Food Avoid With Egg: ಮೊಟ್ಟೆ ಜೊತೆಗೆ ಈ ಆಹಾರಗಳನ್ನು ಎಂದಿಗೂ ಸೇವಿಸಬೇಡಿ
ಮೊಟ್ಟೆಗಳಲ್ಲಿ ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ.
ಬೆಂಗಳೂರು: Food Avoid With Egg- ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತಾದೆ. ಆದರೆ, ಮೊಟ್ಟೆಗಳನ್ನು ಸೇವಿಸುವಾಗ ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗಮನಾರ್ಹವಾಗಿ ಮೊಟ್ಟೆ ಸೇವಿಸುವ ಮೊದಲು ಮತ್ತು ನಂತರ ಕೆಲವು ಆಹಾರಗಳನ್ನು ಸೇವಿಸಬಾರದು. ಈ ಬಗ್ಗೆ ಸರಿಯಾಗಿ ನಿಗಾ ವಹಿಸದಿದ್ದರೆ ಅಜೀರ್ಣದಂತಹ ಸಮಸ್ಯೆ ಎದುರಾಗಬಹುದು.
ಮೊಟ್ಟೆಗಳಲ್ಲಿ (Egg) ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ಆದರೆ ಮೊಟ್ಟೆಯೊಂದಿಗೆ ಕೆಲವು ಆಹಾರ ಸೇವಿಸಿದರೆ ಅದು ನಿಮಗೆ ಅಲರ್ಜಿ ಅಥವಾ ಅಜೀರ್ಣವನ್ನುಂಟುಮಾಡಬಹುದು. ಹಾಗಾಗಿ ಮೊಟ್ಟೆಯ ಜೊತೆ ಯಾವ ಆಹಾರವನ್ನು ಸೇವಿಸಬಹುದು, ಯಾವ ಆಹಾರಾವನ್ನು ಸೇವಿಸಬಾರದು ಎಂಬ ಬಗ್ಗೆ ಎಚ್ಚರ ವಹಿಸಿ.
ಇದನ್ನೂ ಓದಿ- ಪುರುಷರು ಪ್ರತಿ ದಿನ ಬೆಳಿಗ್ಗೆ ಮೊಟ್ಟೆ ಸೇವಿಸಿದರೆ ಸಿಗಲಿದೆ ಇಷ್ಟೊಂದು ಪ್ರಯೋಜನ
ಮೊಟ್ಟೆ ಜೊತೆಗೆ ಈ ಆಹಾರಗಳನ್ನು ಸೇವಿಸದಿದ್ದರೆ ಒಳಿತು:
>> ಮೊಟ್ಟೆಗಳೊಂದಿಗೆ ಸಕ್ಕರೆ ಬಳಸುವುದನ್ನು (Egg with Sugar) ತಪ್ಪಿಸಿ. ಈ ಎರಡೂ ಅಮೈನೋ ಆಮ್ಲಗಳನ್ನು ಹೊಂದಿರುತ್ತವೆ. ಇದನ್ನು ಅಧಿಕವಾಗಿ ಸೇವಿಸಿದರೆ ಅದು ವಿಷಕಾರಿಯಾಗಿದೆ.
>> ಸೋಯಾ ಹಾಲು ಮತ್ತು ಮೊಟ್ಟೆಗಳ ಸಂಯೋಜನೆಯನ್ನು ತಪ್ಪಿಸಬೇಕು. ಎರಡೂ ಬಹಳಷ್ಟು ಪ್ರೋಟೀನ್ ಹೊಂದಿರುತ್ತವೆ. ಆದ್ದರಿಂದ, ಅವುಗಳನ್ನು ಒಟ್ಟಿಗೆ ಸೇವಿಸುವುದರಿಂದ ದೇಹವು ಪ್ರೋಟೀನ್‌ಗಳನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ.
>> ಚಹಾ ಕುಡಿದ ಕೂಡಲೇ ಮೊಟ್ಟೆಗಳನ್ನು ತಿನ್ನಬಾರದು. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.
ಇದನ್ನೂ ಓದಿ- Health Insurance: ಆರೋಗ್ಯ ವಿಮಾ ಕಂಪನಿಯು ನಿಮ್ಮ ಕ್ಲೈಂ ತಿರಸ್ಕರಿಸಿದರೆ ಭಯಪಡಬೇಡಿ, ಇಲ್ಲಿ ದೂರು ನೀಡಿ
>> ಬೇಯಿಸಿದ ಮೊಟ್ಟೆ ಮತ್ತು ಮೀನುಗಳನ್ನು ಒಟ್ಟಿಗೆ ತಿನ್ನಬಾರದು. ಇದು ಚರ್ಮದ ಅಲರ್ಜಿಗೆ ಕಾರಣವಾಗಬಹುದು.
>> ಮೊಟ್ಟೆ ಮತ್ತು ಪನೀರ್ ಎರಡರಲ್ಲೂ ಪ್ರೋಟೀನ್ ಅಧಿಕವಾಗಿರುತ್ತದೆ. ಆದ್ದರಿಂದ, ಅವುಗಳನ್ನು ಒಟ್ಟಿಗೆ ತಿನ್ನಬಾರದು.
>> ಮೊಟ್ಟೆ ಸೇವಿಸಿದ ನಂತರ ಬಾಳೆಹಣ್ಣನ್ನು ತಿನ್ನಬಾರದು. ಇದು ಮಲಬದ್ಧತೆಗೆ ಕಾರಣವಾಗಬಹುದು.
(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಂಪೂರ್ಣ ಸತ್ಯವಾಗಿದೆ ಮತ್ತು ಸ್ಫುಟವಾಗಿದೆ ಎಂಬುದನ್ನು ಝೀ ಹಿಂದೂಸ್ತಾನ್ ಕನ್ನಡ ಪುಷ್ಟೀಕರಿಸುವುದಿಲ್ಲ. ಈ ಮಾಹಿತಿಯನ್ನು ಅನುಸರಿಸುವ ಮುನ್ನ ಸಂಬಂಧಿತ ಕ್ಷೇತ್ರದ ತಜ್ಞರ ಸಲಹೆ ಪಡೆಯುವುದು ಉತ್ತಮ)
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.