ನೆನೆಸಿದ ಖರ್ಜೂರ ತಿಂದರೆ ಆರೋಗ್ಯಕ್ಕಿವೆ ಹಲವಾರು ಲಾಭಗಳು..! ತಪ್ಪದೇ ಸೇವಿಸಿ

Benefits Of Dates: ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಖರ್ಜೂರವನ್ನು ಸೇವಿಸುತ್ತಾರೆ. ಆದರೆ ನೆನಸಿದ ಖರ್ಜೂರವನ್ನು ಸೇವಿಸುವುದು ಇನ್ನೂ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂಬುದು ನಿಮಗೆ ಗೊತ್ತೇ?   

Written by - Savita M B | Last Updated : Oct 24, 2023, 07:55 PM IST
  • ಈ ಆಧುನಿಕ ಮತ್ತು ಒತ್ತಡದ ಜೀವನಶೈಲಿಯಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.
  • ಪ್ರಯತ್ನಪಟ್ಟರೆ ಅಸಾಧ್ಯವಾದುದು ಯಾವುದೂ ಇಲ್ಲ ಎನ್ನುತ್ತಾರೆ.
  • ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಚಾರದಲ್ಲಿ ಯಾವಾಗಲೂ ಹೊರಗುಳಿಯುವ ಜನರಿದ್ದಾರೆ
 ನೆನೆಸಿದ ಖರ್ಜೂರ ತಿಂದರೆ ಆರೋಗ್ಯಕ್ಕಿವೆ ಹಲವಾರು ಲಾಭಗಳು..! ತಪ್ಪದೇ ಸೇವಿಸಿ title=

Health Tips : ಈ ಆಧುನಿಕ ಮತ್ತು ಒತ್ತಡದ ಜೀವನಶೈಲಿಯಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಆದರೆ ಪ್ರಯತ್ನಪಟ್ಟರೆ ಅಸಾಧ್ಯವಾದುದು ಯಾವುದೂ ಇಲ್ಲ ಎನ್ನುತ್ತಾರೆ. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಚಾರದಲ್ಲಿ ಯಾವಾಗಲೂ ಹೊರಗುಳಿಯುವ ಜನರಿದ್ದಾರೆ. ಆದ್ದರಿಂದ ಉತ್ತಮ ಆರೋಗ್ಯವನ್ನು ಸುಲಭ ವಿಧಾನದಲ್ಲಿ ಪಡೆಯುವುದರ ಬಗ್ಗೆ ತಿಳಿದುಕೊಳ್ಳೋಣ. 

ಖರ್ಜೂರ ತಿನ್ನಲು ಸಿಹಿ ಮಾತ್ರವನ್ನು ಆರೋಗ್ಯಕ್ಕೂ ಉತ್ತಮ. ಇದನ್ನು ಪ್ರತಿ ದಿನ ನಿಮ್ಮ ಆಹಾರದಲ್ಲಿ ಸೇರಿಸಿಕೊಂಡರೆ ಮಲಬದ್ಧತೆಯಿಂದ ಹಿಡಿದು ರಕ್ತಹೀನತೆಯವರೆಗೆ ದೇಹದಲ್ಲಿನ ಎಲ್ಲಾ ಸಣ್ಣ ಮತ್ತು ದೊಡ್ಡ ರೋಗಗಳು ಗುಣವಾಗುತ್ತವೆ. ಈ ಹಣ್ಣುಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದು, ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ. 

ಇದನ್ನೂ ಓದಿ-ಕೂದಲು ಉದುರುವುದನ್ನು ನಿಯಂತ್ರಿಸಲು.. ಸ್ನಾನ ಮಾಡುವ ಮುನ್ನ ಈ 1 ಕೆಲಸ ಮಾಡಿ!!

ಈ ಫೈಬರ್ ಭರಿತ ಹಣ್ಣನ್ನು ತಿನ್ನುವುದು ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಎರಡರಿಂದ ಮೂರು ಖರ್ಜೂರವನ್ನು ಬೆಳಿಗ್ಗೆ ಸೇವಿಸಬೇಕು. ಇದರಿಂದ ಅನೇಕ ರೋಗಗಳು ನಿಮ್ಮಿಂದ ದೂರವಿರುತ್ತವೆ. 

ನೆನೆಸಿದ ಖರ್ಜೂರವನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು
ನೆನೆಸಿದ ಖರ್ಜೂರವನ್ನು ತಿನ್ನುವುದರಿಂದ ಜೀರ್ಣಕ್ರಿಯೆಯೂ ಸುಲಭವಾಗುತ್ತದೆ. ಖರ್ಜೂರದಲ್ಲಿ ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್, ಫೈಬರ್, ವಿಟಮಿನ್ ಕೆ, ವಿಟಮಿನ್ ಬಿ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಬ್ಬಿಣ, ಕ್ಯಾಲ್ಸಿಯಂ, ಮ್ಯಾಂಗನೀಸ್, ಸತು ಮುಂತಾದ ಅನೇಕ ರೀತಿಯ ಪೋಷಕಾಂಶಗಳಿವೆ. ಈ ಎಲ್ಲಾ ಪೋಷಕಾಂಶಗಳು ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತವೆ. 

ಇದನ್ನೂ ಓದಿ-Tea Side Effects: ಟೀ ಜೊತೆ ಮಿಸ್ ಆಗಿ ಕೂಡ ಈ ಆಹಾರಗಳನ್ನು ಸೇವಿಸಬೇಡಿ

ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು?

ಪ್ರತಿದಿನ ಖರ್ಜೂರವನ್ನು ತಿನ್ನುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ.
ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.
ಮೂಳೆಗಳು ಬಲವಾಗಿರುತ್ತವೆ.
ಮೆದುಳಿನ ಚಟುವಟಿಕೆಯು ವೇಗಗೊಳ್ಳುತ್ತದೆ.
ಆಯಾಸ ಮತ್ತು ದೌರ್ಬಲ್ಯದಿಂದ ಪರಿಹಾರ ಪಡೆಯಬಹುದು.
ರಕ್ತಹೀನತೆ ಇರುವ ರೋಗಿಗಳಿಗೆ ಪ್ರಯೋಜನಕಾರಿ.
ಪೈಲ್ಸ್ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
ಚರ್ಮ ಮತ್ತು ಕೂದಲಿಗೆ ತುಂಬಾ ಪ್ರಯೋಜನಕಾರಿ.
ದೈಹಿಕ ಶಕ್ತಿ ಮತ್ತು ಸಹಿಷ್ಣುತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಹೃದಯವನ್ನು ಆರೋಗ್ಯವಾಗಿರಿಸುತ್ತದೆ.
ಪುರುಷರು ಮತ್ತು ಮಹಿಳೆಯರಲ್ಲಿ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News