ಬೆಂಗಳೂರು : ಕೊಲೆಸ್ಟ್ರಾಲ್ ಒಂದು ರೀತಿಯ ಕೊಬ್ಬು.ಇದು ದೇಹಕ್ಕೆ ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ಉತ್ಪತ್ತಿ ಮಾಡಲು ಸಹಾಯ  ಮಾಡುತ್ತದೆ.ಆದರೆ,ದೇಹದಲ್ಲಿ ಇದರ ಪ್ರಮಾಣ ಹೆಚ್ಚಾದಾಗ ಅನೇಕ ಆರೋಗ್ಯ ಸಮಸ್ಯೆಗಳೂ ಬರಲಾರಂಭಿಸುತ್ತವೆ.ಕೆಟ್ಟ ಜೀವನಶೈಲಿಯ ಪರಿಣಾಮವಾಗಿಯೇ ಕೊಲೆಸ್ಟ್ರಾಲ್ ಮಟ್ಟ ಕೂಡಾ ಹೆಚ್ಚಾಗುತ್ತದೆ. ಆದರೆ, ಔಷಧಿಗಳನ್ನು ತೆಗೆದುಕೊಳ್ಳುವ ಮೂಲಕ ಅದನ್ನು ನಿಯಂತ್ರಿಸಬಹುದು.ಈ ಔಷಧಿಯನ್ನು ಒಂದು ದಿನವೂ ಬಿಡುವಂತಿಲ್ಲ. ಆದರೆ ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸುವ ಮೂಲಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.


COMMERCIAL BREAK
SCROLL TO CONTINUE READING

ಕರಿಬೇವಿನ ಎಲೆಗಳು : 
ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕರಿಬೇವಿನ ಎಲೆಗಳು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಇದು ಅವಶ್ಯಕವಾಗಿದೆ. ಪ್ರತಿದಿನ 8-10 ಎಲೆಗಳನ್ನು ಅಡುಗೆಯಲ್ಲಿ ಬಳಸಬಹುದು.ಈ ಎಲೆಗಳ ಜ್ಯೂಸ್ ಅನ್ನು ಕೂಡಾ ತಯಾರಿಸಿ ಕುಡಿಯಬಹುದು.


ಇದನ್ನೂ ಓದಿ : ಒಂದೇ ವಾರದಲ್ಲಿ ಗಂಟು ಗಂಟುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿ ಬಿಡುತ್ತದೆ !ಪುದಿನಾವನ್ನು ಈ ರೀತಿ ಬಳಸಿ ನೋಡಿ!


ಕೊತ್ತಂಬರಿ ಸೊಪ್ಪು : 
ಪ್ರತಿ ಮನೆಯಲ್ಲೂ ಅಡುಗೆಗೆ ಕೊತ್ತಂಬರಿ ಸೊಪ್ಪನ್ನು ಬಳಸುತ್ತಾರೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸಲು ಕೂಡಾ ಸಹಾಯ ಮಾಡುತ್ತದೆ.ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿವಾರಿಸಬಹುದು. ಕೊತ್ತಂಬರಿ ಸೊಪ್ಪನ್ನು ಸಲಾಡ್‌ಗೆ ಸೇರಿಸಿ ಅಥವಾ ಚಟ್ನಿ ಮಾಡಿ ತಿನ್ನಬಹುದು.


ಮೆಂತ್ಯೆ ಸೊಪ್ಪು :
ಮೆಂತ್ಯೆ ಸೊಪ್ಪಿನಲ್ಲಿರುವ ಔಷಧೀಯ ಗುಣಗಳು ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿ ನೀರಾಗಿಸುವ ಶಕ್ತಿ ಮೆಂತ್ಯೆ ಸೊಪ್ಪಿಗೆ ಇದೆ ಎನ್ನಲಾಗುತ್ತದೆ. ಮೆಂತ್ಯೆ ಸೊಪ್ಪನ್ನು ಸಾಮಾನ್ಯ ತರಕಾರಿಯಂತೆ ಸೇವಿಸಬಹುದು. 


ಇದನ್ನೂ ಓದಿ : ನಿತ್ಯ ಲವಂಗದ ನೀರು ಕುಡಿದರೆ ಈ ಎಲ್ಲಾ ಸಮಸ್ಯೆಗಳು ಶಾಶ್ವತವಾಗಿ ದೂರವಾಗುವುದು!


ತುಳಸಿ :
ತುಳಸಿ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯಗೊಳಿಸುವಲ್ಲಿ ಬಹಳ ಪ್ರಯೋಜನಕಾರಿ.ಅದರಲ್ಲಿರುವ ಗುಣಲಕ್ಷಣಗಳು ಚಯಾಪಚಯ ದರವನ್ನು ಹೆಚ್ಚಿಸುತ್ತದೆ. ಇದು ದೇಹದ ತೂಕ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುತ್ತದೆ.ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸಬಹುದು.ಇದಕ್ಕಾಗಿ,5-6 ಎಲೆಗಳನ್ನು ಚೆನ್ನಾಗಿ ತೊಳೆದು ಹಾಗೆಯೇ ಅಗಿದು ತಿನ್ನಬಹುದು.ಅಥವಾ ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ಆ  ನೀರನ್ನು ಸೇವಿಸಬಹುದು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.