)
falsa fruit to blood sugar control : ಆರೋಗ್ಯಕರ ಆಹಾರವು ರಕ್ತದಲ್ಲಿನ ಸಕ್ಕರೆ ಹೆಚ್ಚಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಹಣ್ಣುಗಳು ಉತ್ತಮ ಆಹಾರದ ಪ್ರಮುಖ ಭಾಗವಾಗಿದೆ. ಆದರೆ ಮಧುಮೇಹ ರೋಗಿಗಳು ಎಲ್ಲಾ ಹಣ್ಣುಗಳನ್ನು ತಿನ್ನಬಾರದು. ಕೆಲವು ಹಣ್ಣುಗಳಲ್ಲಿ ಹೆಚ್ಚಿನ ಸಕ್ಕರೆ ಇದ್ದು ಅದು ಅವರ ಆರೋಗ್ಯಕ್ಕೆ ಹಾನಿಕಾರಕವಾಗಿದೆ.
ಮಧುಮೇಹವು ದೇಹವು ಗ್ಲೂಕೋಸ್ ಅನ್ನು ಸರಿಯಾಗಿ ಬಳಸಲು ಸಾಧ್ಯವಾಗದ ಕಾಯಿಲೆಯಾಗಿದೆ. ಇದು ರಕ್ತದಲ್ಲಿ ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹ ರೋಗಿಗಳು ಆರೋಗ್ಯಕರ ಆಹಾರವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ.
ಈ ಹಣ್ಣನ್ನು ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ಫಾಲ್ಸಾ ಹಣ್ಣು, ಚೂರಿ ಹಣ್ಣು ಎಂದು ಇದನ್ನು ಕರೆಯುತ್ತಾರೆ. ಫಾಲ್ಸಾ ಅಥವಾ ಚೂರಿ ಹಣ್ಣು ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸೋಡಿಯಂ, ರಂಜಕ, ಕ್ಯಾಲ್ಸಿಯಂ, ವಿಟಮಿನ್ ಎ ಮತ್ತು ವಿಟಮಿನ್ ಸಿ ಮುಂತಾದ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.
ಫಾಲ್ಸಾ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನಗಳು ಸಿಗುತ್ತದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಫಾಲ್ಸಾ ಹಣ್ಣು ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳ ಕೊರತೆ ಎದುರಾಗುವುದಿಲ್ಲ. ಇದು ಸೋಂಕನ್ನು ತಡೆಯುತ್ತದೆ. ಪುರುಷರಲ್ಲಿ ಕಡಿಮೆ ವೀರ್ಯದ ಸಮಸ್ಯೆ ಸಹ ಗುಣವಾಗುತ್ತದೆ.
ಫಾಲ್ಸಾ ಹಣ್ಣಿನ ಸೇವನೆಯಿಂದ ದೇಹಕ್ಕೆ ಹಲವು ರೀತಿಯ ಅದ್ಭುತ ಪ್ರಯೋಜನಗಳು ಸಿಗುತ್ತವೆ. ಫಾಲ್ಸಾ ಜ್ಯೂಸ್ ದೇಹಕ್ಕೆ ಟಾನಿಕ್ ಆಗಿ ಕೆಲಸ ಮಾಡುತ್ತದೆ. ಪಿತ್ತರಸ ಸಮಸ್ಯೆ ನಿವಾರಣೆಯಾಗುತ್ತದೆ.
ವಿಟಮಿನ್ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಫಾಲ್ಸಾ ಸೇವನೆ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಫಾಲ್ಸಾ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಫಾಲ್ಸಾ ಹಣ್ಣಿನ ಗ್ಲೈಸೆಮಿಕ್ ಇಂಡೆಕ್ಸ್ ಅತ್ಯಂತ ಕಡಿಮೆಯಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಫಾಲ್ಸಾ ಹಣ್ಣಿನಲ್ಲಿ ಇರುವ ಕಾರಣ ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.
ಮಧುಮೇಹಿಗಳು ಫಾಲ್ಸಾ ಹಣ್ಣನ್ನು ಜ್ಯೂಸ್ ಮಾಡಿ ಕುಡಿಯಬಹುದು. ಆದರೆ ಇದಕ್ಕೆ ಸಕ್ಕರೆ ಸೇರಿಸಬೇಡಿ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.