Dry Coconut Health Benefits: ಒಣ ಕೊಬ್ಬರಿಯನ್ನು ಪೂಜೆಯಿಂದ ಹಿಡಿದು ಅಡುಗೆ ಮಾಡುವವರೆಗೆ ಬಳಸಲಾಗುತ್ತದೆ. ನಮ್ಮಲ್ಲಿ ಹೆಚ್ಚಿನವರು ಇದನ್ನು ಪಾಯಸ, ಹಲ್ವಾ, ಐಸ್ ಕ್ರೀಮ್ ಮತ್ತು ಸಿಹಿ ತಿನಿಸುಗಳನ್ನು ತಯಾರಿಸಲು ಬಳಸುತ್ತಾರೆ. ಅಂದಹಾಗೆ ಒಣ ಕೊಬ್ಬರಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
ಒಣ ಕೊಬ್ಬರಿಯಲ್ಲಿ ವಿಟಮಿನ್ ಬಿ6, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ತಾಮ್ರ, ರಂಜಕ, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳು ಹೇರಳವಾಗಿ ಕಂಡುಬರುತ್ತವೆ. ಪ್ರತಿದಿನ ಖಾಲಿಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇದನ್ನೂ ಓದಿ: IPL ಮುಗಿಯುತ್ತಿದ್ದಂತೆ ಧೋನಿ ನಿವೃತ್ತಿ ಘೋಷಿಸುತ್ತಾರೆಯೇ? ಸ್ಪಷ್ಟನೆ ನೀಡಿದ ಇರ್ಫಾನ್ ಪಠಾಣ್
ಒಣ ಕೊಬ್ಬರಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚುವುದಲ್ಲದೆ, ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಆದರೆ ಇದನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು.
ಒಣ ಕೊಬ್ಬರಿ ಸೇವನೆಯಿಂದ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಇದರಲ್ಲಿ ಹೇರಳವಾಗಿ ಕಬ್ಬಿಣಾಂಶ ಇದ್ದು, ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಒಣ ಕೊಬ್ಬರಿಯಲ್ಲಿ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಇರುತ್ತವೆ. ಜೊತೆಗೆ ಫೀನಾಲಿಕ್ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಜೀವಕೋಶಗಳನ್ನು ಆಕ್ಸಿಡೇಟಿವ್ ಹಾನಿಯಿಂದ ತಡೆಯುತ್ತದೆ.
ಒಣ ಕೊಬ್ಬರಿ ಸೇವನೆಯು ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಕಂಡುಬರುತ್ತವೆ. ಹೀಗಾಗಿ ಇದು ಅಪಧಮನಿಗಳಲ್ಲಿ ಪ್ಲೇಕ್ ರಚನೆಯನ್ನು ತಡೆಯುತ್ತದೆ, ಜೊತೆಗೆ ಹೃದಯಾಘಾತ ಮತ್ತು ಇತರ ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಒಣ ಕೊಬ್ಬರಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಫೈಬರ್ನಲ್ಲಿ ಒಣ ಕೊಬ್ಬರಿ ಸಮೃದ್ಧವಾಗಿದ್ದು, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಒಣ ಕೊಬ್ಬರಿ ಸೇವನೆಯು ಮೂಳೆಗಳಿಗೆ ತುಂಬಾ ಪ್ರಯೋಜನಕಾರಿ. ಹೇರಳವಾಗಿ ಕ್ಯಾಲ್ಸಿಯಂ ಹೊಂದಿರುವ ಕಾರಣ, ಇದು ಮೂಳೆಗಳನ್ನು ಬಲಪಡಿಸುತ್ತದೆ. ಒಣ ಕೊಬ್ಬರಿ ತಿನ್ನುವುದರಿಂದ ಕೀಲು ನೋವು ಮತ್ತು ಊತವನ್ನು ಸಹ ಕಡಿಮೆ ಮಾಡಬಹುದು.
ಒಣ ಕೊಬ್ಬರಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಆದರೆ ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು, ಇಲ್ಲದಿದ್ದರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇದನ್ನೂ ಓದಿ: ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಮೂಲಕ ನಿಗಿನಿಗಿಸಿತು ಗಂಟುಮೂಟೆ ತಂಡದ `ಕೆಂಡ!
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.