ಪ್ರತಿದಿನ ಒಂದು ತುಂಡು ಹಸಿ ಕೊಬ್ಬರಿ ತಿನ್ನಿ, ಈ ಸಮಸ್ಯೆಗಳಿಂದ ಹೊರಬರಲು ಇದು ರಾಮಬಾಣ!
Raw Coconut Benefits:ಹಸಿ ತೆಂಗಿನಕಾಯಿಯನ್ನು ಸೇವಿಸುವುದರಿಂದ ನಿಮಗೆ ಹಲವು ವಿಧಗಳಲ್ಲಿ ಪ್ರಯೋಜನವಾಗುತ್ತದೆ. ಇದು ನಿಮ್ಮನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿರಿಸಲು ಸಹಾಯ ಮಾಡುತ್ತದೆ.
ನವದೆಹಲಿ: ಹಸಿ ತೆಂಗಿನಕಾಯಿಯನ್ನು ಸೇವಿಸುವುದರಿಂದ (Raw Coconut Benefits) ನಿಮಗೆ ಹಲವು ವಿಧಗಳಲ್ಲಿ ಪ್ರಯೋಜನವಾಗುತ್ತದೆ. ಇದು ನಿಮ್ಮನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿರಿಸಲು ಸಹಾಯ ಮಾಡುತ್ತದೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ತೆಂಗಿನ ಕಾಯಿಯನ್ನು ಪ್ರತಿನಿತ್ಯ ಸೇವಿಸುವುದರಿಂದ ನಿಮ್ಮ ದೇಹದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಜ್ಞಾಪಕ ಶಕ್ತಿಯೂ ಹೆಚ್ಚುತ್ತದೆ. ತೆಂಗಿನಕಾಯಿ ಜೀವಸತ್ವಗಳು, ಖನಿಜಗಳು, ಕಾರ್ಬೋಹೈಡ್ರೇಟ್ ಮತ್ತು ಪ್ರೋಟೀನ್ ಸಮೃದ್ಧವಾಗಿದೆ.
ಇದರಲ್ಲಿ ಉತ್ತಮ ಪ್ರಮಾಣದ ನೀರು ಕೂಡ ಇದೆ. ಇದು ದೇಹವನ್ನು ಹೈಡ್ರೇಟ್ ಆಗಿ ಇಡುತ್ತದೆ. ಹಸಿ ತೆಂಗಿನಕಾಯಿಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಹೃದಯದ ಆರೋಗ್ಯಕ್ಕೂ ಒಳ್ಳೆಯದು.
ವಾಂತಿ ಸಮಸ್ಯೆಗೆ ಪರಿಹಾರ:
ಪದೆ ಪದೇ ವಾಂತಿ ಸಮಸ್ಯೆ ಕಾಡುತ್ತಿದ್ದರೆ ಕೊಬ್ಬರಿಯನ್ನು ಬಾಯಿಯಲ್ಲಿ ಇಟ್ಟುಕೊಂಡು ಸ್ವಲ್ಪ ಹೊತ್ತು ಜಗಿಯಿರಿ. ಇದರಿಂದ ಪ್ರಯೋಜನವಾಗಲಿದೆ.
ಜಂತು ಸಮಸ್ಯೆ:
ಹೊಟ್ಟೆಯಲ್ಲಿ ಜಂತುಗಳಿದ್ದರೆ, ರಾತ್ರಿ ಮಲಗುವ ಮೊದಲು ಮತ್ತು ಬೆಳಿಗ್ಗೆ 1 ಚಮಚ ತೆಂಗಿನಕಾಯಿ ಪುಡಿಯನ್ನು ಸೇವಿಸಿ. ಇದರಿಂದ ಹೊಟ್ಟೆಯಲ್ಲಿನ ಜಂತು ಹುಳುಗಳ ಸಮಸ್ಯೆ ದೂರವಾಗುತ್ತದೆ.
ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:
ತೆಂಗಿನಕಾಯಿ ಸೇವನೆಯು ಹೃದಯದ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದನ್ನು ಬಾದಾಮಿ, ವಾಲ್‌ನಟ್ಸ್ ಮತ್ತು ಸಕ್ಕರೆ ಕ್ಯಾಂಡಿಯೊಂದಿಗೆ ಬೆರೆಸಿ ತಿನ್ನಿರಿ. ತೆಂಗಿನಕಾಯಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೊಂದಿರುತ್ತದೆ. ಇದು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.
ಮಲಬದ್ಧತೆಯನ್ನು ನಿವಾರಿಸುತ್ತದೆ:
ತೆಂಗಿನಕಾಯಿ ಸೇವನೆಯು ಮಲಬದ್ಧತೆಯ ಸಮಸ್ಯೆಯಲ್ಲೂ ಪ್ರಯೋಜನಕಾರಿಯಾಗಿದೆ. ಇದನ್ನು ಪ್ರತಿದಿನ ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಗಳು ಬರುವುದಿಲ್ಲ.
ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ:
ತೆಂಗಿನಕಾಯಿ ಸೇವನೆಯಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ, ಆ್ಯಂಟಿ ಫಂಗಲ್ ಮತ್ತು ಆ್ಯಂಟಿ ವೈರಲ್ ಅಂಶಗಳಿದ್ದು, ಇದು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ತೆಂಗಿನಕಾಯಿ ಉತ್ತಮ ಪ್ರತಿಜೀವಕವಾಗಿದೆ. ಇದು ಎಲ್ಲಾ ರೀತಿಯ ಅಲರ್ಜಿಯನ್ನು ನಿವಾರಿಸುತ್ತದೆ.
ಇದನ್ನೂ ಓದಿ: ಜಾಗ ಬಿಡುವ ವಿಚಾರಕ್ಕೆ ಕಿರಿಕ್.. ಕುಡಿದ ಮತ್ತಿನಲ್ಲಿ ವ್ಯಕ್ತಿಯ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ
(Disclaimer: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.