Banana Ghee health benefits : ಬಾಳೆಹಣ್ಣು ಮತ್ತು ತುಪ್ಪವು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಪದಾರ್ಥಗಳಾಗಿವೆ. ಇವೆರಡೂ ದೇಹಕ್ಕೆ ಬೇಕಾದ ಎಲ್ಲಾ ಪೋಷಕಾಂಶಗಳನ್ನು ನೀಡುತ್ತವೆ. ಇದನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆ ನಿವಾರಣೆಯಾಗುತ್ತದೆ. ಬಾಳೆಹಣ್ಣಿನಲ್ಲಿ ವಿಟಮಿನ್ ಸಿ, ಬಿ-6, ಉತ್ಕರ್ಷಣ ನಿರೋಧಕಗಳು, ಪೊಟ್ಯಾಸಿಯಮ್ ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿವೆ. 


COMMERCIAL BREAK
SCROLL TO CONTINUE READING

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಪ್ಪ ತುಂಬಾ ಉಪಯುಕ್ತವಾಗಿದೆ. ಇದು ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಆಂಟಿಆಕ್ಸಿಡೆಂಟ್ ಗುಣಗಳಿಂದ ಸಮೃದ್ಧವಾಗಿದೆ. ಇದನ್ನು ಬಳಸುವುದರಿಂದ ವೈರಸ್, ಜ್ವರ, ಕೆಮ್ಮು ಮತ್ತು ಶೀತದಿಂದ ರಕ್ಷಿಸುತ್ತದೆ. ಇವೆರಡನ್ನು ಒಟ್ಟಿಗೆ ತಿಂದರೆ ಆಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿಯೋಣ.


ಇದನ್ನೂ ಓದಿ: ಇಂಟರ್‌ನೆಟ್‌ನಲ್ಲಿ ಸಖತ್‌ ಸದ್ದು ಮಾಡುತ್ತಿವೆʼಸೋಫಿಯಾʼ ಹಾಟ್ ಫೋಟೋಸ್‌..!


1. ಬಾಳೆ ಹಣ್ಣಿನಲ್ಲಿ ಫೈಬರ್, ಪ್ರೋಟೀನ್ ಮತ್ತು ವಿಟಮಿನ್‌ಗಳು ಹೆಚ್ಚು. ಇದು ಒತ್ತಡ ಮತ್ತು ಆತಂಕದಂತಹ ಸಮಸ್ಯೆಗಳಿಂದ ದೂರವಿಡುತ್ತದೆ. ಇದನ್ನು ತುಪ್ಪದೊಂದಿಗೆ ಸೇವಿಸುವುದರಿಂದ ದೇಹದಲ್ಲಿರುವ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. 


2. ಬಾಳೆಹಣ್ಣು ಮತ್ತು ತುಪ್ಪವನ್ನು ಒಟ್ಟಿಗೆ ತಿನ್ನುವುದರಿಂದ ಜೀರ್ಣಕ್ರಿಯೆಯ ತೊಂದರೆ ಕಡಿಮೆಯಾಗುತ್ತದೆ. ಗ್ಯಾಸ್, ಮಲಬದ್ಧತೆ, ಅಸಿಡಿಟಿಯನ್ನೂ ಕಡಿಮೆ ಮಾಡುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.


3. ಬಾಳೆಹಣ್ಣು ಮತ್ತು ತುಪ್ಪ ಕೂಡ ಚರ್ಮಕ್ಕೆ ತುಂಬಾ ಒಳ್ಳೆಯದು. ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. 


4. ಬೇಗ ತೂಕ ಹೆಚ್ಚಾಗಲು ಬಾಳೆಹಣ್ಣು ಮತ್ತು ತುಪ್ಪವನ್ನು ಒಟ್ಟಿಗೆ ತೆಗೆದುಕೊಳ್ಳಬೇಕು. ಇದು ಆರೋಗ್ಯಕರ ರೀತಿಯಲ್ಲಿ ತೂಕವನ್ನು ಹೆಚ್ಚಿಸುತ್ತದೆ. 


5. ಸ್ನಾಯುಗಳು ಗಟ್ಟಿಯಾಗಲು ತುಪ್ಪ ಮತ್ತು ಬಾಳೆಹಣ್ಣನ್ನು ಒಟ್ಟಿಗೆ ಸೇವಿಸುವುದು ತುಂಬಾ ಒಳ್ಳೆಯದರು.


6. ಬಾಳೆ ಹಣ್ಣು ಮತ್ತು ತುಪ್ಪ ಪುರುಷರಿಗೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ. 


7. ತುಪ್ಪ ಮತ್ತು ಬಾಳೆಹಣ್ಣು ಸೇವಿಸುವುದರಿಂದ ಮಕ್ಕಳಾಗುವ ಸಾಧ್ಯತೆ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. 


ಹೀಗೆ ತಿನ್ನಿ: ಮೊದಲು ಬಾಳೆಹಣ್ಣು ಮತ್ತು ತುಪ್ಪವನ್ನು ತೆಗೆದುಕೊಳ್ಳಿ. ಒಂದು ಪಾತ್ರೆಯಲ್ಲಿ ಎರಡು ಚಮಚ ತುಪ್ಪ ಹಾಕಿ. ನಂತರ ಎರಡು ಬಾಳೆಹಣ್ಣುಗಳನ್ನು ತೆಗೆದುಕೊಂಡು ಅವುಗಳನ್ನು ಮ್ಯಾಶ್ ಮಾಡಿ ಚೆನ್ನಾಗಿ ಮಿಶ್ರಣ ಮಾಡಿ. ಇದಕ್ಕೆ ತುಪ್ಪವನ್ನು ಸೇರಿಸಿ ನಿತ್ಯವೂ ತಿನ್ನುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.