Winter Healthy foods : ಚಳಿಗಾಲ ಶುರುವಾಗುತ್ತಿದ್ದಂತೆ ವಿವಿಧ ರೀತಿಯ ತರಕಾರಿಗಳು ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆ. ಕೆಲವು ಆಹಾರ ಪ್ರದಾರ್ಥಗಳನ್ನು ಉತ್ತಮ ಆರೋಗ್ಯಕ್ಕಾಗಿ ವರ್ಷವಿಡೀ ಸೇವಿಸಬಹುದು. ಅಂತಹ ಕೆಲವು ವಸ್ತುಗಳಲ್ಲಿ ಹಸಿ ಕಡಲೆಯೂ ಸಹ ಒಂದು. ಈ ಧಾನ್ಯವು ಸಾಕಷ್ಟು ವಿಟಮಿನ್ ಮತ್ತು ಖನಿಜಗಳಲ್ಲಿ ಸಮೃದ್ಧವಾಗಿದೆ. 


COMMERCIAL BREAK
SCROLL TO CONTINUE READING

ಹಸಿಗಡಲೆ ಪ್ರೋಟೀನ್ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ ಗಳಲ್ಲಿ ಸಮೃದ್ಧವಾಗಿದೆ. ಇದು ಫೈಬರ್, ಕಬ್ಬಿಣ, ಫೋಲೇಟ್, ಸೋಡಿಯಂ, ಪೊಟ್ಯಾಸಿಯಮ್ ಮುಂತಾದ ಅಂಶಗಳನ್ನು ಹೇರಳವಾಗಿ ಒಳಗೊಂಡಿದೆ. ಹಾಗಾದರೆ ಚಳಿಗಾಲದಲ್ಲಿ ಈ ಧಾನ್ಯವನ್ನು ತಿನ್ನುವುದರಿಂದ ಆಗುವ ಐದು ಪ್ರಯೋಜನಗಳ ಬಗ್ಗೆ ತಿಳಿಯೋಣ...


ಇದನ್ನೂ ಓದಿ:ಸೀಬೆಹಣ್ಣು ತಿಂದ ನಂತರ ಯಾವುದೇ ಕಾರಣಕ್ಕೂ ಈ 5 ಆಹಾರಗಳನ್ನು ತಿನ್ನಲೇಬಾರದು


► ಹಸಿಗಡಲೆ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ವಿಟಮಿನ್ ಸಿ ನಲ್ಲಿ ಸಮೃದ್ಧವಾಗಿದೆ. ಅಲ್ಲದೆ, ವೈರಲ್ ಸೋಂಕಿನ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. 


► ಹಸಿ ಕಡಲೆಯಲ್ಲಿ ಕರಗುವ ನಾರು ಇದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಹತೋಟಿಗೆ ತರಲು ಸಹಾಯ ಮಾಡುತ್ತದೆ. ಅಲ್ಲದೆ, ರಕ್ತದಲ್ಲಿನ ಗ್ಲೂಕೋಸ್ ಮತ್ತು ಲಿಪಿಡ್ ಪ್ರೊಫೈಲ್ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಇದು ಟೈಪ್ 2 ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 


► ಈ ಹಸಿರು ಕಾಳುಗಳಲ್ಲಿ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದನ್ನು ಸೇವಿಸುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. 


► ಹಸಿರು ಬೇಳೆಯಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ ಮತ್ತು ಇದರ ಸೇವನೆಯಿಂದ ಕಣ್ಣಿನ ಹೊಳಪು ಸುಧಾರಿಸುತ್ತದೆ. ಹಸಿರು ಬೇಳೆಯನ್ನು ತಿನ್ನುವುದರಿಂದ ಅನೇಕ ಕಣ್ಣಿನ ಸಮಸ್ಯೆಗಳನ್ನು ತಡೆಯಬಹುದು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.