Symptoms Of High Cholesterol In Legs : ಇತ್ತೀಚಿನ ದಿನಗಳಲ್ಲಿ ಬಹುತೇಕರು  ಕೊಲೆಸ್ಟ್ರಾಲ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿ ಕಂಡು ಬರುವ ಮೇಣದಂತಹ ಜಿಗುಟಾದ ವಸ್ತು. ರಕ್ತನಾಳಗಳಲ್ಲಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ಅನೇಕ ಗಂಭೀರ ಕಾಯಿಲೆಗಳು ಬರಲಾರಂಭಿಸುತ್ತವೆ. ಈ ಕೊಳಕು ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳಲು ಪ್ರಾರಂಭಿಸಿದರೆ, ರಕ್ತ ಪರಿಚಲನೆ ನಿಧಾನವಾಗುತ್ತದೆ. ಇದು ಅಡಚಣೆ, ಹೃದಯಾಘಾತ, ಪಾರ್ಶ್ವವಾಯು ಮತ್ತು ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ದೇಹದಲ್ಲಿ ಹಲವು ರೀತಿಯ ಲಕ್ಷಣಗಳು ಕಂಡುಬರುತ್ತವೆ. ಈ ರೋಗಲಕ್ಷಣಗಳು ನಿಮ್ಮ ಪಾದಗಳಲ್ಲಿಯೂ ಕಂಡು ಬರುತ್ತದೆ. 


COMMERCIAL BREAK
SCROLL TO CONTINUE READING

ಪಾದಗಳು ತಣ್ಣಗಾಗುವುದು : 
ಚಳಿಗಾಲದಲ್ಲಿ ಪಾದಗಳು ತಣ್ಣಗಾಗುವುದು ಸಾಮಾನ್ಯ.ಆದರೆ, ನಿಮ್ಮ ಪಾದ ಮತ್ತು ಪಾದದ ಅಡಿಭಾಗ ಯಾವಾಗಲೂ ತಣ್ಣಗಾಗಿದ್ದರೆ, ಅದು ರಕ್ತನಾಳಗಳಲ್ಲಿ ಸೇರಿಕೊಂಡಿರುವ ಅಧಿಕ ಕೊಲೆಸ್ಟ್ರಾಲ್ ಸಂಕೇತವಾಗಿರಬಹುದು.ಬೇಸಿಗೆಯಲ್ಲಿಯೂ ನಿಮ್ಮ ಪಾದಗಳು ತಣ್ಣಗಾಗುತ್ತಿದ್ದರೆ ನಿರ್ಲಕ್ಷಿಸಬಾರದು. ಹೀಗಾಗುತ್ತಿದ್ದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ.


ಇದನ್ನೂ ಓದಿ : Diabetes Control In Summer: ಬೇಸಿಗೆಯಲ್ಲಿ ಮಧುಮೇಹ ನಿಯಂತ್ರಣಕ್ಕೆ ಸಿಂಪಲ್ ಟಿಪ್ಸ್


ಕಾಲುಗಳಲ್ಲಿ ಕಾಣಿಸಿಕೊಳ್ಳುವ ನೋವು ಮತ್ತು ಸೆಳೆತ : 
ಅಧಿಕ ಕೊಲೆಸ್ಟ್ರಾಲ್ ಕಾರಣದಿಂದಾಗಿ ಕಾಲುಗಳಲ್ಲಿ ತೀವ್ರವಾದ ನೋವು ಮತ್ತು ಸೆಳೆತ ಕಾಣಿಸಿಕೊಳ್ಳಬಹುದು. ಕಾಲುಗಳ ಅಪಧಮನಿಗಳು ನಿರ್ಬಂಧಿಸಿದಾಗ, ರಕ್ತದ ಮೂಲಕ ಆಮ್ಲಜನಕ ಕಾಲುಗಳ ಕೆಳಗಿನ ಭಾಗವನ್ನು ತಲುಪಲು ಸಾಧ್ಯವಾಗುವುದಿಲ್ಲ.ಈ ಕಾರಣದಿಂದಾಗಿ, ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು. ನೀವು ಕೂಡಾ ಇದೇ  ಸಮಸ್ಯೆಯನ್ನು ಎದುರಿಸುತ್ತಿದ್ದರೆ, ತಕ್ಷಣ ಕೊಲೆಸ್ಟ್ರಾಲ್ ಮಟ್ಟವನ್ನು ಪರೀಕ್ಷಿಸಬೇಕು.


ಕಾಲುಗಳ ಬಣ್ಣದಲ್ಲಿ ಬದಲಾವಣೆ : 
ಕೊಲೆಸ್ಟ್ರಾಲ್ ಹೆಚ್ಚಳದಿಂದಾಗಿ, ಪಾದದ ಚರ್ಮದ ಬಣ್ಣವು ಬದಲಾಗಲು ಪ್ರಾರಂಭಿಸುತ್ತದೆ. ಅಧಿಕ ಕೊಲೆಸ್ಟ್ರಾಲ್ ಇದ್ದಾಗ, ದೇಹದಲ್ಲಿ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ಇದರಿಂದಾಗಿ ಜೀವಕೋಶಗಳಿಗೆ ಸರಿಯಾದ ಪೋಷಣೆ ದೊರೆಯುವುದಿಲ್ಲ. ಈ ಕಾರಣದಿಂದಾಗಿ,ಕಾಲುಗಳ ಚರ್ಮವು ನೇರಳೆ ಅಥವಾ ನೀಲಿ ಬಣ್ಣಕ್ಕೆ ತಿರುಗುತ್ತದೆ.  ಚರ್ಮದ ಬಣ್ಣ ಬದಲಾದಾಗ ರಕ್ತನಾಳಗಳಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. 


ಇದನ್ನೂ ಓದಿ :ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಅನ್ನು ಕರಗಿಸಿ ದೇಹದಿಂದ ಹೊರ ಹಾಕುತ್ತದೆ ಈ ಪುಡಿ !ಒಮ್ಮೆ ಬಳಸಿದರೆ ಸಾಕು


ಪಾದದ ಗಾಯಗಳು ಬೇಗನೆ ಗುಣವಾಗುವುದಿಲ್ಲ : 
ಪಾದಗಳು ಅಥವಾ ಅಡಿಭಾಗದಲ್ಲಿ ಗಾಯವಾಗಿದ್ದು, ಅದು ತ್ವರಿತವಾಗಿ ಗುಣವಾಗದಿದ್ದರೆ,  ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂದರ್ಥ. ದೇಹದಲ್ಲಿನ ಕೊಲೆಸ್ಟ್ರಾಲ್ ಹೆಚ್ಚಳದಿಂದಾಗಿ, ರಕ್ತ ಪರಿಚಲನೆ ಸರಿಯಾಗಿ ಆಗುವುದಿಲ್ಲ.ಇದರಿಂದಾಗಿ ಗಾಯ ಬೇಗನೇ ವಾಸಿಯಾಗುವುದಿಲ್ಲ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.