Benefits of Eating Garlic on Empty Stomach: ಬೆಳ್ಳುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದನ್ನು ಆಯುರ್ವೇದದಲ್ಲಿ ಅನೇಕ ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ.


COMMERCIAL BREAK
SCROLL TO CONTINUE READING

ಅನೇಕ ರೀತಿಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಬೆಳ್ಳುಳ್ಳಿ, ಆಂಟಿಫಂಗಲ್, ಬ್ಯಾಕ್ಟೀರಿಯಾ ವಿರೋಧಿ, ಆಂಟಿಆಕ್ಸಿಡೆಂಟ್, ಕಬ್ಬಿಣ, ರಂಜಕ, ಕ್ಯಾಲ್ಸಿಯಂ, ಫೈಬರ್, ಕಾರ್ಬೋಹೈಡ್ರೇಟ್, ಪೊಟ್ಯಾಸಿಯಮ್, ಸತು, ತಾಮ್ರ, ಥಯಾಮಿನ್ ಮತ್ತು ರೈಬೋಫ್ಲಾವಿನ್‌ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ.


ಇದನ್ನೂ ಓದಿ: ನಾಳೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 3.35 ರಿಂದಲೇ ಆರಂಭ: ಬೆಂಗಳೂರಿನಲ್ಲಿ TCS ವರ್ಲ್ಡ್ ಮ್ಯಾರಥಾನ್


ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಯಕೃತ್ತು ಮತ್ತು ಮೂತ್ರಕೋಶದ ಕಾರ್ಯನಿರ್ವಹಣೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆ ಮತ್ತು ಹಸಿವನ್ನು ಕಾಪಾಡುತ್ತದೆ.


ಬೆಳ್ಳುಳ್ಳಿ ಒತ್ತಡವನ್ನು ನಿಯಂತ್ರಿಸಲು ಮತ್ತು ಹೊಟ್ಟೆಯಲ್ಲಿ ಆಮ್ಲ ರಚನೆಯನ್ನು ತಡೆಯಲು ಕೆಲಸ ಮಾಡುತ್ತದೆ. ಜೊತೆಗೆ ಹೊಟ್ಟೆ ನೋವು, ಮಲಬದ್ಧತೆಯಂತಹ ಸಮಸ್ಯೆಗಳಿಗೆ ಶೀಘ್ರ ಪರಿಹಾರವನ್ನು ನೀಡುತ್ತದೆ.


ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಶೀತ, ಕೆಮ್ಮು, ಜ್ವರ ಅಥವಾ ಇತರ ಸೋಂಕುಗಳಿಂದ ರಕ್ಷಿಸಲು ಇದು ಸಹಾಯಕ.


ಪ್ರತಿದಿನ ಬೆಳಗ್ಗೆ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಣದಲ್ಲಿಡಬಹುದು. ಬೆಳ್ಳುಳ್ಳಿಯ ಸಾರವು ಅಧಿಕ ಬಿಪಿಯನ್ನು ಕಡಿಮೆ ಮಾಡಲು ಸಹಕಾರಿ.


ಇನ್ನು ಮಧುಮೇಹ ರೋಗಿಗಳು ಹಸಿ ಬೆಳ್ಳುಳ್ಳಿಯನ್ನು ಸೇವಿಸಿದರೆ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಇದರಲ್ಲಿರುವ ಅಲಿಸಿನ್ ಸಂಯುಕ್ತವು ಸಕ್ಕರೆಯನ್ನು ನಿಯಂತ್ರಿಸುತ್ತದೆ. ಪ್ರತಿದಿನ 3-4 ಎಸಳು ಬೆಳ್ಳುಳ್ಳಿಯನ್ನು ಜಗಿದು ತಿಂದರೆ ತೂಕ ನಿಯಂತ್ರಣದಲ್ಲಿರುತ್ತದೆ.


ಬೆಳ್ಳುಳ್ಳಿ ತುಂಬಾ ಶಕ್ತಿಯುತವಾದ ಆಹಾರ. ಇದು ದೇಹವನ್ನು ನಿರ್ವಿಷಗೊಳಿಸಲು ಕೆಲಸ ಮಾಡುತ್ತದೆ. ಕ್ಯಾನ್ಸರ್, ಮಧುಮೇಹ, ಖಿನ್ನತೆಯಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.


ಇದನ್ನೂ ಓದಿ: ಪೇರಲ ಹಣ್ಣಿನ ಜ್ಯೂಸ್‌ ಕುಡಿಯುವುದರ ಅದ್ಭುತ ಪ್ರಯೋಜನಗಳಿವು!


ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.