ಚಳಿಗಾಲದಲ್ಲಿ ಹಸಿ ಬಟಾಣಿ ಸೇವಿಸಿದರೆ ಈ ಆರೋಗ್ಯ ಸಮಸ್ಯೆ ಕಾಡುವುದೇ ಇಲ್ಲ

Benefits of Eating Green Peas In Winter: ಚಳಿಗಾಲದಲ್ಲಿ ತಾಜಾ ಹಸಿರು ಬಟಾಣಿಗಳನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಸಿಗುವ  ಪ್ರಯೋಜನಗಳೇನು ಎನ್ನುವ ಮಾಹಿತಿ ಇಲ್ಲಿದೆ.   

Written by - Ranjitha R K | Last Updated : Nov 3, 2023, 12:49 PM IST
  • ಚಳಿಗಾಲದಲ್ಲಿ ಹಸಿ ಬಟಾಣಿ ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆ ಪ್ರವೇಶಿಸುತ್ತದೆ
  • ಹಸಿರು ಬಟಾಣಿ ತಿನ್ನುವ ಅದ್ಭುತ ಪ್ರಯೋಜನಗಳು
  • ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಲಾಭಗಳು ಇವು
ಚಳಿಗಾಲದಲ್ಲಿ ಹಸಿ ಬಟಾಣಿ ಸೇವಿಸಿದರೆ ಈ ಆರೋಗ್ಯ ಸಮಸ್ಯೆ ಕಾಡುವುದೇ ಇಲ್ಲ

Benefits of Eating Green Peas In Winter : ಚಳಿಗಾಲದಲ್ಲಿ ಹಸಿ ಬಟಾಣಿ ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆ ಪ್ರವೇಶಿಸುತ್ತದೆ. ಆದರೆ ವರ್ಷವಿಡೀ ಫ್ರೋಜನ್ ಮತ್ತು ಒಣ ರೂಪದಲ್ಲಿ ಬಟಾಣಿ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಆದರೆ ಫ್ರೋಜನ್ ಬಟಾಣಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದ್ದರಿಂದ ತಾಜಾ ಹಸಿರು ಬಟಾಣಿಗಳನ್ನು ಮಾತ್ರ ತಿನ್ನುವಂತೆ ಸಲಹೆ ನೀಡಲಾಗುತ್ತದೆ. ಚಳಿಗಾಲದಲ್ಲಿ ತಾಜಾ ಹಸಿರು ಬಟಾಣಿಗಳನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು  ಎನ್ನುವ ಮಾಹಿತಿ ಇಲ್ಲಿದೆ. 

Add Zee News as a Preferred Source

ಹಸಿರು ಬಟಾಣಿ ತಿನ್ನುವ ಅದ್ಭುತ ಪ್ರಯೋಜನಗಳು : 
1. ಪ್ರೋಟೀನ್‌ನ ಸಮೃದ್ಧ ಮೂಲ :

ಹಸಿರು ಬಟಾಣಿಯಲ್ಲಿ ಪ್ರೋಟೀನ್ ಹೇರಳವಾಗಿರುತ್ತದೆ. ಹಸಿ ಬಟಾಣಿಯನ್ನು  ನಿಯಮಿತವಾಗಿ ಸೇವಿಸಿದರೆ ಮೂಳೆಗಳು ಮತ್ತು ಸ್ನಾಯುಗಳು ಬಲಗೊಳ್ಳುತ್ತವೆ. ಇದಲ್ಲದೆ, ಇದು ಮಕ್ಕಳ ದೇಹದ ಬೆಳವಣಿಗೆಗೆ ತುಂಬಾ ಸಹಕಾರಿಯಾಗಿದೆ. 

ಇದನ್ನೂ ಓದಿ : High Cholesterol: ಕೇವಲ ಒಂದೇ ಒಂದು ವಾರದಲ್ಲಿ ಹೈ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ ಈ 4 ತರಕಾರಿ

2. ಫೈಬರ್‌ನಲ್ಲಿ ಸಮೃದ್ಧವಾಗಿದೆ:
ಹಸಿರು ಬಟಾಣಿಗಳನ್ನು ಫೈಬರ್‌ನ  ಸಮೃದ್ದ ಮೂಲವಾಗಿದೆ. ಇದನ್ನು ತಿನ್ನುವುದರಿಂದ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದು ಅತಿಯಾಗಿ ತಿನ್ನುವುದನ್ನು ತಪ್ಪಿಸುತ್ತದೆ. ಈ ಮೂಲಕ ಕ್ರಮೇಣ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಪರಿಪೂರ್ಣ ಆಹಾರವಾಗಿದೆ.

3. ಮಧುಮೇಹದಲ್ಲಿ ಪರಿಣಾಮಕಾರಿ :
ಹಸಿರು ಬಟಾಣಿಗಳು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ.  ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ,  ರಕ್ತದಲ್ಲಿನ ಸಕ್ಕರೆ ಮಟ್ಟ ಏರುವುದನ್ನು ತಡೆಯುತ್ತದೆ.   ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೈಬರ್ ಇದ್ದು ಕಾರ್ಬೋಹೈಡ್ರೇಟ್‌ಗಳ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಹಸಿರು ಬಟಾಣಿ ಅತ್ಯುತ್ತಮ ಆಹಾರವಾಗಿದೆ. 

ಇದನ್ನೂ ಓದಿ : ಮನೆಯಲ್ಲಿಯೇ ಈ ತರಕಾರಿಯ ಸೂಪ್ ತಯಾರಿಸಿ ಸೇವಿಸಿ, ವಾರದಲ್ಲಿ ಇಳಿಕೆಯಾಗುತ್ತೆ ತೂಕ!

4. ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:
ಹಸಿರು ಬಟಾಣಿಯಲ್ಲಿ ಅನೇಕ ಖನಿಜಗಳು ಕಂಡುಬರುತ್ತವೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಉದಾಹರಣೆಗೆ ಹಸಿರು ಬಟಾಣಿಯಲ್ಲಿ  ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಕಂಡು ಬರುತ್ತದೆ. ಈ ಎಲ್ಲಾ ಪೋಷಕಾಂಶಗಳು ರಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡಲು ಸಹಾಯ ಮಾಡುತ್ತದೆ. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ರಕ್ತನಾಳಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

 (ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News