ಬೆಂಗಳೂರು : ಹಸಿರು ಮತ್ತು ಹಸಿ ಕಾಳುಗಳನ್ನು ಚಳಿಗಾಲದಲ್ಲಿ ಹೆಚ್ಚಾಗಿ ಸೇವಿಸಲಾಗುತ್ತದೆ. ಇತರ ತರಕಾರಿ ಮತ್ತು ಸಲಾಡ್ ಗಳ ಜೊತೆಗೆ ಕೂಡಾ ಈ ಹಸಿ ಕಾಳುಗಳನ್ನು ಸೇರಿಸಲಾಗುತ್ತದೆ. ಹಸಿರು ಕಡಲೆ ತಿನ್ನಲು ರುಚಿ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಈ ಹಸಿರು ಧಾನ್ಯ ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ತೆಗೆದುಹಾಕುತ್ತದೆ. 


COMMERCIAL BREAK
SCROLL TO CONTINUE READING

ಹಸಿ ಕಾಳಿನಲ್ಲಿರುವ ಪೋಷಕಾಂಶಗಳು :
ಹಸಿರು ಕಡಲೆ ಕಾಳಿನಲ್ಲಿ ಸಸ್ಯ ಆಧಾರಿತ ಪ್ರೋಟೀನ್ ಇದೆ. ಇದರಲ್ಲಿ  ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಕೆ ಸಮೃದ್ಧವಾಗಿದೆ. ಫೈಬರ್, ಕಬ್ಬಿಣ, ಫೋಲೇಟ್, ರಂಜಕ, ಸೋಡಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸೆಲೆನಿಯಮ್, ಕ್ಯಾಲ್ಸಿಯಂ, ಕ್ಯಾಲೋರಿಗಳು, ಕೊಬ್ಬುಗಳು, ಕಾರ್ಬೋಹೈಡ್ರೇಟ್ ಗಳು ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. 


ಇದನ್ನೂ ಓದಿ : Diabetes: ರಕ್ತದಲ್ಲಿನ ಸಕ್ಕರೆ ಮಟ್ಟ ಕಂಟ್ರೋಲ್‌ನಲ್ಲಿಡುತ್ತೆ ಈ ವಿಶೇಷ ಚಹಾ


ಸ್ನಾಯುಗಳನ್ನು ಬಲಗೊಳ್ಳುತ್ತವೆ : 
ಹಸಿರು ಕಡಲೆ ಕಾಳುಗಳಲ್ಲಿ ಸಸ್ಯ ಆಧಾರಿತ ಪ್ರೋಟೀನ್ ಇರುವುದರಿಂದ ಇದು  ಸ್ನಾಯುಗಳನ್ನು ಬಲಗೊಳಿಸುತ್ತವೆ. ಇದು ಪ್ರೋಟೀನ್‌ ನಿಂದ ಸಮೃದ್ಧವಾಗಿದೆ.  ಹಾಗಾಗಿ ಮೂಳೆಗಳನ್ನು ಬಲಪಡಿಸುವ ಕೆಲಸ ಕೂಡಾ ಮಾಡುತ್ತದೆ.


ಗರ್ಭಿಣಿಯರಿಗೆ ಪ್ರಯೋಜನಕಾರಿ :
ಗರ್ಭಿಣಿಯರಿಗೂ ಹಸಿರು ಕಾಳು ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ವಿಟಮಿನ್ ಬಿ9 ಭ್ರೂಣದ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದು ಗರ್ಭಪಾತದ ಅಪಾಯವನ್ನು ತಡೆಯಲು ಸಹಾಯ ಮಾಡುತ್ತದೆ. 


ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ :
ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕಲು ಹಸಿರು ಕಡಲೆ ಕಾಳು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್ ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಚಯಾಪಚಯವನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಹಸಿರು  ಕಡಲೆ ಕಾಳು ತಿನ್ನುವುದರಿಂದ ಕರುಳಿನ ಕ್ಯಾನ್ಸರ್ ಬರುವ ಅಪಾಯವೂ ಕಡಿಮೆಯಾಗುತ್ತದೆ.


ಇದನ್ನೂ ಓದಿ : Egg Side Effects : ಮೊಟ್ಟೆ ಜೊತೆ ಅಪ್ಪಿತಪ್ಪಿಯೂ ಸೇವಿಸಬೇಡಿ ಈ ಆಹಾರಗಳನ್ನು!


ಹೃದಯದ ಆರೋಗ್ಯಕ್ಕೆ : 
ಹಸಿರು ಕಡಲೆ ಕಾಳು ಹೃದಯಕ್ಕೆ ತುಂಬಾ ಪ್ರಯೋಜನಕಾರಿ. ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಕೂದಲ ಬೆಳವಣಿಗೆಗೆ :
ಹಸಿರು ಕಡಲೆ ಕಾಳಿನಲ್ಲಿ ಪ್ರೋಟೀನ್ ಸಾಕಷ್ಟು ಪ್ರಮಾಣದಲ್ಲಿ ಇರುತ್ತದೆ. ಇದು ಕೂದಲನ್ನು ಬೇರಿನಿಂದಲೇ ಬಲಪಡಿಸುವ ಕೆಲಸ ಮಾಡುತ್ತದೆ. ಒಣ ತ್ವಚೆಯ ಸಮಸ್ಯೆಯನ್ನೂ ದೂರ ಮಾಡುತ್ತದೆ. 


ಮಾನಸಿಕ ಆರೋಗ್ಯಕ್ಕೆ : 
ಹಸಿರು ಕಡಲೆ ಕಾಳಿನಲ್ಲಿ ಫೋಲೇಟ್ ಸಮೃದ್ಧವಾಗಿರುತ್ತದೆ. ಇದು ಮಾನಸಿಕ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಹಸಿರು ಕಡಲೆ ಕಾಲು ತಿನ್ನುವುದರಿಂದ ಖಿನ್ನತೆಯಂತಹ ಸಮಸ್ಯೆಗಳು ದೂರವಾಗುತ್ತವೆ.  


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.