೆ ಕರಗಿ ಹೋಗುತ್ತೆ!  


ಚರ್ಮದ ಆರೋಗ್ಯ: ಆಮ್ಲಾದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಸುಕ್ಕುಗಳನ್ನು ತಡೆಯುತ್ತದೆ.


ಕೂದಲಿನ ಆರೋಗ್ಯ: ನೆಲ್ಲಿಕಾಯಿ ಕೂದಲು ಉದುರುವುದನ್ನು ತಡೆಯುತ್ತದೆ. ಅಲ್ಲದೇ ಕೂದಲನ್ನು ಬಲವಾಗಿ ಮತ್ತು ನಯವಾಗಿ ಮಾಡುತ್ತದೆ. ಬಿಳಿ ಕೂದಲು ಬಾರದಂತೆ ತಡೆದು ಕಪ್ಪಾದ ಉದ್ದ ಕೂದಲು ಬೆಳೆಯಲು ಪ್ರಯೋಜನಕಾರಿಯಾಗಿದೆ. 


ಹೃದಯದ ಆರೋಗ್ಯ: ಆಮ್ಲಾ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.


ಮಧುಮೇಹ ನಿಯಂತ್ರಣ: ಆಮ್ಲಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.


ದೇಹವನ್ನು ನಿರ್ವಿಷಗೊಳಿಸುವುದು: ಆಮ್ಲಾ ದೇಹದಿಂದ ವಿಷವನ್ನು ಹೊರಹಾಕುತ್ತದೆ ಮತ್ತು ದೇಹವನ್ನು ಶುದ್ಧಗೊಳಿಸುತ್ತದೆ.


ಇದನ್ನೂ ಓದಿ: green tea vs coffee: ಕಾಫಿ vs ಗ್ರೀನ್ ಟೀ ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ?


ಆಮ್ಲಾ ಜ್ಯೂಸ್ ಕುಡಿಯುವ ವಿಧಾನ: 


20-30 ಮಿಲಿ ಆಮ್ಲಾ ಜ್ಯೂಸ್ ಅನ್ನು ಒಂದು ಲೋಟ ನೀರಿಗೆ ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ನೀವು ರುಚಿಗೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯಬಹುದು.


ಕೆಲವರು ಇದನ್ನು ನಿಂಬೆ ರಸದೊಂದಿಗೆ ಕುಡಿಯುತ್ತಾರೆ. ಇದರಿಂದ ರೋಗನಿರೋಧಕ ಶಕ್ತಿ ಇನ್ನಷ್ಟು ಹೆಚ್ಚಿಸುತ್ತದೆ.


ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.