Dates side effects: ಒಣ ಹಣ್ಣುಗಳಲ್ಲಿ ಕಂಡುಬರುವ ಎಲ್ಲಾ ಪೋಷಕಾಂಶಗಳು ನಿಮ್ಮ ಆಹಾರ ಯೋಜನೆಯ ಭಾಗವಾಗಿ ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇರಿಸಿಕೊಂಡಾಗ ಮಾತ್ರ ಅವು ನಿಮ್ಮ ಆರೋಗ್ಯಕ್ಕೆ ವರದಾನವಾಗಬಹುದು. ನೀವು ನಿಯಮಿತವಾಗಿ ಅಗತ್ಯಕ್ಕಿಂತ ಹೆಚ್ಚು ಒಣ ಹಣ್ಣುಗಳನ್ನು ಸೇವಿಸಿದರೆ, ಅದು ನಿಮ್ಮ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಬದಲು ನಕಾರಾತ್ಮಕ ಪರಿಣಾಮ ಬೀರಬಹುದು. ಹೆಚ್ಚು ಖರ್ಜೂರ ತಿನ್ನುವುದರಿಂದ ಉಂಟಾಗುವ ಕೆಲವು ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ...
ಹೊಟ್ಟೆಯ ಸಮಸ್ಯೆಗಳು
ಯಾವುದೇ ಆಹಾರ ಪದಾರ್ಥದ ಅತಿಯಾದ ಸೇವನೆಯು ಆರೋಗ್ಯಕ್ಕೆ ಹೆಚ್ಚಿನ ಹಾನಿಯನ್ನುಂಟುಮಾಡುತ್ತದೆ. ನೀವು ಅಗತ್ಯಕ್ಕಿಂತ ಹೆಚ್ಚು ಖರ್ಜೂರ ಸೇವಿಸಿದರೆ, ನಿಮ್ಮ ಕರುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಉಬ್ಬುವಿಕೆ, ಗ್ಯಾಸ್ ಮತ್ತು ಮಲಬದ್ಧತೆಯಂತಹ ಹೊಟ್ಟೆಯ ಸಮಸ್ಯೆಗಳು ಉಂಟಾಗುತ್ತವೆ. ಹೀಗಾಗಿ ಈ ಒಣ ಹಣ್ಣನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ನಿಮ್ಮ ಆಹಾರ ಯೋಜನೆಯ ಭಾಗವಾಗಿ ಸೇರಿಸಿಕೊಳ್ಳಬೇಕು.
ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ
ಹೆಚ್ಚು ಖರ್ಜೂರ ತಿನ್ನುವುದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಆದ್ದರಿಂದ ಮಧುಮೇಹ ರೋಗಿಗಳು ಈ ಒಣ ಹಣ್ಣನ್ನು ಸೇವಿಸುವ ಮೊದಲು ತಜ್ಞರ ಸಲಹೆಯನ್ನು ತೆಗೆದುಕೊಳ್ಳಬೇಕು. ಹೆಚ್ಚಿನ ಕ್ಯಾಲೋರಿ ಹೊಂದಿರುವ ಖರ್ಜೂರವನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವುದರಿಂದ ನಿಮ್ಮ ತೂಕವೂ ಹೆಚ್ಚಾಗಬಹುದು.
ಒಂದು ದಿನದಲ್ಲಿ ಎಷ್ಟು ಖರ್ಜೂರ ತಿನ್ನಬೇಕು?
ಆರೋಗ್ಯ ತಜ್ಞರ ಪ್ರಕಾರ, ಒಂದು ದಿನದಲ್ಲಿ ಎರಡರಿಂದ ನಾಲ್ಕು ಖರ್ಜೂರ ಸೇವಿಸಬಹುದು. ಇದಕ್ಕಿಂತ ಹೆಚ್ಚು ಖರ್ಜೂರ ತಿನ್ನುವುದರಿಂದ ನಿಮ್ಮ ಆರೋಗ್ಯ ಸುಧಾರಿಸುವ ಬದಲು ಹದಗೆಡಬಹುದು. ಆಯುರ್ವೇದದ ಪ್ರಕಾರ, ಬೆಳಗ್ಗೆ ಈ ಒಣ ಹಣ್ಣನ್ನು ತಿನ್ನುವ ಮೂಲಕ ನಿಮ್ಮ ದಿನವನ್ನು ಪ್ರಾರಂಭಿಸಬಹುದು. ಖರ್ಜೂರವನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇವಿಸಿ ಮತ್ತು ನಿಮ್ಮ ಆರೋಗ್ಯವನ್ನು ಬಲಪಡಿಸಿ.
(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









