Fruits To Reduce High Cholesterol: ಬೇರೆ ಋತುಗಳಿಗಿಂತ ಚಳಿಗಾಲದಲ್ಲಿ ಕೊಲೆಸ್ಟ್ರಾಲ್ ತುಂಬಾ ಹೆಚ್ಚಾಗುತ್ತದೆ. ಇದಕ್ಕೆ ನಮ್ಮ ಜೀವನಶೈಲಿ, ಹವಾಮಾನ, ಆಹಾರ ಪದ್ಧತಿ ಹೀಗೆ ಹಲವು ಕಾರಣಗಳಿರಬಹುದು. ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಶೇಖರಣೆಯಾಗುವ ಮೂಲಕ ರಕ್ತ ಪರಿಚಲನೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದರಿಂದ ಹಲವು ಬಾರಿ ಹೃದಯಕ್ಕೆ ಸರಿಯಾಗಿ ರಕ್ತ ತಲುಪುವುದಿಲ್ಲ. ಇದು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಜೊತೆಗೆ ಇನ್ನೂ ಹಲವು ಕಾಯಿಲೆಗಳಿಗೂ ಕಾರಣವಾಗಬಹುದು. ಇದನ್ನು ತಪ್ಪಿಸಲು ಕೊಲೆಸ್ಟ್ರಾಲ್ ನಿಯಂತ್ರಣ ಬಹಳ ಅಗತ್ಯ. ಚಳಿಗಾಲದಲ್ಲಿ ಕೆಲವು ಹಣ್ಣುಗಳ ಸೇವನೆಯು ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬಹಳ ಪ್ರಯೋಜನಕಾರಿ ಆಗಿದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿಯೋಣ...


COMMERCIAL BREAK
SCROLL TO CONTINUE READING

ಚಳಿಗಾಲದಲ್ಲಿ ಕೊಲೆಸ್ಟ್ರಾಲ್ ನಿಯಂತ್ರಣಕ್ಕಾಗಿ ಈ ಹಣ್ಣುಗಳನ್ನು ಮಿಸ್ ಮಾಡದೇ ತಿನ್ನಿ: 
ಪರಂಗಿ ಹಣ್ಣು:

ಎಲ್ಲಾ ಋತುಗಳಲ್ಲೂ ಬಹಳ ಸುಲಭವಾಗಿ ಲಭ್ಯವಿರುವ ಪರಂಗಿಹಣ್ಣು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ. ಫೈಬರ್, ಆಂಟಿ-ಆಕ್ಸಿಡೆಂಟ್ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಪರಂಗಿ ಹಣ್ಣಿನ ಸೇವನೆಯಿಂದ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು.


ದ್ರಾಕ್ಷಿ ಹಣ್ಣು:
ದ್ರಾಕ್ಷಿಯಲ್ಲಿರುವ ಫೈಬರ್ ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ, ಪೋಷಕಾಂಶ ಭರಿತ ದ್ರಾಕ್ಷಿಯನ್ನು ನಿಮ್ಮ ಡಯಟ್ನಲ್ಲಿ ಸೇರಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಿಸಲು ಸಹಾಯಕವಾಗುತ್ತದೆ. 


ಇದನ್ನೂ ಓದಿ- ನೀವೂ ಸಹ ರಾತ್ರಿ ಸ್ವೆಟರ್ ಧರಿಸಿ ಮಲಗುತ್ತೀರಾ? ಇಂದೇ ಈ ಅಭ್ಯಾಸವನ್ನು ಬಿಡಿ


ಸೇಬು:
ನಿತ್ಯ ಒಂದು ಸೇಬು ತಿಂದರೆ ವೈದ್ಯರಿಂದ ದೂರ ಉಳಿಯಬಹುದು ಎಂಬ ಮಾತಿದೆ.  ಪಾಲಿಫಿನಾಲ್ಗಳು, ಆಂಟಿಆಕ್ಸಿಡೆಂಟ್ಗಳು ಮತ್ತು ಫೈಬರ್ನಲ್ಲಿ ಸಮೃದ್ಧವಾಗಿರುವ ಸೇಬು ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಅತ್ಯುತ್ತಮ ಆಹಾರವಾಗಿದೆ. ಚಳಿಗಾಲದಲ್ಲಿ ಸೇಬು ಸೇವನೆಯಿಂದ ಚಯಾಪಚಯ ಹೆಚ್ಚಾಗುತ್ತದೆ. ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತದೆ. ಸೇಬು ಕೊಬ್ಬನ್ನು ದೊಡ್ಡ ಪ್ರಮಾಣದಲ್ಲಿ ಕಡಿಮೆ ಮಾಡುತ್ತದೆ. ಹಾಗಾಗಿ, ಕೇವಲ ಚಳಿಗಾಲದಲ್ಲಿ ಮಾತ್ರವಲ್ಲ ಕೊಲೆಸ್ಟ್ರಾಲ್ ನಿಯಂತ್ರಿಸಲು ಬಯಸುವವರು ಎಲ್ಲಾ ಋತುಗಳಲ್ಲೂ ಇದನ್ನು ನಿಮ್ಮ ಆಹಾರ ಭಾಗವಾಗಿಸಬಹುದು.


ಪಿಯರ್:
ಪಿಯರ್ ಹಣ್ಣಿನಲ್ಲಿ ಪ್ರೋಟೀನ್ಗಳು, ವಿಟಮಿನ್ಗಳು, ಖನಿಜಗಳು ಮತ್ತು ಆಂಟಿ-ಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿವೆ. ಇದರಲ್ಲಿ ಪೆಕ್ಟಿನ್ ಎಂಬ ಫೈಬರ್ ಇದ್ದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಬಹಳ ಪರಿಣಾಮಕಾರಿ ಆಗಿದೆ. 


ಇದನ್ನೂ ಓದಿ- Weight Loss Tips: ಚಳಿಗಾಲದಲ್ಲಿ ತೂಕ ಇಳಿಸಿಕೊಳ್ಳಲು ನಿಂಬೆ ಪಾನಕದ ಬದಲು ಈ ಪಾನೀಯ ಸೇವಿಸಿ


ಸಿಟ್ರಿಕ್ ಹಣ್ಣುಗಳು:
ಸಿಟ್ರಿಕ್ ಹಣ್ಣುಗಳಲ್ಲಿ ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಉತ್ತಮ ಪ್ರಮಾಣದಲ್ಲಿ ಕಂಡು ಬರುತ್ತವೆ. ಕಿತ್ತಳೆ ಹಣ್ಣು, ನಿಂಬೆ ಹಣ್ಣಿನಂತಹ ಸಿಟ್ರಿಕ್ ಹಣ್ಣುಗಳು ಕೂಡ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯಕವಾಗಿವೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.