)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡದ ಕಲ್ಲುಗಳು ತುಂಬಾ ಸಾಮಾನ್ಯವಾಗಿದೆ. ಇದಕ್ಕೆ ಹಲವು ಕಾರಣಗಳಿರಬಹುದು. ಅವುಗಳಲ್ಲಿ ಒಂದು ಆಹಾರ ಪದ್ಧತಿ. ಮೂತ್ರಪಿಂಡದ ಕಲ್ಲುಗಳಿದ್ದಾಗ, ಅದರ ನೋವು ಅಸಹನೀಯವಾಗಿರುತ್ತದೆ. ಇದು ಕೆಳ ಬೆನ್ನು, ಹೊಟ್ಟೆ ಅಥವಾ ಮೂತ್ರನಾಳದಲ್ಲಿ ತೀವ್ರವಾದ ನೋವನ್ನು ಒಳಗೊಂಡಿರುತ್ತವೆ. ಇನ್ನು ಕೆಲವರಿಗೆ ವಾಂತಿ ಅಥವಾ ವಾಕರಿಕೆ, ಆಗಾಗ ಮೂತ್ರ ವಿಸರ್ಜನೆ, ಅತಿಯಾದ ಬೆವರುವಿಕೆ ಮುಂತಾದ ಸಮಸ್ಯೆಗಳು ಕೂಡಾ ಕಾಣಿಸಿಕೊಳುತ್ತವೆ.
ಕಿಡ್ನಿ ಸ್ಟೋನ್ ಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಅವುಗಳ ಗಾತ್ರ ಹೆಚ್ಚಾಗಬಹುದು. ಆದ್ದರಿಂದ, ಸಮಯೋಚಿತ ಚಿಕಿತ್ಸೆ ಬಹಳ ಮುಖ್ಯ. ಕಲ್ಲುಗಳನ್ನು ತೆಗೆದುಹಾಕಲು ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಶಸ್ತ್ರಚಿಕಿತ್ಸೆ ಕೂಡಾ ಮಾಡಿಸಬೇಕಾಗಿ ಬರಬಹುದು. ಆದರೆ ಮನೆಮದ್ದುಗಳ ಸಹಾಯದಿಂದ, ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಿ ಮೂತ್ರದ ಮೂಲಕ ಹೊರಹಾಕಬಹುದು.
ತುಳಸಿ ಎಲೆಗಳನ್ನು ಬಳಸುವ ಮೂಲಕ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿವಾರಿಸಬಹುದು. ತುಳಸಿಯು ವಿಟಮಿನ್ಗಳು, ಸೋಡಿಯಂ, ಕಬ್ಬಿಣ, ಕ್ಯಾಲ್ಸಿಯಂನಂತಹ ಅನೇಕಪೋಷಕಾಂಶಗಳನ್ನು ಒಳಗೊಂಡಿದೆ. ಇದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ತುಳಸಿಯನ್ನು ಸೇವಿಸುವುದರಿಂದ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯೂ ದೂರವಾಗುತ್ತದೆ ಎನ್ನುವುದು ಅನೇಕರಿಗೆ ತಿಳಿದಿರಲಿಕ್ಕಿಲ್ಲ. ಹೌದು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ವಿಧಾನದಲ್ಲಿ ತುಳಸಿಯನ್ನು ಸೇವಿಸಿದರೆ ಕಿಡ್ನಿ ಸ್ಟೋನ್ ಕರಗಿ ಪುಡಿಯಾಗುತ್ತದೆ.
ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳಿದ್ದರೆ, ತುಳಸಿ ಚಹಾವನ್ನು ಸೇವಿಸಬಹುದು.ತುಳಸಿ ಚಹಾವು ಅಸಿಟಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಕಲ್ಲುಗಳಿಂದ ಉಂಟಾಗುವ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅಂಶವಾಗಿದೆ. ಇದು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ. ತುಳಸಿಯ ಲಿಥಿಯಾಸಿಸ್ ವಿರೋಧಿ ಗುಣಲಕ್ಷಣಗಳು ಕಲ್ಲುಗಳ ಗಾತ್ರವನ್ನು ಒಡೆಯಲು ಮತ್ತು ಕುಗ್ಗಿಸಲು ಹಾಗೂ ಅವುಗಳ ರಚನೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
(ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.