constipation home remedies: ಮಲಬದ್ಧತೆ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡುತ್ತಿದೆ. ಇಂದಿನ ಬಿಡುವಿಲ್ಲದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದ, ಅನೇಕ ಜನರು ಮಲಬದ್ಧತೆಯಿಂದ ಬಳಲುತ್ತಿದ್ದಾರೆ. ಮಲವಿಸರ್ಜನೆಯ ಸಮಯದಲ್ಲಿ ತೀವ್ರವಾದ ನೋವು ಮತ್ತು ಅಸ್ವಸ್ಥತೆ ಇದ್ದರೆ, ಅದನ್ನು ಮಲಬದ್ಧತೆ ಎನ್ನುತ್ತಾರೆ.
ಮಲಬದ್ಧತೆಯ ಸಮಸ್ಯೆ ಇದ್ದರೆ ಫ್ರೀ ಮೋಷನ್ ಬರುವುದಿಲ್ಲ. ಈ ಸಮಸ್ಯಯಿಂದ ಬಳಲುತ್ತಿರುವವರು, ವಾರಕ್ಕೆ ಒಂದು ಅಥವಾ ಎರಡು ಬಾರಿ ಮಾತ್ರ ಮಲವಿಸರ್ಜನೆ ಮಾಡುತ್ತಾರೆ, ಮಲವನ್ನು ಹಾದುಹೋಗುವಾಗ ತೀವ್ರವಾದ ನೋವನ್ನು ಅನುಭವಿಸುತ್ತಾರೆ. ನಿಮ್ಮ ದಿನನಿತ್ಯದ ಆಹಾರದಲ್ಲಿ ಕೆಲವು ರೀತಿಯ ಫೈಬರ್ ಭರಿತ ಆಹಾರಗಳನ್ನು ಸೇರಿಸಿದರೆ, ನೀವು ಈ ಸಮಸ್ಯೆಯಿಂದ ಪರಿಹಾರವನ್ನು ಪಡೆಯಬಹುದು.
ಮಲಬದ್ಧತೆ ಕೆಲವರಿಗೆ ದೀರ್ಘಕಾಲದ ಸಮಸ್ಯೆಯಾಗಿದೆ. ಮಲಬದ್ಧತೆಯಿಂದ ಬಳಲುತ್ತಿರುವವರಿಗೆ ಮಜ್ಜಿಗೆ ಸೂಪರ್ ಫುಡ್ ಎನ್ನುತ್ತಾರೆ ತಜ್ಞರು. ಮಜ್ಜಿಗೆಯೊಂದಿಗೆ ಕೆಲವು ಪದಾರ್ಥಗಳನ್ನು ಬೆರೆಸಿ ಕುಡಿಯುವುದರಿಂದ, ಮಲಬದ್ಧತೆ ನಿವಾರಣೆಯಾಗುತ್ತದೆ. ಇವುಗಳಲ್ಲಿರುವ ಆಯುರ್ವೇದ ಗುಣಗಳು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ನೀಡಲು ಸಹಾಯ ಮಾಡುತ್ತದೆ.
ದೀರ್ಘಕಾಲದ ಮಲಬದ್ಧತೆ ದೇಹದಲ್ಲಿ ಇತರ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಮಲಬದ್ಧತೆ ಸಮಸ್ಯೆ ಕ್ರಮೇಣ ಪೈಲ್ಸ್ಗೆ ಕಾರಣವಾಗುತ್ತದೆ. ಇದನ್ನು ತಪ್ಪಿಸಲು ನಿಮ್ಮ ಆಹಾರದಲ್ಲಿ ಮಜ್ಜಿಗೆಯನ್ನು ಸೇರಿಸುವುದು ಉತ್ತಮ. ಬರೀ ಮಜ್ಜಿಗೆ ಸೇವಿಸುವುದರ ಬದಲಿಗೆ ಜೀರಿಗೆ ಮತ್ತು ಕಲ್ಲು ಉಪ್ಪು ಬೆರೆಸಿ ಕುಡಿಯಿರಿ. ಇದು ಕುಡಿಯುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.
ಮಲಬದ್ಧತೆಯ ಕಾರಣಗಳನ್ನು ಗುರುತಿಸುವುದು ತುಂಬಾ ಕಷ್ಟ. ಸಾಮಾನ್ಯವಾಗಿ ನಾವು ಆಹಾರದಲ್ಲಿ ಮಾಡುವ ತಪ್ಪುಗಳಿಂದ ಮಲಬದ್ಧತೆಯ ಸಮಸ್ಯೆ ಉಂಟಾಗಬಹುದು. ಜಂಕ್ ಫುಡ್ ಮತ್ತು ಸಂಸ್ಕರಿಸಿದ ಆಹಾರದಂತಹ ಆಹಾರ ಸೇವಿಸುವುದರಿಂದ ಈ ಸಮಸ್ಯೆಯನ್ನು ಎದುರಿಸುವ ಸಾಧ್ಯತೆ ಹೆಚ್ಚು. ಬರ್ಗರ್ ಮತ್ತು ಪಿಜ್ಜಾ ತಿಂದ ಮರುದಿನವೇ ಅನೇಕ ಜನರು ಮಲಬದ್ಧತೆಯ ಸಮಸ್ಯೆಯನ್ನು ಎದುರಿಸುತ್ತಾರೆ ಎಂದು ತಜ್ಞರು ಹೇಳುತ್ತಾರೆ.
ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳಂತಹ ಸಾಕಷ್ಟು ಫೈಬರ್-ಭರಿತ ಆಹಾರಗಳನ್ನು ಸೇವಿಸದಿರುವುದು ಮಲಬದ್ದತೆಗೆ ಮತ್ತೊಂದು ಕಾರಣ ಎನ್ನುತ್ತಾರೆ ತಜ್ಞರು. ಮಜ್ಜಿಗೆ ಮಲಬದ್ಧತೆಗೆ ತುಂಬಾ ಒಳ್ಳೆಯದು, ಮಜ್ಜಿಗೆಯಲ್ಲಿ ಜೀರಿಗೆ, ಕಲ್ಲು ಉಪ್ಪು ಮತ್ತು ಕೊತ್ತಂಬರಿ ಸೊಪ್ಪನ್ನು ಬೆರಸಿ ಕುಡಿಯುವುದರಿಂದ ಈ ಸಮಸ್ಯೆಗೆ ಇದು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಮಜ್ಜಿಗೆಗೆ ಜೀರಿಗೆ ಮತ್ತು ಕಲ್ಲು ಉಪ್ಪನ್ನು ಸೇರಿಸಿ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮಗೊಳ್ಳುತ್ತದೆ. ಫೈಬರ್ ಸಮೃದ್ಧವಾಗಿರುವ ಆಹಾರಗಳು ನಮ್ಮ ಕರುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸಲು, ಹೆಚ್ಚಿನ ತರಕಾರಿಗಳು, ಹಣ್ಣುಗಳು ಮತ್ತು ಧಾನ್ಯಗಳನ್ನು ಆಹಾರದಲ್ಲಿ ಸೇರಿಸಿ.
ಮಜ್ಜಿಗೆ ಪ್ರೋಬಯಾಟಿಕ್ಸ್ಗಳನ್ನು ಒಳಗೊಂಡಿದೆ, ಇದು ಹೊಟ್ಟೆಯಲ್ಲಿ ಬ್ಯಾಕ್ಟೀರಿಯಾದ ಸಮತೋಲನವನ್ನು ಕಾಪಾಡಲು ಸಹಾಯ ಮಾಡುವ ಮೂಲಕ ಹೊಟ್ಟೆಯನ್ನು ತಂಪಾಗಿಸುತ್ತದೆ. ಕರುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಜೀರಿಗೆಯಲ್ಲಿರುವ ಉರಿಯೂತ ನಿವಾರಕ ಗುಣಗಳು ಗ್ಯಾಸ್ ಮತ್ತು ಅಸಿಡಿಟಿಯಿಂದ ಉಪಶಮನ ನೀಡುತ್ತದೆ. ಇದು ಜೀರ್ಣಕಾರಿ ಕಿಣ್ವಗಳನ್ನು ನಿಯಂತ್ರಿಸುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.