Millet flour Health Benefits: ಸಾಮಾನ್ಯವಾಗಿ ಗೋಧಿ ಹಿಟ್ಟಿನ ಚಪಾತಿಯನ್ನು ತಯಾರಿಸುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಹಿಟ್ಟಿನ ಬದಲಿಗೆ ರಾಗಿ ಹಿಟ್ಟಿನಿಂದ ಮಾಡಿದ ಚಪಾತಿಯನ್ನು ಸೇವಿಸಿದರೆ, ಅದ್ಭುತವಾದ ಪ್ರಯೋಜನಗಳನ್ನು ಪಡೆಯಬಹುದು. ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ದೇಹವನ್ನು ಬೆಚ್ಚಗಿಡಲು ರಾಗಿ ಹಿಟ್ಟಿನಿಂದ ತಯಾರಿಸಿದ ಚಪಾತಿ ಪ್ರಯೋಜನಕಾರಿ.
ಇದನ್ನೂ ಓದಿ: ಊಟ ಮಾಡಿ ಮಲಗುವ ಮುನ್ನ ಇವುಗಳನ್ನು ತಿನ್ನಿ: ಗೊರಕೆ ತಾಪತ್ರಯವೇ ಇರಲ್ಲ!
ನಿಮಗೆ ಮತ್ತೆ ಮತ್ತೆ ಹಸಿವಾಗುತ್ತಿದ್ದರೆ ರಾಗಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ಸೇವಿಸಿ. ಒರಟಾದ ಧಾನ್ಯವಾಗಿರುವುದರಿಂದ, ಇದು ಸಾಕಷ್ಟು ಫೈಬರ್ ಅನ್ನು ಹೊಂದಿರುತ್ತದೆ, ಅಷ್ಟೇ ಅಲ್ಲದೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವಂತೆ ನೋಡಿಕೊಳ್ಳುತ್ತದೆ.
ಚಳಿಗಾಲದಲ್ಲಿ ಮೂಳೆಗಳು ಮತ್ತು ಕೀಲುಗಳಲ್ಲಿನ ನೋವು ಸಾಮಾನ್ಯವಾಗಿ ಕಾಡುತ್ತದೆ. ಇದಕ್ಕೆ ಪರಿಹಾರ ನೀಡಲು ರಾಗಿ ಹಿಟ್ಟು ನೈಸರ್ಗಿಕ ಔಷಧಿ. ಏಕೆಂದರೆ ಇದರಲ್ಲಿ ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳಿ ಬಲ ನೀಡುತ್ತದೆ,
ರಾಗಿಯ ಸೇವನೆಯು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಲು ಸಹ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಡಯೆಟರಿ ಫೈಬರ್’ನಿಂದಾಗಿ ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆ ದೂರವಾಗುತ್ತದೆ.
ರಾಗಿಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳು ಮತ್ತು ಹೈಪರ್ಗ್ಲೈಸೆಮಿಕ್ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ರಾಗಿಯಲ್ಲಿರುವ ಔಷಧೀಯ ಗುಣಗಳಿಂದಾಗಿ, ಮಧುಮೇಹ ರೋಗಿಗಳಲ್ಲಿ ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ.
ಆದರೆ ರಾಗಿಯು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದ್ದರೂ ಸಹ, ಮೂತ್ರಪಿಂಡ ಅಥವಾ ಮೂತ್ರನಾಳದ ಕಾಯಿಲೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬೇಡಿ.
ಇದನ್ನೂ ಓದಿ: ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಪರಿಸರ ಸಚಿವ ಈಶ್ವರ ಖಂಡ್ರೆ
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.